Subscribe to Updates
Get the latest creative news from FooBar about art, design and business.
Author: roovari
ಉಡುಪಿ : ನಾಟ್ಯಶ್ರೀ ಭರತನಾಟ್ಯ ಕಲಾ ಶಾಲೆ ಬೆಂಗಳೂರು ಇದರ ಗುರು ಸುಮಾ ನಾಗೇಶ್ ರವರ ಶಿಷ್ಯವೃಂದದವರಿಂದ ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ದಿನಾಂಕ 29 ನವೆಂಬರ್ 2024ರಂದು ಭರತನಾಟ್ಯ ಕಾರ್ಯಕ್ರಮ ನಡೆಯಿತು. ವಿದುಷಿ ಮಾಧುರಿ ಅಚಲ್, ಉಮಾ ಮಹೇಶ್ವರಿ, ವಿದ್ವಾನ್ ಈಶ್ವರ್ ಐಯ್ಯರ್, ಕುಮಾರಿ ಮನಸ್ವಿನಿ ಎಸ್., ಕುಮಾರಿ ಮೇಘನ ಡಿ., ಕುಮಾರಿ ಶ್ರೇಯಾ ಭಟ್, ಕುಮಾರಿ ಶ್ರಾವ್ಯಾ ಭಟ್, ಸೌಜನ್ಯ ಎಸ್.ಆರ್. ತಮ್ಮ ಅಮೋಘ ಅಭಿನಯದ ಭರತ ನೃತ್ಯದಿಂದ ಪೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾದರು.
ಒಡಿಯೂರು : ಶ್ರೀ ಆಂಜನೇಯ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇದರ ಆಂಜನೇಯ 56 ಹಾಗೂ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ‘ವಿಂಶತಿ’ ಕಾರ್ಯಕ್ರಮದ ಪ್ರಯುಕ್ತ ದಿನಾಂಕ 25 ಡಿಸೆಂಬರ್ 2024ರಂದು ದಿನಪೂರ್ತಿ ಪುತ್ತೂರು ನಟರಾಜ ವೇದಿಕೆಯಲ್ಲಿ ನಡೆಯಲಿರುವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ದಿನಾಂಕ 29 ನವೆಂಬರ್ 2024ರಂದು ಕನ್ಯಾನ ಸಮೀಪದ ಒಡಿಯೂರಿನಲ್ಲಿ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಬಿಡುಗಡೆಗೊಳಿಸಿ ಶುಭಹಾರೈಸಿದರು. ಸಂಘ ಅಧ್ಯಕ್ಷ ಭಾಸ್ಕರ್ ಬಾರ್ಯ, ಮಹಿಳಾ ಯಕ್ಷಗಾನ ಸಂಘದ ಅಧ್ಯಕ್ಷ ಪ್ರೇಮಲತಾ ಟಿ. ರಾವ್, ಗೌರವ ಕಾರ್ಯದರ್ಶಿ ಟಿ. ರಂಗನಾಥ ರಾವ್, ಕಾರ್ಯದರ್ಶಿ ಹರಿಣಾಕ್ಷಿ ಜೆ. ಶೆಟ್ಟಿ ಹಾಗೂ ಉಪಾಧ್ಯಕ್ಷ ಶುಭಾ ಜೆ.ಸಿ. ಅಡಿಗ ಉಪಸ್ಥಿತರಿದ್ದರು.
