Subscribe to Updates
Get the latest creative news from FooBar about art, design and business.
Author: roovari
ನೃತ್ಯ ಕಲಾವಿದ/ ಕಲಾವಿದೆಯಾಗಿ ಕಲಾಮಾತೆಯ ಸೇವಾ ಕೈಂಕರ್ಯದಲ್ಲಿ ನಿರಂತರವಾಗಿ ಮುಂದುವರೆದು, ನಟರಾಜನ ದಯೆಗೆ ಪಾತ್ರರಾಗಿ, ಕಲಾ ರಸಿಕರ ಮನದಲ್ಲಿ ಸದಾ ನೆಲೆಗೊಂಡು ಅತ್ಯುತ್ತಮ ಸ್ಥಾನ ಗಳಿಸಿಕೊಳ್ಳುವುದು ಒಂದು ದೊಡ್ಡ ಸಾಧನೆ. ಈ ಸಾಧನೆಗೆ ಪರಿಪಕ್ವ ಮನಸ್ಸು ಮತ್ತು ಶಾಂತಚಿತ್ತದಿಂದ ಎಲ್ಲವನ್ನೂ ಒಂದೇ ರೀತಿಯಲ್ಲಿ ಒಪ್ಪಿಕೊಳ್ಳುವ – ಅಪ್ಪಿಕೊಳ್ಳುವ ಗುಣವು ಬೇಕೇ ಬೇಕು. ಧನಾತ್ಮಕ ಮತ್ತು ಮುಖ್ಯವಾಗಿ ಋಣಾತ್ಮಕ ಅಂಶಗಳನ್ನೂ ಪಡೆದುಕೊಂಡು, ಅದನ್ನು ಮನದಲ್ಲಿ ಅಳೆದು ತೂಗಿ, ತಪ್ಪುಗಳಿದ್ದರೆ ತಿದ್ದಿಕೊಂಡು ಮುಂದಿನ ದಿನಗಳಲ್ಲಿ ಹೊಸ ಬದಲಾವಣೆಯನ್ನು ಸೃಷ್ಟಿಸಿ ಎಲ್ಲರಿಂದ ಸೈ ಅನ್ನಿಸಿಕೊಳ್ಳಲು ಬಹಳ ಕಾಲ ಹಿಡಿಯುತ್ತದೆ. ಈ ಮಧ್ಯೆ ಅದೆಷ್ಟೋ ಅಡಚಣೆಗಳು, ಕಠೋರ ಮಾತುಗಳು, ಮೂಕ ರೋದನೆ ಮತ್ತು ಕೆಲವೊಮ್ಮೆ ಪ್ರತಿಭಟನೆ ಹೀಗೆ ಹಲವಾರು ಆಪತ್ತನ್ನು ಎದುರಿಸುತ್ತಾ, ಒಳ್ಳೆಯದನ್ನು ಸ್ವೀಕರಿಸಿ, ಖುಷಿ ಪಟ್ಟುಕೊಳ್ಳುತ್ತಾ ಸಾಗುತ್ತದೆ ಕಲಾ ಬದುಕು. ನಾವು ಮಾಡುವ ಕೆಲಸಗಳು ಎಲ್ಲರನ್ನೂ ತಲುಪುವುದಿಲ್ಲ, ತಲುಪಿದರೂ ಸಹಜವಾದ ಬದಲಾವಣೆಯನ್ನು ಅವರವರ ದೃಷ್ಟಿಕೋನದಲ್ಲಿ ಉಂಟುಮಾಡಿ ನಮ್ಮನ್ನು ಕ್ರಿಯಾತ್ಮವಾಗಿ ಬೆಳೆಸುತ್ತದೆ. ಇಂತಹ ಕ್ರಿಯಾತ್ಮಕ ಕಲಾವಿದ/ಕಲಾವಿದೆಯರು ನಮ್ಮ…
ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಸಂತ ಫಾನ್ಸಿಸ್ ಹಿರಿಯ ಪ್ರಾಥಮಿಕ ಶಾಲೆ ಬಿಜೈ ಇವರ ಜಂಟಿ ಆಶ್ರಯದಲ್ಲಿ 113ನೇ ‘ಸಾಹಿತ್ಯ ಅಭಿರುಚಿ ಕಾರ್ಯಕ್ರಮ’ವನ್ನು ದಿನಾಂಕ 23 ಆಗಸ್ಟ್ 2025ರಂದು ಪೂರ್ವಾಹ್ನ 10-30 ಗಂಟೆಗೆ ಮಂಗಳೂರಿನ ಬಿಜೈ ಸಂತ ಫಾನ್ಸಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಬಿಜೈ ಸಂತ ಫಾನ್ಸಿಸ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ನಿರ್ಮಲ ಸಿಲ್ವಿಯ ಡಿ’ಸೋಜ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ನಿವೃತ್ತ ಶಿಕ್ಷಕಿ ಶ್ರೀಮತಿ ಗೀತಾ ಬಿ. ರೈ, ಹಿರಿಯ ಬರಹಗಾರರಾದ ಎನ್. ಸುಬ್ರಾಯ ಭಟ್ ಮತ್ತು ವಿಜಯ ಕರ್ಣಾಟಕದ ಚೀಫ್ ಕಾಪಿ ಎಡಿಟರ್ ಆರ್.