Author: roovari

ಕುಪ್ಪಳ್ಳಿ : ಬಿ. ನಾಗೇಶ್ ನೇತೃತ್ವದ ಜಾಗೃತಿ ಟ್ರಸ್ಟ್ (ರಿ.) ಬೆಂಗಳೂರು ಹಾಗೂ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ (ರಿ.) ಕಾಸರಗೋಡು ಇವುಗಳ ಸಹಯೋಗದೊಂದಿಗೆ ‘ಸಾಹಿತ್ಯ ಗಾನ ನೃತ್ಯ ವೈಭವ’ ಕಾರ್ಯಕ್ರಮವನ್ನು ದಿನಾಂಕ 21-07-2024ರಂದು ಬೆಳಿಗ್ಗೆ ಗಂಟೆ 9-30 ಕ್ಕೆ ಕುಪ್ಪಳ್ಳಿಯ ಪೀಠ ಪ್ರಶಸ್ತಿ ಪುರಸ್ಕೃತ ರಾಷ್ಟ್ರಕವಿ ಕುವೆಂಪುರವರ ಮನೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಸಾಹಿತ್ಯ, ಸಾಂಸ್ಕೃತಿಕ, ಪುಸ್ತಕ ಬಿಡುಗಡೆ ಮತ್ತು ಕವಿಗೋಷ್ಠಿಗಳನ್ನು ಆಯೋಜಿಸಲಾಗಿದೆ.

Read More

ಉಡುಪಿ : ಶ್ರೀಕೃಷ್ಣ ಮಠ, ಪರ್ಯಾಯ ಶ್ರೀ ಪುತ್ತಿಗೆ ಮಠ ಮತ್ತು ಯಕ್ಷಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇದರ ವತಿಯಿಂದ ಯಕ್ಷಶಿಕ್ಷಣ-2024ರ ಅಭಿಯಾನವು ದಿನಾಂಕ 11-07-2024ರಂದು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮವನ್ನು ಉದ್ಘಾಟನೆಗೊಳಿಸಿದ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಾತನಾಡಿ “ನಮ್ಮ ಮೂರನೇ ಪರ್ಯಾಯದಲ್ಲಿ ಆರಂಭಗೊಂಡ ಯಕ್ಷಶಿಕ್ಷಣ ಅಭಿಯಾನ, ಕಳೆದ 16 ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಯುತ್ತಾ, ಪ್ರಕೃತ ನಾಲ್ಕು ವಿಧಾನಸಭಾ ಕ್ಷೇತ್ರಗಳ 92 ಪ್ರೌಢಶಾಲೆಗಳಿಗೆ ವಿಸ್ತರಣೆಗೊಂಡಿರುವುದು ಅತ್ಯಂತ ಸ್ತುತ್ಯರ್ಹ. ಯಕ್ಷಗಾನದಿಂದ ವ್ಯಕ್ತಿಯ ಪರಿಪೂರ್ಣ ವಿಕಸನ ಸಾಧ್ಯ. ಅಂತಹ ಅಪೂರ್ವ ಕಲೆಯನ್ನು ಪ್ರೌಢ ವಿದ್ಯಾರ್ಥಿಗಳಿಗೆ ಕಲಿಸುವುದು ಅತ್ಯಂತ ಪ್ರಶಂಸನೀಯ ಕಾರ್ಯ” ಎಂದು ನುಡಿದರು. ಉಡುಪಿ ಶಾಸಕರೂ, ಯಕ್ಷಶಿಕ್ಷಣ ಅಧ್ಯಕ್ಷರೂ ಆದ ಯಶ್ಪಾ ಲ್ ಎ. ಸುವರ್ಣರ ಅಧ್ಯಕ್ಷತೆಯಲ್ಲಿ ಜರಗಿದ ಸಮಾರಂಭದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಮಾಜಿ ಶಾಸಕರೂ ಟ್ರಸ್ಟಿನ ಸ್ಥಾಪಕಾಧ್ಯಕ್ಷರೂ ಆದ ಕೆ. ರಘುಪತಿ…