ಧಾರವಾಡ : ಬೆಂಗಳೂರಿನ ಅಖಿಲ ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ವತಿಯಿಂದ ಬೆಳಗಾವಿಯ ಮಲ್ಲಿಕಾರ್ಜುನ ಗ. ಭೃಂಗಿಮಠ ಸರ್ವಾಧ್ಯಕ್ಷತೆಯಲ್ಲಿ ಧಾರವಾಡದ ಸೃಜನಾ ರಂಗಮಂದಿರದಲ್ಲಿ ದಿನಾಂಕ 24 ನವೆಂಬರ್ 2024ರಂದು ಪ್ರಥಮ ರಾಜ್ಯಮಟ್ಟದ ಕವಿಪೀಠ ಮಹಾಸಮ್ಮೇಳನ ಕನ್ನಡ ರಾಜ್ಯೋತ್ಸವ ನುಡಿ ಸಂಭ್ರಮ 2024 ರಾಜ್ಯಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಸಮ್ಮೇಳನವನ್ನು ಉದ್ಘಾಟಿಸಿದ ಕ್ಲಾಸಿಕ್ ಸಮೂಹ ಸಂಸ್ಥೆಗಳ ನಿರ್ದೇಶಕ ಲಕ್ಷ್ಮಣ ಎಸ್. ಉಪ್ಪಾರ ಮಾತನಾಡಿ “ಕನ್ನಡ ನಾಡು, ನುಡಿ, ನೆಲ-ಜಲ, ಭಾಷೆ ಸಾಹಿತ್ಯ ಸಂಸ್ಕೃತಿ ಕಲೆಗಳು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿ. ಇದು ನಮಗೆ ಹೆಮ್ಮೆಯ ವಿಷಯ. ಇಂತಹ ಕಾರ್ಯಕ್ರಮಗಳು ಆಗಾಗ ನಡೆಯಬೇಕು” ಎಂದರು. ಅತಿಥಿಯಾಗಿದ್ದ ಬಸವರಾಜ ಗುರಿಕಾರ ಮಾತನಾಡಿ “ಶಿಕ್ಷಕರು ಸಮಾಜ ತಿದ್ದುವ ಕೆಲಸ ಮಾಡುತ್ತಾ ನಾಡು-ನುಡಿ ದೇಶ ಸೇವೆ ಮಾಡಬೇಕು” ಎಂದರು. ಮುಂಡಗೋಡ ಟಿಬೆಟಿಯನ್ ಕ್ಯಾಂಪ್ ನ ಜಂಪಾ ಲಾಮಾ ಗುರುಜಿ ಸಾನಿಧ್ಯ ವಹಿಸಿದ್ದರು. ಅಖಿಲ ಕರ್ನಾಟಕ ಸಾಂಸ್ಕೃತಿಕ ಪರಿಷತ್ತಿನ ಸಂಸ್ಥಾಪಕ ರಾಜ್ಯಾಧ್ಯಕ್ಷ ಮನೋಹರ ನಾಯಕ ಅಧ್ಯಕ್ಷತೆ…
‘ಎಸ್.ಯು. ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ’ಗೆ ತುಳು ಕಾದಂಬರಿಗಳ ಹಸ್ತಪ್ರತಿ ಆಹ್ವಾನ | ಕೊನೆಯ ದಿನಾಂಕ ಡಿಸೆಂಬರ್ 15
ಉಡುಪಿ : ಉಡುಪಿ ತುಳುಕೂಟದ ಆಶ್ರಯದಲ್ಲಿ ನಡೆಯುವ ಎಸ್.ಯು. ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ ಆಯ್ಕೆಗಾಗಿ ತುಳು ಕಾದಂಬರಿಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ತುಳು ಭಾಷೆಯಲ್ಲಿ ಉತ್ತಮ ಕಾದಂಬರಿಗಳು ಪ್ರಕಟಗೊಳ್ಳಬೇಕು ಎಂಬ ಆಶ್ರಯದಿಂದ ತುಳು ಚಳವಳಿಯ ಪ್ರವರ್ತಕ ದಿ. ಎಸ್.