ಸಿ. ಭಟ್ ಇವರುಗಳು ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ಭಾಗವಹಿಸಲಿರುವರು.
ಉಡುಪಿ : ಅಮೇರಿಕದ ಇಮೇಜ್ ಕಾಲಿಂಗ್ ಸೊಸೈಟಿ ಇಂಟರ್ನ್ಯಾಷನಲ್ ಇದರ ವತಿಯಿಂದ ಗೌರವ ಫೆಲೋಶಿಪ್ ಪ್ರಶಸ್ತಿಗೆ ಪಾತ್ರರಾದ ಹಿರಿಯ ಛಾಯಾಚಿತ್ರ ಪತ್ರಕರ್ತ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಮಾಧ್ಯಮ ಪ್ರತಿನಿಧಿ ಆಸ್ಟ್ರೋ ಮೋಹನ್ ಇವರನ್ನು ದಿನಾಂಕ 20 ಆಗಸ್ಟ್ 2025ರಂದು ಅದಿತಿ ಗ್ಯಾಲರಿಯಲ್ಲಿ ಕ.ಸಾ.ಪ. ಉಡುಪಿ ತಾಲೂಕು ಘಟಕದ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು. ಪೂರ್ಣಪ್ರಜ್ಞ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಪ್ರೊ. ಸದಾಶಿವ ರಾವ್ ಸನ್ಮಾನ ನೆರೆವೇರಿಸಿ ಮಾತನಾಡಿ “ಆಸ್ಟ್ರೋ ಮೋಹನ್ ರವರು ಕಳೆದ ಹಲವಾರು ವರ್ಷಗಳಿಂದ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿಯನ್ನು ಗಳಿಸಿ ನಮ್ಮ ಉಡುಪಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇದು ನಾವೆಲ್ಲರೂ ಹೆಮ್ಮೆಪಡುವ ವಿಚಾರ” ಎಂದರು. ಕೆ.ಎಂ.ಸಿ. ಮಣಿಪಾಲದ ಮೂಳೆ ರೋಗ ತಜ್ಞ ಡಾ. ಕಿರಣ ಆಚಾರ್ಯ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕ.ಸಾ.ಪ. ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ ಎಚ್.ಪಿ., ಕ.ಸಾ.ಪ. ಉಡುಪಿ ಜಿಲ್ಲಾ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್, ಗೌರವ…