Read More

ತುಮಕೂರು : ಅನ್ನಪೂರ್ಣ ಪಬ್ಲಿಷಿಂಗ್ ಹೌಸ್ ಬೆಂಗಳೂರು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕವಿತಾಕೃಷ್ಣ ಸಾಹಿತ್ಯ ಮಂದಿರ ಬಳಗ ತುಮಕೂರು ಇವರುಗಳ ಸಹಯೋಗದಲ್ಲಿ 36 ಕೃತಿಗಳ ಲೋಕಾರ್ಪಣೆ ಮತ್ತು ಕವಿತಾಕೃಷ್ಣ ನುಡಿನಮನ ಕಾರ್ಯಕ್ರಮವು ದಿನಾಂಕ 13-07-2024ರಂದು  ಬೆಳಿಗ್ಗೆ 10.30ಕ್ಕೆ ತುಮಕೂರಿನ ಕೌತಮಾರನಹಳ್ಳಿಯ ಆಕಾಶ್ ಫಾರ್ಮ್ ನಲ್ಲಿ ನಡೆಯಲಿದೆ. ಜಿಲ್ಲಾ ಕ. ಸಾ. ಪ. ಅಧ್ಯಕ್ಷರಾದ ಶ್ರೀ ಕೆ. ಎಸ್. ಸಿದ್ಧಲಿಂಗಪ್ಪ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಪತ್ರಿಕೋದ್ಯಮಿಗಳಾದ ಶ್ರೀ ಎಸ್. ನಾಗಣ್ಣ ಉದ್ಘಾಟಿಸಲಿದ್ದು, 36 ಕೃತಿಗಳನ್ನು ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರದ  ಅಧ್ಯಕ್ಷರಾದ ಶ್ರೀ ಮಾನಸ ಲೋಕಾರ್ಪಣೆಗೊಳಿಸಲಿರುವರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಲೇಖಕರಾದ ಶ್ರೀಮತಿ ಬಾ. ಹ. ರಮಾಕುಮಾರಿ, ಗಾಂಧೀತತ್ವ ಪ್ರಚಾರಕರಾದ ಶ್ರೀ ಎಂ. ಬಸವಯ್ಯ, ಶ್ರೀಮತಿ ನಾಗರತ್ನಮ್ಮ ಕವಿತಾಕೃಷ್ಣ (ಶ್ರೀ ಕವಿತಾಕೃಷ್ಣರ ಧರ್ಮಪತ್ನಿ) ಸಾಹಿತ್ಯ ಸಂಘಟಕರಾದ ಶ್ರೀ ಟಿ. ಆರ್. ಎಚ್. ಪ್ರಕಾಶ್ ಹಾಗೂ ಅನ್ನಪೂರ್ಣ ಪಬ್ಲಿಷಿಂಗ್ ಹೌಸ್ ಇದರ ಪ್ರಕಾಶಕರಾದ ಶ್ರೀ ಕೆಂಪಣ್ಣ ಭಾಗವಹಿಸಲಿದ್ದಾರೆ.

Read More

ಪುತ್ತೂರು : ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಉಜಿರೆ ಆಯೋಜಿಸಿದ್ದ ತಾಳಮದ್ದಳೆ ಸಪ್ತಾಹದ ಸಮಾರೋಪ ಸಮಾರಂಭ ದಿನಾಂಕ 07-07-2024ರಂದು ಪುತ್ತೂರಿನ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ಸುಕೃತೀಂದ್ರ ಸಭಾಭವನದಲ್ಲಿ ನಡೆಯಿತು.  ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದ ಎಡನೀರು ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ “ಯಕ್ಷಗಾನ ಬಯಲಾಟಗಳು ಮನಸ್ಸಿಗೆ ಮೋದವನ್ನು ನೀಡಿದರೆ, ತಾಳಮದ್ದಳೆಯು ಬುದ್ದಿಗೆ ಗ್ರಾಸವನ್ನು ಒದಗಿಸುತ್ತದೆ. ಭಾಷಾಶುದ್ಧತೆ, ಪುರಾಣ ಜ್ಞಾನ, ಅಂದವಾಗಿ ಮಾತನಾಡುವ ಶಕ್ತಿ, ಗ್ರಹಿಕಾ  ಸಾಮರ್ಥ್ಯ ಮತ್ತು ಬದುಕಿಗೆ ಬೇಕಾದ ಸಂದೇಶಗಳನ್ನು ಯಕ್ಷಗಾನವು ಒದಗಿಸುತ್ತದೆ. ಅಕ್ಷರಾಭ್ಯಾಸ ಇಲ್ಲದವರೂ ಆಟ-ಕೂಟಗಳನ್ನು ನೋಡಿಯೇ ಪುರಾಣ ಜ್ಞಾನವನ್ನು ಪಡೆದವರಿದ್ದಾರೆ. ಅದು ಯಕ್ಷಗಾನದ ಶಕ್ತಿ. ಎಡನೀರು ಮಠದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ಸಂದರ್ಭದಲ್ಲಿ ಹಿಂದಿನಿಂದಲೂ ತಾಳಮದ್ದಳೆಯು ಆರಾಧನೆಯ ರೂಪದಲ್ಲಿ ನಡೆಯುತ್ತದೆ.” ಎಂದರು.  ಈ ಸಂದರ್ಭದಲ್ಲಿ ಪದ್ಯಾಣ ಮನೆತನದ ಹಿರಿಯ ಪುಟ್ಟು ನಾರಾಯಣ ಭಾಗವತರ ಸ್ಮೃತಿಯಲ್ಲಿ ನೀಡುವ ‘ಪದ್ಯಾಣ ಪ್ರಶಸ್ತಿ’ಯನ್ನು ಹಿರಿಯ ಭಾಗವತ ಕುರಿಯ ಗಣಪತಿ ಶಾಸ್ತ್ರಿ ಹಾಗೂ ಕುರಿಯ…

Read More

ಪುತ್ತೂರು : ಕೀರ್ತಿಶೇಷ ಮದ್ದಲೆಗಾರ ಪಡುಕಾನ ತಿಮ್ಮಯ್ಯ ಆಚಾರ್ ಅವರ ಸ್ಮೃತಿ ಕಾರ್ಯಕ್ರಮವು ದಿನಾಂಕ 10 -07-2024 ರಂದು ಪುತ್ತೂರು ಸನಿಹದ ದೊಡ್ಡಡ್ಕದ ಪಾಲೆಚ್ಚಾರು ಗೋವಿಂದ ನಾಯಕರ ‘ಶಿವಕೃಪಾ ನಿವಾಸ’ದಲ್ಲಿ ನಡೆಯಿತು.  ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಕಲಾವಿದ ಹಾಗೂ ಲೇಖಕರಾದ ನಾ. ಕಾರಂತ ಪೆರಾಜೆ ಮಾತನಾಡಿ “ಒಂದೊಂದು ಕಾಲಘಟ್ಟದಲ್ಲಿ ಯಕ್ಷಗಾನವನ್ನು ಮನಸಾ ಆರಾಧಿಸಿ ಅದನ್ನು ಜನಮಾನಸದಲ್ಲಿ ಹಬ್ಬಿಸಿದ ಅನೇಕರು ಗತಿಸಿದ್ದಾರೆ. ಅವರ ಕೊಡುಗೆಗಳು ಎಲ್ಲೂ  ದಾಖಲಾಗಲಿಲ್ಲ. ದಾಖಲು ಮಾಡಬೇಕಾದ ಸಂಪನ್ಮೂಲಗಳು ವಿರಳವಾಗಿದ್ದವು. ಅವರ ಸಾಂಗತ್ಯದಲ್ಲಿದ್ದ ಬೆರಳೆಣಿಕೆಯ ಮಂದಿ ಅಂತಹ ಹಿರಿಯರನ್ನು ಜ್ಞಾಪಿಸಿ, ಹೊಸ ತಲೆಮಾರಿಗೆ ಪರಿಚಯಿಸುವುದು ಕಲೆಯ ಅಭಿವೃದ್ಧಿಯ ಹಿನ್ನೆಲೆಯಲ್ಲಿ ಮಾಡಬೇಕಾದ ಕಾಯಕವಾಗಿದೆ. ಪಡುಕಾನ ತಿಮ್ಮಯ್ಯರು ಗತಿಸಿ ನಾಲ್ಕು ದಶಕ ಕಳೆದರೂ ಅವರನ್ನು ಸ್ಮರಿಸಿ ಗೌರವಿಸುವ ಮೂಲಕ ಅವರ ಶಿಷ್ಯ ಗೋವಿಂದ ನಾಯಕರು ನಿಜಾರ್ಥದ ಗುರುವಂದನೆಯನ್ನು ಸಲ್ಲಿಸಿದ್ದಾರೆ” ಎಂದರು. ಯಕ್ಷಗಾನ ಹಿಮ್ಮೇಳದ ಕಲಾವಿದ ಪದ್ಯಾಣ ಶಂಕರನಾರಾಯಣ ಭಟ್ ಹಾಗೂ ಅರ್ಥಧಾರಿ ಹಾಗೂ ವೇಷಧಾರಿಯಾದ ಗುಂಡ್ಯಡ್ಕ ಈಶ್ವರ ಭಟ್ ಜತೆಯಾಗಿ ದೀಪಪ್ರಜ್ವಲಿಸುವ ಮೂಲಕ…

Read More

ಪುತ್ತೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ನೇತ್ರಾವತಿ ತುಳುಕೂಟ ರಾಮಕುಂಜ (ರಿ.) ಸಹಯೋಗದಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ ರಾಮಕುಂಜ ಇವರ ಆಶ್ರಯದಲ್ಲಿ ಕಡಬ ತಾಲೂಕಿನ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ‘ತುಳು ಭಾಷೆ – ಸಂಸ್ಕೃತಿ ಕಾರ್ಯಾಗಾರ’ವನ್ನು ದಿನಾಂಕ 13-07-2024ರಂದು ಬೆಳಗ್ಗೆ ಗಂಟೆ 10-00ಕ್ಕೆ ಪುತ್ತೂರಿನ ರಾಮಕುಂಜದ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ತಾರಾನಾಥ್ ಗಟ್ಟಿಯವರ ಅಧ್ಯಕ್ಷತೆಯಲ್ಲಿ ನೇತ್ರಾವತಿ ತುಳುಕೂಟ ರಾಮಕುಂಜದ ಅಧ್ಯಕ್ಷರಾದ ಶ್ರೀ ಕೆ. ಸೇಸಪ್ಪ ರೈ ಇವರು ಉದ್ಘಾಟನೆ ಮಾಡಲಿದ್ದಾರೆ. ತುಳುಕೂಟ ಕಡಬದ ಸದಸ್ಯರಾದ ಶ್ರೀ ಉಮೇಶ್ ಶೆಟ್ಟಿ ಸಾಯಿರಾಂ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ಗೋಷ್ಠಿ 1ರಲ್ಲಿ ‘ತುಳು ಬಾಸೆದ ಸಾಹಿತ್ಯೊಲು’ ಎಂಬ ವಿಷಯದ ಬಗ್ಗೆ ತುಳು ಉಪನ್ಯಾಸಕರಾದ ಶ್ರೀಮತಿ ಪ್ರಶಾಂತಿ ಶೆಟ್ಟಿ, ಗೋಷ್ಠಿ 2ರಲ್ಲಿ ‘ತುಳುನಾಡ ಗೊಬ್ಬುಲು’ ಎಂಬ ವಿಷಯದ ಬಗ್ಗೆ ತುಳು ಸಾಹಿತಿ ಶ್ರೀ ಚಂದ್ರಹಾಸ…