ಯು. ಪಣಿಯಾಡಿ ಇವರ ನೆನಪಿನಲ್ಲಿ ನೀಡುವ ಈ ಪ್ರಶಸ್ತಿಗೆ ಈ ಕೆಳಗಿನ ನಿಬಂಧನೆಗೊಳಪಟ್ಟ ಹಸ್ತಪ್ರತಿಗಳನ್ನು ಸ್ವೀಕರಿಸಲಾಗುವುದು. ಹಸ್ತಪ್ರತಿಗಳು ತುಳು ಕಾದಂಬರಿಗಳಾಗಿರಬೇಕು. ಅದು ಈವರೆಗೆ ಯಾವುದೇ ಬಹುಮಾನಕ್ಕೆ ಆಯ್ಕೆಯಾಗಿರಬಾರದು. ಇದುವರೆಗೆ ಎಲ್ಲೂ ಮುದ್ರಿತವಾಗಿರಬಾರದು. ಆಯ್ಕೆಯಾದರೆ ಮುದ್ರಿಸುವಾಗ ಕ್ರೌನ್ 1/8 ಆಕಾರದಲ್ಲಿ 120 ಪುಟಗಳನ್ನು ಮೀರದಷ್ಟು ದೀರ್ಘವಾಗಿರಬೇಕು. ಹಸ್ತಪ್ರತಿಗಳು ಸುಂದರವಾದ ಕೈಬರಹ, ಬೆರಳಚ್ಚು ಅಥವಾ ಕಂಪ್ಯೂಟರ್ ಮುದ್ರಿತ (ಡಿಟಿಪಿ) ರೂಪದಲ್ಲಿರಬಹುದು. ಕಾದಂಬರಿಯು ತುಳುನಾಡಿನ ಭೌಗೋಳಿಕ ಚಿತ್ರಣ, ತುಳು ಸಂಸ್ಕೃತಿಯನ್ನು ಬಿಂಬಿಸುವ ಅಂಶಗಳಿಂದ ಕೂಡಿದ್ದು, ಪೌರಾಣಿಕ, ಐತಿಹಾಸಿಕ, ಜಾನಪದ, ಸಾಮಾಜಿಕ ವಸ್ತುವನ್ನು ಆಧರಿಸಿರಬಹುದು. ಪ್ರಶಸ್ತಿ ರೂ.8,000/- ಮೊತ್ತ ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿದ್ದು, ಹಸ್ತಪ್ರತಿಯನ್ನು ದಿನಾಂಕ 15 ಡಿಸೆಂಬರ್ 2024ರೊಳಗೆ ಪಣಿಯಾಡಿ ತುಳು ಕಾದಂಬರಿ ಸ್ಪರ್ಧೆಯ ಸಂಚಾಲಕಿ -…
ಮಡಿಕೇರಿ : ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ ಹಾಗೂ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಆಯೋಜಿತ ‘ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಸ್ಪರ್ಧೆ’ಯು ದಿನಾಂಕ 30 ನವೆಂಬರ್ 2024ರಂದು ನಡೆಯಿತು. ಈ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿ ಉದ್ಘಾಟಿಸಿದ ಮಡಿಕೇರಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ದೊಡ್ಡೇಗೌಡ ಇವರು ಮಾತನಾಡಿ “ಇಂಗ್ಲೀಷ್’ನ್ನು ಒಂದು ಭಾಷೆಯಾಗಿ ಪ್ರಾಥಮಿಕ ಹಂತದಿಂದಲೇ ಮಕ್ಕಳಿಗೆ ಕಲಿಸುವುದರ ಜೊತೆ ಜೊತೆಯಲ್ಲಿ, ಅತ್ಯಂತ ಸಂಪದ್ಭರಿತವಾದ ಕನ್ನಡ ಭಾಷೆಯತ್ತ ಅವರಲ್ಲಿ ಆಸಕ್ತಿಯನ್ನು ಮೂಡಿಸುವ ಮೂಲಕ ಕನ್ನಡ ಭಾಷಾ ಸಂಸ್ಕೃತಿಯನ್ನು ಸಂರಕ್ಷಿಸುವ ಕಾರ್ಯ ನಡೆಯಬೇಕಾಗಿದೆ. ಮಕ್ಕಳಲ್ಲಿ ಒಂದು ಭಾಷೆಯಾಗಿ ಇಂಗ್ಲೀಷ್ ಕಲಿಸುವ ಹಂತದಲ್ಲೆ, ಕನ್ನಡ ಭಾಷೆಯ ಆಳವಾದ ಜ್ಞಾನವನ್ನು ಹೊಂದಿರುವ ಶಿಕ್ಷಕ ವರ್ಗದ ಮೂಲಕ, ಮಕ್ಕಳಲ್ಲಿ ಕನ್ನಡ ಭಾಷಾ ಸಂಸ್ಕೃತಿಯತ್ತ ಒಲವು ಮೂಡಿಸುವ ಪ್ರಯತ್ನ ಅತ್ಯವಶ್ಯವಾಗಿ ನಡೆಯಬೇಕು. ಕನ್ನಡದ ಮೌಲ್ಯ ಮತ್ತು ಬದುಕು ಅತ್ಯಂತ ದೊಡ್ಡದಾಗಿದ್ದು, ಇದನ್ನರಿತು ಕನ್ನಡಿಗರಾದ…
ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ ಉಡುಪಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಯಕ್ಷಗಾನ ಕಲಾರಂಗ (ರಿ.) ಉಡುಪಿ ಮತ್ತು ಯಕ್ಷಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇವರ ವತಿಯಿಂದ ದಿನಾಂಕ 30 ನವೆಂಬರ್ 2024ರಿಂದ 14 ಡಿಸೆಂಬರ್ 2024ರವರೆಗೆ ಉಡುಪಿ ಆಸುಪಾಸಿನ 27 ಪ್ರೌಢಶಾಲೆಗಳ ವಿದ್ಯಾರ್ಥಿಗಳಿಂದ ಪ್ರದರ್ಶನಗೊಳ್ಳಲಿರುವ ‘ಕಿಶೋರ ಯಕ್ಷಗಾನ ಸಂಭ್ರಮ – 2024’ವು ದಿನಾಂಕ 30 ನವೆಂಬರ್ 2024ರಂದು ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಾತನಾಡಿ “ವಿಶ್ವದಾದ್ಯಂತ ಸಾವಿರಾರು ಮಂದಿ ನಲಿದ, ನರ್ತಿಸಿದ, ಹಾಡಿದ, ಕಲೆಯನ್ನು ಪ್ರದರ್ಶಿಸಿದ ಈ ವೇದಿಕೆಯಲ್ಲಿ ಮಕ್ಕಳು ಕುಣಿದಾಡುವುದು ಕೃಷ್ಣನಿಗೆ ಬಹಳ ಸಂತಸದ ವಿಚಾರ. ಯಕ್ಷಶಿಕ್ಷಣ ಒಂದು ದೇಶಕ್ಕೆ ಮಾದರಿಯಾದಂತಹ ಸಂಸ್ಥೆ. ಈ ಅಭಿಯಾನ ಯಶಸ್ವಿಯಾಗಿ ನಡೆಯಲಿ” ಎಂದು ಹಾರೈಸಿದರು. ಅಂಬಲಪಾಡಿ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ ಬಲ್ಲಾಳ, ಉಡುಪಿ ಮಾಜಿ…
ಕಾಸರಗೋಡು : ವಾಮನ್ ರಾವ್ ಬೇಕಲ್ ಗಡಿನಾಡು ಕಾಸರಗೋಡಿನಲ್ಲಿ ಕನ್ನಡ ನಾಡು, ನುಡಿ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕೈಂಕರ್ಯಗಳನ್ನು ಸಕ್ರಿಯವಾಗಿ ನಡೆಸಿಕೊಂಡು ಬರುತ್ತಿರುವುದು ಗಮನಾರ್ಹ ಹಾಗೂ ಅನುಕರಣೀಯ. 2001ರಲ್ಲಿ ತನ್ನ ಮಾತಾಪಿತರ ನಾಮದೇಯದಲ್ಲಿ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.), ಕನ್ನಡ ಭವನ ಪ್ರಕಾಶನ ಕಾಸರಗೋಡು, ಸುಮಾರು 20,000 ಪುಸ್ತಕಗಳಿರುವ ಕನ್ನಡ ಭವನ ಸಾರ್ವಜನಿಕ ವಾಚನಾಲಯ ಅವರ ನೇತೃತ್ವದಲ್ಲಿ ನಡೆಯುವ ಸಂಸ್ಥೆಗಳು. ಕಾಸರಗೋಡು ಜಿಲ್ಲೆಗೆ ಆಗಮಿಸುವ ಹೊರನಾಡಿನ ಕನ್ನಡ ಸಾಹಿತಿಗಳು, ಸಾಂಸ್ಕೃತಿಕ ಯಾತ್ರಾರ್ಥಿಗಳಿಗೆ ಉಚಿತ ವಸತಿ ವ್ಯವಸ್ಥೆ ಒದಗಿಸುತ್ತಿದೆ. ಕಳೆದ ಎರಡು ದಶಕಗಳ ದೀರ್ಘಕಾಲ ಇಷ್ಟು ಕನ್ನಡಪರ ಸೇವೆ, ಸಾಮಾಜಿಕ ಮತ್ತು ಧಾರ್ಮಿಕ ಸೇವೆಯನ್ನು ಯಾವುದೇ ಸಂಘ, ಸಂಸ್ಥೆ, ಸರಕಾರದಿಂದ ಅನುದಾನ ಪಡೆಯದೆ, ಸ್ವಂತ ಆದಾಯದ ಒಂದಂಶವನ್ನು ಪತ್ನಿ ಸಂಧ್ಯಾರಾಣಿ ಟೀಚರ್, ಪುತ್ರರಾದ ಸನತ್ ಕುಮಾರ್, ಕಾರ್ತಿಕ್ ಕಾಸರಗೋಡು ಇವರ ಸಹಕಾರದಲ್ಲಿ ನೆರವೇರಿಸಿಕೊಂಡು ಬರುತ್ತಿರುವುದು ಉಲ್ಲೇಖನೀಯ. ಈ ಜನಪರ, ಅಪೂರ್ವ ಸಾಧನೆಯನ್ನು ಗಮನಿಸಿ ಎಷ್ಯಾ ಇಂಟರ್ನ್ಯಾಷನಲ್ ಕಲ್ಚರ್…
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಅಲ್ಲಿನ ವಸ್ತು ಪ್ರದರ್ಶನ ಮಂಟಪದಲ್ಲಿ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ವಿಂಶತಿ ಸಂಭ್ರಮದ 15ನೇ ಸರಣಿ ತಾಳಮದ್ದಳೆಯು ಹಟ್ಟಿಯಂಗಡಿ ರಾಮ ಭಟ್ಟ ವಿರಚಿತ ‘ಶರಸೇತು ಬಂಧ’ ಎಂಬ ಆಖ್ಯಾನದೊಂದಿಗೆ ದಿನಾಂಕ 28 ನವೆಂಬರ್ 2024ರಂದು ಜರಗಿತು. ಹಿಮ್ಮೇಳದಲ್ಲಿ ಭಾಗವತರಾಗಿ ಮುರಳೀಕೃಷ್ಣ ಶಾಸ್ತ್ರಿ ತೆಂಕಬೈಲು ಹಾಗೂ ಚೆಂಡೆ, ಮದ್ದಲೆಗಳಲ್ಲಿ ಪಿ.ಟಿ. ಜಯರಾಮ್ ಭಟ್, ಪಿ.ಜಿ. ಜಗನ್ನಿವಾಸ ರಾವ್ ಸಹಕರಿಸಿದರು. ಮುಮ್ಮೇಳದಲ್ಲಿ ಶುಭಾ ಅಡಿಗ (ಹನೂಮಂತ), ಪ್ರೇಮಲತಾ ರಾವ್ (ಶ್ರೀ ರಾಮ), ಕಿಶೋರಿ ದುಗ್ಗಪ್ಪ ನಡುಗಲ್ಲು (ಅರ್ಜುನ), ಹರಿಣಾಕ್ಷಿ ಜೆ. ಶೆಟ್ಟಿ (ವೃದ್ಧ ಬ್ರಾಹ್ಮಣ) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು. ಶ್ರೀ ಭುಜಬಲಿ ಧರ್ಮಸ್ಥಳ ಕಲಾವಿದರನ್ನು ಗೌರವಿಸಿದರು. ಶ್ರೀಕ್ಷೇತ್ರದ ಆಡಳಿತ ಮಂಡಳಿ ಸದಸ್ಯರು ಹಾಗೂ ಸ್ವಯಂ ಸೇವಕರು ಸಹಕರಿಸಿದರು.