ಉಡುಪಿ : ದ್ಯುತಿ ಪರ್ವ ಯಕ್ಷ ಟ್ರಸ್ಟ್ ಕುಂದಾಪುರ ಹಾಗೂ ನಮ್ಮ ಕಲಾಕೇಂದ್ರ ಕೋಟೇಶ್ವರ ಇವರ ಜಂಟಿ ಆಶ್ರಯದಲ್ಲಿ ಶ್ರೀ ಹಟ್ಟಿಯಂಗಡಿ ಮೇಳದ ತಿರುಗಾಟದ ದಶಮಾನೋತ್ಸವದ ಅಂಗವಾಗಿ ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ದಿನಾಂಕ 16 ಆಗಸ್ಟ್ 2025ರಂದು ‘ಧ್ವಜಪುರ ಯಕ್ಷೋತ್ಸವ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ “ಯಕ್ಷಗಾನವನ್ನು ನಾವು ಕೂತು ಚೆನ್ನಾಗಿ ಆಸ್ವಾದಿಸಬಹುದು, ಬೇಕಾಬಿಟ್ಟಿ ಟೀಕೆ ಕೂಡಾ ಮಾಡಬಹುದು. ಆದರೆ ಮೇಳಗಳನ್ನು ನಡೆಸುವುದು ಅಷ್ಟು ಸುಲಭದ ಕೆಲಸವಲ್ಲ. ಇದೊಂದು ಸವಾಲಿನ ಕೆಲಸ. ಈ ನಿಟ್ಟಿನಲ್ಲಿ ಶ್ರೀ ಹಟ್ಟಿಯಂಗಡಿ ಮೇಳ ತಿರುಗಾಟದ ದಶಮಾನೋತ್ಸವ ಆಚರಿಸುತ್ತಿರುವುದು ಮಹಾನ್ ಸಾಧನೆ. ಕಲೆ ಉಳಿಯಬೇಕಾದರೆ ಪ್ರೇಕ್ಷಕರು ಬೇಕು. ಪ್ರೇಕ್ಷಕರು ಯಕ್ಷಗಾನಕ್ಕೆ ಬರಬೇಕಾದರೆ ಅಂತಹ ಗುಣಮಟ್ಟದ ಕಾರ್ಯಕ್ರಮಗಳು, ಕಲಾವಿದರು ಇರಬೇಕು. ಹಾಸನ, ಮಂಡ್ಯ ಮೊದಲಾದ ಭಾಗದ ಮೂಡಲಪಾಯ ಯಕ್ಷಗಾನದ ಪರಿಸ್ಥಿತಿಯನ್ನು ನೋಡಿದಾಗ ನಮ್ಮ ಪಡುವಲಪಾಯ ಯಕ್ಷಗಾನ ಎಷ್ಟೋ ಮುಂದಿದೆ. ಅಂದರೆ ಇಲ್ಲಿ…
ಬೆಂಗಳೂರು : ಡಾ. ವಿರೂಪಾಕ್ಷ ದೇವರಮನೆ ಇವರು ರಚಿಸಿರುವ ಸಾವಣ್ಣ ಪ್ರಕಾಶನದ ‘ಓ ಮನಸೇ ತುಸು ನಿಧಾನಿಸು’ ಎಂಬ ಕೃತಿ ದಿನಾಂಕ 24 ಆಗಸ್ಟ್ 2025ರಂದು ಬೆಳಗ್ಗೆ 10-00 ಗಂಟೆಗೆ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ಇದರ ಬಿ.ಪಿ. ವಾಡಿಯಾ ಸಭಾಂಗಣದಲ್ಲಿ ಲೋಕಾರ್ಪಣೆಗೊಳ್ಳಲಿದೆ.
ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ (ಮಾಹೆ), ಕನಕದಾಸ ಅಧ್ಯಯನ ಸಂಶೋಧನ ಪೀಠ ಉಡುಪಿ ಹಾಗೂ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ‘ವಿಸ್ತರಣಾ ಉಪನ್ಯಾಸ ಮಾಲಿಕೆ 2025’ ಕಾರ್ಯಕ್ರಮವು ದಿನಾಂಕ 25 ಆಗಸ್ಟ್ 2025 ಶನಿವಾರದಂದು ಮಧ್ಯಾಹ್ನ ಗಂಟೆ 2-45ಕ್ಕೆ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ. ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ‘ಕನಕದಾಸರು – ವರ್ತಮಾನದ ಮುಖಾಮುಖಿ’ ಎಂಬ ವಿಷಯದ ಬಗ್ಗೆ ಕೋಟೇಶ್ವರ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ. ಸುಧಾಕರ ದೇವಾಡಿಗ ಬಿ. ಇವರು ಉಪನ್ಯಾಸ ನೀಡಲಿದ್ದಾರೆ.