Read More

ಉಡುಪಿ : ಬಡಗುತಿಟ್ಟಿನ ಪ್ರಸಿದ್ದ ಯಕ್ಷಗಾನ ಕಲಾವಿದ ಕಪ್ಪೆಕೆರೆ ಮಹಾದೇವ (75) ಇವರು ದಿನಾಂಕ 09-07-2024ರಂದು ರಾತ್ರಿ ಹೊನ್ನಾವರದಲ್ಲಿ ನಿಧನರಾದರು. ಅವರಿಗೆ ಪತ್ನಿ, ನಾಲ್ವರು ಪುತ್ರರು ಇದ್ದಾರೆ. ಹೊನ್ನಾವರ ತಾಲೂಕಿನ ಹಡಿನಬಾಳ ಸಮೀಪದ ಕಪ್ಪೆಕೆರೆ ನಿವಾಸಿಯಾದ ಈಶ್ವರ ಹೆಗಡೆ ಮತ್ತು ಗೋಪಿ ದಂಪತಿಗಳ ಸುಪುತ್ರರಾಗಿರುವ ಮಹಾದೇವ ಹೆಗಡೆ 18ನೇ ವಯಸ್ಸಿನಲ್ಲಿ ಬಣ್ಣದ ಲೋಕ ಪ್ರವೇಶಿಸಿದವರು. ಅವರ ಕುಟುಂಬವೇ ಯಕ್ಷಗಾನ ರಂಗದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಗಣನೀಯ ಕೊಡುಗೆ ನೀಡಿದೆ. ಭೀಮ, ವಲಲ, ಸುಗ್ರೀವ, ವಾಲಿ, ರಾಮ, ಮಹೋಗ್ರ, ಜಮದಗ್ನಿ, ರಾವಣ, ಮಾಗದ, ಹರಿಶ್ಚಂದ್ರ, ವಿಶ್ವಾಮಿತ್ರ ಮುಂತಾದ ಪಾತ್ರಗಳ ಮೂಲಕ ಕಲಾಸೇವೆಗೈದ ಕಪ್ಪೆಕೆರೆ ಮಹಾದೇವ ಹೆಗಡೆ ನಿಧನದಿಂದ ಯಕ್ಷಗಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಸಹೋದರರಾದ ಪ್ರಸಿದ್ದ ಭಾಗವತ ಕಪ್ಪೆಕೆರೆ ಸುಬ್ರಾಯ ಹೆಗಡೆ ಅವರಲ್ಲಿ ಯಕ್ಷಗಾನ ಕಲಿತು, ಕೆರೆಮನೆ ಮಹಾಬಲ ಹೆಗಡೆಯವರ ಗರಡಿಯಲ್ಲಿ ಪಳಗಿದ ಇವರು ಶ್ರೇಷ್ಠ ಕಲಾವಿದರಾಗಿ ರೂಪುಗೊಂಡಿದ್ದರು. ಗುಂಡುಬಾಳ, ಇಡಗುಂಜಿ, ಬಚ್ಚಗಾರು, ಅಮೃತೇಶ್ವರಿ, ಶಿರಸಿ, ಪಂಚಲಿಂಗ, ಮಂದಾರ್ತಿ ಮೇಳಗಳಲ್ಲಿ ಐದು ದಶಕಗಳ ಕಾಲ…

Read More

ಮಂಜೇಶ್ವರ : ಕೇರಳ ಸರಕಾರದ ಜಾನಪದ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 05-07-2024ರಂದು ತಿರುವನಂತಪುರದ ಕೊಟ್ಟಾರಕುನ್ನು ನಿಶಾಗಂಧಿ ಆಡಿಟೋರಿಯಂನಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಉಪಸ್ಥಿತಿಯಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ರಾಜ್ಯ ಸಂಸ್ಕೃತಿ ಇಲಾಖೆ ಸಚಿವ ಸಜಿ ಚೆರಿಯನ್ ಅವರು ಪ್ರಸಿದ್ದ ಯಕ್ಷಗಾನ ಕಲಾವಿದ ರಮೇಶ್ ಶೆಟ್ಟಿ ಬಾಯಾರು ಇವರಿಗೆ ಜಾನಪದ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿದರು. ರಮೇಶ್ ಶೆಟ್ಟಿ ಬಾಯಾರು ಅವರು ತೆಂಕು ತಿಟ್ಟು ಯಕ್ಷಗಾನ ವಲಯದಲ್ಲಿ ಗುರುತಿಸಿಕೊಂಡಿರುವ ಹವ್ಯಾಸಿ ಕಲಾವಿದರಾಗಿದ್ದು, ತರಬೇತಿಯ ಮೂಲಕವೂ ಹಲವಾರು ಶಿಷ್ಯ ವೃಂದವನ್ನು ಹೊಂದಿದ್ದಾರೆ. ಪೈವಳಿಕೆ ಸಮೀಪದ ಬಾಯಾರು ಮುಳಿಗದ್ದೆ ನಿವಾಸಿಯಾದ ಇವರ ಕಂಸ, ಶಿಶುಪಾಲ, ರಾವಣ, ಕೌರವ ಮತ್ತಿತರ ಪಾತ್ರಗಳು ಜನಮನಸೂರೆಗೊಂಡಿವೆ.