ಕುಶಾಲನಗರ : ಕೊಡಗು ವಿಶ್ವವಿದ್ಯಾಲಯ, ಕನ್ನಡ ಜಾನಪದ ಪರಿಷತ್ತು ಬೆಂಗಳೂರು ಹಾಗೂ ಕನ್ನಡ ಜಾನಪದ ಪರಿಷತ್ತು ಕೊಡಗು ಜಿಲ್ಲಾ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ‘ಕನ್ನಡ ಜಾನಪದ ರಾಜ್ಯೋತ್ಸವ ಹಾಗೂ ಗೀತೋತ್ಸವ ಸಮಾರಂಭ’ವು ದಿನಾಂಕ 29 ನವೆಂಬರ್ 2024ರಂದು ಕೊಡಗು ವಿಶ್ವವಿದ್ಯಾಲಯದ ಕಾವೇರಿ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಕೊಡಗಿನ ಪಾರಂಪರಿಕ ಕಲೆಯಾದ ‘ದುಡಿ’ಯನ್ನು ಬಾರಿಸುವ ಮೂಲಕ ಉದ್ಘಾಟಿಸಿದ ಕೊಡಗು ವಿ.ವಿ. ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಇವರು ಮಾತನಾಡಿ “ಮನುಷ್ಯನ ಬದುಕಿನ ಸಾಂಸ್ಕೃತಿಕ, ಸಾಮಾಜಿಕ ಹಾಗೂ ರಾಜಕೀಯ ಇತಿಹಾಸದ ಎಷ್ಟೋ ಸಂಗತಿಗಳನ್ನು ಒಳಗೊಂಡ ಸಮಷ್ಟಿ ಪ್ರಜ್ಞೆಯ ಸೃಷ್ಟಿಯೇ ಜಾನಪದ. ಅದರಲ್ಲಿನ ವಿವೇಕಯುತ ಚಿಂತನೆಗಳು ನಮ್ಮ ನಾಡಿನ ಪರಂಪರೆಯನ್ನು ಶ್ರೀಮಂತಗೊಳಿಸಿವೆ. ಪೂರ್ವಜರು ಜತನದಿಂದ ಸಂರಕ್ಷಿಸಿಕೊಂಡು ಬಂದಿರುವ ಜಾನಪದವನ್ನು ಮುಂದಿನ ಪೀಳಿಗೆಗೆ ಜೋಪಾನವಾಗಿ ಒಯ್ಯಬೇಕಿದೆ. ಜಾನಪದ ಎಂಬುದು ವಾಸ್ತವಿಕ ಆಧಾರಗಳ ಮೇಲೆ ನಿಲ್ಲಬಲ್ಲ ವಿಜ್ಞಾನವಾಗಿದ್ದು, ಕಲೆಯ ಜೊತೆಗೆ ಶಾಸ್ತ್ರೀಯ ಮುಖವನ್ನು ಸಹ ಒಳಗೊಂಡಿದೆ. ಕಲೆಯ ಜೊತೆಗೆ ಶಾಸ್ತ್ರೀಯವಾಗಿರುವ ಜಾನಪದವನ್ನು ನಾವೆಲ್ಲರೂ ಅರಿಯಬೇಕಿದೆ. ಮನುಷ್ಯನ…
ಬೆಂಗಳೂರು : ಕನ್ನಡ ಸಹೃದಯರ ಪ್ರತಿಷ್ಠಾನ (ಕುಮಾರವ್ಯಾಸ ಮಂಟಪ) ಇದರ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಯೋಗದೊಂದಿಗೆ ಕುಮಾರವ್ಯಾಸ ಜಯಂತಿ ಪ್ರಯುಕ್ತ ಹಮ್ಮಿಕೊಂಡಿರುವ ಜಿಲ್ಲಾ ಮಟ್ಟದ ಕವಿ-ಕಾವ್ಯ ಪರಿಚಯ ಭಾಷಣ ಸ್ಪರ್ಧೆಯು ದಿನಾಂಕ 06 ಡಿಸೆಂಬರ್ 2024ರ ಶುಕ್ರವಾರದಂದು ಬೆಂಗಳೂರಿನ ರಾಜಾಜಿನಗರದ ಕನ್ನಡ ಸಹೃದಯರ ಪ್ರತಿಷ್ಠಾನದ ಕುಮಾರವ್ಯಾಸ ಮಂಟಪದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಕನ್ನಡ ಸಹೃದಯರ ಪ್ರತಿಷ್ಠಾನ ಕುಮಾರವ್ಯಾಸ ಮಂಟಪ ಇದರ ಉಪಾಧ್ಯಕ್ಷರಾದ ಡಾ. ವೆಂಕಟೇಶ್ವರುಲು ನಾಯ್ಡು ಭಾಗವಹಿಸಲಿದ್ದಾರೆ.