ಶಿವಮೊಗ್ಗ : ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಜಿಲ್ಲಾ ಸಮಿತಿ ಶಿವಮೊಗ್ಗ, ಸಹ್ಯಾದ್ರಿ ಕಲಾ ಕಾಲೇಜು ಶಿವಮೊಗ್ಗ ಇವರ ಸಹಯೋಗದಲ್ಲಿ ವಿಶ್ವ ಜಾನಪದ ದಿನಾಚರಣೆ ಅಂಗವಾಗಿ ‘ಜಾನಪದ ಕಲೆಗಳ ಕಲಾ ಪ್ರದರ್ಶನ’ವನ್ನು ದಿನಾಂಕ 22 ಆಗಸ್ಟ್ 2025ರಂದು ಬೆಳಿಗ್ಗೆ 10-30 ಗಂಟೆಗೆ ಶಿವಮೊಗ್ಗದ ಸಹ್ಯಾದ್ರಿ ಕಲಾ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷರಾದ ಡಿ. ಮಂಜುನಾಥ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಹ್ಯಾದ್ರಿ ಕಲಾ ಕಾಲೇಜಿನ ಪ್ರಿನ್ಸಿಪಾಲರಾದ ಪ್ರೊ. ಎಸ್. ಸಿರಾಜ್ ಅಹಮದ್ ಇವರು ಉದ್ಘಾಟನೆ ಮಾಡಲಿದ್ದಾರೆ. ಖ್ಯಾತ ಜನಪದ ವಿದ್ವಾಂಸರಾದ ಡಾ. ಅಪ್ಪಗೆರೆ ತಿಮ್ಮರಾಜು ಇವರು ಕಲಾ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ.
ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಸೋಮೇಶ್ವರದ ಆನಂದಾಶ್ರಮ ಪ್ರೌಢಶಾಲೆ ಇವುಗಳ ಜಂಟಿ ಆಶ್ರಯದಲ್ಲಿ ‘ಡೆನ್ನ ಡೆನ್ನಾನ – ಪದ ಪನ್ಕನ’ ವಿದ್ಯಾರ್ಥಿಗಳಿಗಾಗಿ ತುಳು ಹಾಡುಗಳ ಕಲಿಕಾ ಕಾರ್ಯಾಗಾರ ಮತ್ತು ಹಾಡುಗಳ ಪ್ರಸ್ತುತಿ ಕಾರ್ಯಕ್ರಮವನ್ನು ದಿನಾಂಕ 22 ಆಗಸ್ಟ್ 2025ರಂದು ಮಧ್ಯಾಹ್ನ 2-00 ಗಂಟೆಗೆ ಸೋಮೇಶ್ವರದ ಆನಂದಾಶ್ರಮ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕಲಾವಿದೆ ಕುಮಾರಿ ರೂಪಶ್ರೀ ವರ್ಕಾಡಿ ಇವರು ಉದ್ಘಾಟನೆ ಮಾಡಲಿದ್ದಾರೆ. ಗಾಯಕರು ಮತ್ತು ಸಂಗೀತ ನಿರ್ದೇಶಕರಾದ ತೋನ್ಸೆ ಪುಷ್ಕಳ ಕುಮಾರ್ ಮತ್ತು ಗಾಯಕಿ ಮತ್ತು ಸಂಗೀತ ಶಿಕ್ಷಕಿ ವಾಣಿ ಸಪ್ರೆ ಇವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನಿರ್ಮಿಸಿದ ದಿನೇಶ್ ಅತ್ತಾವರ ಇವರ ನಿರ್ದೇಶನದಲ್ಲಿ ‘ಜಾಗ್ ರ್ತೆ’ ತುಳು ನಾಟಕ ಪ್ರದರ್ಶನಗೊಳ್ಳಲಿದೆ.