Read More

ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ವಿನೂತನ ಕಾರ್ಯಕ್ರಮ ‘ಮನೆಯೇ ಗ್ರಂಥಾಲಯ’ ಕಾರ್ಯಕ್ರಮದ 50ನೇ ಗ್ರಂಥಾಲಯ ದಿನಾಂಕ 15-07-2024ರಂದು ಸಂಜೆ 5-55 ಗಂಟೆಗೆ ಉಡುಪಿಯ ಸಿಟಿ ಬಸ್ ಸ್ಟಾಂಡ್ ಹತ್ತಿರವಿರುವ ಗಾಂಧಿ ಆಸ್ಪತ್ರೆಯಲ್ಲಿ ಕನ್ನಡದ ಹಿರಿಯ ವಿಮರ್ಶಕ ಪ್ರೊ. ಮುರಳೀಧರ ಉಪಾಧ್ಯ ಹಿರಿಯಡ್ಕ ಇವರು ಪುಸ್ತಕ ನೀಡುವ ಮೂಲಕ ಉದ್ಘಾಟಿಸಲಿದ್ದಾರೆ. ಡಾ. ರಾಜಲಕ್ಷ್ಮೀ, ಡಾ. ಆಮ್ನಾ ಹೆಗ್ಡೆ, ಡಾ. ಹರಿಶ್ಚಂದ್ರ, ಡಾ. ವ್ಯಾಸರಾಜ ತಂತ್ರಿ ಉಪಸ್ಥಿತರಿರುವರು. ಉಡುಪಿಯ ಪ್ರಸಿದ್ಧ ಆಸ್ಪತ್ರೆಗಳಲ್ಲಿ ಒಂದಾದ ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಹರೀಶ್ಚಂದ್ರ ಅವರು ಕನ್ನಡ ನಾಡು ನುಡಿ ಸಂಸ್ಕೃತಿಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡುತ್ತ ಬಂದಿದ್ದಾರೆ. ಈಗ ನಮ್ಮ ಮಹತ್ವದ ಯೋಜನೆಯಾದ ‘ಮನೆಯೇ ಗ್ರಂಥಾಲಯ’ ಇದರ ‘ಸುವರ್ಣ ಸಂಭ್ರಮ’ ಕಾರ್ಯಕ್ರಮವನ್ನು ಅವರ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿದೆ. ಆಸ್ಪತ್ರೆಯ ಮೊದಲನೆಯ ಮಹಡಿಯಲ್ಲಿ ಸುಸಜ್ಜಿತವಾದ ಗ್ರಂಥಾಲಯವನ್ನು ಪ್ರಾರಂಭಿಸಲು ಸಿದ್ಧತೆಗಳು ಈಗಾಗಲೇ ಕೈಗೊಂಡಿದ್ದು, ಆಸ್ಪತ್ರೆಗೆ ಬರುವ ಎಲ್ಲರೂ ಈ ಗ್ರಂಥಾಲಯ ಬಳಕೆ ಮಾಡಬಹುದು.…

Read More

ಮಂಗಳೂರು : ಕುಡ್ಲ ಆರ್ಟ್ಸ್ ಫೆಸ್ಟಿವಲ್, ನೃತ್ಯಾಂಗಣ ಮತ್ತು ಅಮೃತ ವಿದ್ಯಾಲಯಂ ಇವುಗಳ ಸಹಯೋಗದಲ್ಲಿ ಪಸ್ತುತ ಪಡಿಸುವ ‘ಭರತನಾಟ್ಯ ಪ್ರದರ್ಶನ’ವನ್ನು ದಿನಾಂಕ 14-07-2024ರಂದು ಸಂಜೆ 6-00 ಗಂಟೆಗೆ ಮಂಗಳೂರಿನ ಬೋಳೂರ್ ಅಮೃತ ವಿದ್ಯಾಲಯಂನಲ್ಲಿ ಹಮ್ಮಿಕೊಳ್ಳಲಾಗಿದೆ. ನೃತ್ಯಾಂಗಣದ ನಿರ್ದೇಶಕಿಯಾದ ವಿದುಷಿ ರಾಧಿಕಾ ಶೆಟ್ಟಿ ಇವರ ಶಿಷ್ಯೆಯರಾದ ಅಂಕಿತ ಎಸ್., ಅದಿತಿ ಲಕ್ಷ್ಮೀ ಭಟ್ ಮತ್ತು ಸಾನ್ವಿಕಾ ಕುಡುಂಬಿಲ ಇವರುಗಳು ನೃತ್ಯ ಕಾರ್ಯಕ್ರಮ ನೀಡಲಿದ್ದಾರೆ.

Read More