ಉಡುಪಿ : ರಾಧಾಕೃಷ್ಣ ನೃತ್ಯನಿಕೇತನ (ರಿ.) ಉಡುಪಿ ಆಚರಿಸುವ ‘ಚಿಣ್ಣರ ಉತ್ಸವ’ ಕಾರ್ಯಕ್ರಮವು ದಿನಾಂಕ 22 ಆಗಸ್ಟ್ 2025ರಂದು ಸಂಜೆ 5-15 ಗಂಟೆಗೆ ಉಡುಪಿಯ ಯಕ್ಷಗಾನ ಕಲಾರಂಗ ಐ.ವೈ.ಸಿ. ಸಭಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಉಡುಪಿ ನಗರ ಸಭೆಯ ಉಪಾಧ್ಯಕ್ಷರಾದ ಶ್ರೀಮತಿ ರಜನಿ ಹೆಬ್ಬಾರ್ ಇವರು ಉದ್ಘಾಟನೆ ಮಾಡಲಿದ್ದು, ಲಕ್ಷ್ಮೀಗುರುರಾಜ್ ಎಂ.ಎನ್.ಯು. (ರಿ.) ಉಡುಪಿ ಇದರ ನಿರ್ದೇಶಕರಾದ ನಾಟ್ಯ ಮಯೂರಿ ವಿದುಷಿ ಶ್ರೀಮತಿ ಲಕ್ಷ್ಮೀ ಗುರುರಾಜ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಸಂಸ್ಕೃತ ಉಪನ್ಯಾಸಕರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಪ್ರಾಂಶುಪಾಲರ ಸಂಘ ಹಾಗೂ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ರಾಜ ಸಭಾಂಗಣದಲ್ಲಿ ದಿನಾಂಕ 20 ಆಗಸ್ಟ್ 2025ರಂದು ‘ಸಂಸ್ಕೃತ ಭಾಷಾ ಪಠ್ಯ ಪ್ರಶಿಕ್ಷಣ ಕಾರ್ಯಶಾಲಾ’ ಸಂಸ್ಕೃತ ಭಾಷಾ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ ನಡೆಯಿತು. ಈ ಕಾರ್ಯಾಗಾರವನ್ನು ಉದ್ಘಾಟಿಸಿದ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಯುವರಾಜ ಜೈನ್ “ನಮ್ಮ ಭಾರತೀಯ ಸಂಸ್ಕೃತಿಯ ಗಾಢವಾದ ಬೇರು ಸಂಸ್ಕೃತ ಭಾಷೆಯಲ್ಲಿ ಅಡಕವಾಗಿದೆ. ಸಂಸ್ಕೃತವು ಕೇವಲ ಒಂದು ಭಾಷೆಯಲ್ಲ, ಅದು ನಾಡಿನ ಸಂಸ್ಕೃತಿ, ತತ್ತ್ವ, ಧರ್ಮ, ಸಾಹಿತ್ಯ, ಕಲೆ ಮತ್ತು ಜ್ಞಾನದ ನಿರಂತರ ಪ್ರಕಾಶ. ಇಂದು ನಾವು ಕಾಣುತ್ತಿರುವ ಜೀವನಮೌಲ್ಯಗಳು, ಶಿಷ್ಟಾಚಾರಗಳು, ಶ್ರೀಮಂತ ಕಲೆಗಳು, ಜ್ಞಾನದ ಹರವುಗಳೆಲ್ಲ ಸಂಸ್ಕೃತ ಸಾಹಿತ್ಯದಲ್ಲಿ ನೆಲೆ ನಿಂತಿವೆ. ಸಂಸ್ಕೃತ ಅಧ್ಯಯನ ಮಾಡಿದರೆ ನಾವೇ ನಮ್ಮ ಮೂಲಗಳಿಗೆ ಹತ್ತಿರವಾಗುತ್ತೇವೆ, ಜಗತ್ತಿನೊಂದಿಗೆ ನಿಂತು ಮಾತನಾಡುವ…