Author: roovari

ಮಂಗಳೂರು : ಇತ್ತೀಚೆಗೆ ನಿಧನರಾದ ಸಾಹಿತಿ ಹಾಗೂ ಪತ್ರಕರ್ತರಾದ ಹರೀಶ್ ಬೋಳಾರ್ ಇವರಿಗೆ ನುಡಿನಮನ ಕಾರ್ಯಕ್ರಮವು ಮಂಗಳೂರಿನ ‘ಕುಡ್ಲ ತುಳುಕೂಟ’ದ ವತಿಯಿಂದ ದಿನಾಂಕ 22-06-2024 ರಂದು ತುಳುಕೂಟದ ಕಛೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನುಡಿನಮಾನ ಸಲ್ಲಿಸಿದ ಕುಡ್ಲ ತುಳುಕೂಟದ ಅಧ್ಯಕ್ಷ ಮರೋಳಿ ಬಿ. ದಾಮೋದರ ನಿಸರ್ಗ ಮಾತನಾಡಿ “ನವಭಾರತ ಪತ್ರಿಕೆಯಲ್ಲಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದ ಹರೀಶ್ ಬೋಳಾರ್ ಇವರು ನಂತರ ಮಣಿಪಾಲದಲ್ಲಿ ಉದಯವಾಣಿ ಪತ್ರಿಕೆಯಲ್ಲಿ ಪತ್ರಕರ್ತ ಹಾಗೂ ಸಾಹಿತಿಯಾಗಿ ಬೆಳೆದರು. ವೃತ್ತಿ ಜೀವನದ ಮಧ್ಯೆಯೇ ಉಡುಪಿಯ ತುಳುಕೂಟದಲ್ಲೂ ತುಳುಭಾಷೆಗಾಗಿ ಶ್ರಮಿಸಿದ ಇವರು, ಕುಡ್ಲದ ತುಳುಕೂಟದಲ್ಲೂ ಸೇವೆಸಲ್ಲಿಸಿ ತುಳುಕೂಟವನ್ನು ಬೆಳೆಸುವಲ್ಲಿ ಯೋಗದಾನ ನೀಡಿದ್ದಾರೆ. ಅವರ ನಿಧನಕ್ಕೆ ತುಳೂಕೂಟ ಕುಡ್ಲ ಕಂಬನಿ ಮಿಡಿಯುತ್ತಿದೆ ಹಾಗೂ ಕುಟುಂಬ ಈ ದುಃಖವನ್ನು ಭರಿಸುವಂತಾಗಲಿ ಹಾಗೂ ಆತ್ಮಕ್ಕೆ ಸದ್ಗತಿ ದೊರಕಲಿ.” ಎಂದರು. ಪ್ರಧಾನ ಕಾರ್ಯದರ್ಶಿ ವರ್ಕಾಡಿ ರವಿ ಅಲೆವೂರಾಯ, ಪಿ. ಗೋಪಾಲಕೃಷ್ಣ, ಹೇಮಾ ಡಿ. ನಿಸರ್ಗ, ರಮೇಶ್ ಕುಲಾಲ್ ಬಾಯಾರ್, ಭಾಸ್ಕರ ಕುಲಾಲ್ ಬರ್ಕೆ, ವಿಶ್ವನಾಥ ಪೂಜಾರಿ ಸೋಣಳಿಕೆ ಹಾಗೂ…

Read More

ಉಡುಪಿ : ಸ್ವಾತಂತ್ರ್ಯ ಹೋರಾಟಗಾರರಾಗಿ, ಹರಿದಾಸರಾಗಿ, ಯಕ್ಷಗಾನದ ನವಯುಗದ ಪ್ರವರ್ತಕರಾದ ಕೀರ್ತಿಶೇಷ ಮಲ್ಪೆ ಶಂಕರನಾರಾಯಣ ಸಾಮಗರ ಜೀವನ ದರ್ಶನವನ್ನು ಚಿತ್ರಿಸುವ ದಿನೇಶ ಉಪ್ಪೂರ ವಿರಚಿತ ‘ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಉಡುಪಿಯ ಯಕ್ಷಗಾನ ಕಲಾರಂಗದ ನೂತನ ಐವೈಸಿ ಸಭಾಂಗಣದಲ್ಲಿ ದಿನಾಂಕ 29-06-2024ರಂದು ಸಂಜೆ 3-00 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ. ಕಾಸರಗೋಡಿನ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರು ಪುಸ್ತಕವನ್ನು ಅನಾವರಣಗೊಳಿಸಲಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಣಿಪಾಲದ ಮಾಹೆಯ ಸಹಕುಲಾಧಿಪತಿಗಳಾದ ಡಾ. ಎಚ್.ಎಸ್. ಬಲ್ಲಾಳ್ ಇವರು ವಹಿಸಿಕೊಳ್ಳಲಿದ್ದು, ಶುಭಾಶಂಸನೆಯನ್ನು ಸಾಮಗರ ಸಹಕಲಾವಿದರಾದ ಡಾ. ಎಂ. ಪ್ರಭಾಕರ ಜೋಶಿಯವರು ಮತ್ತು ಪುಸ್ತಕ ಪರಿಚಯವನ್ನು ಪ್ರೊ. ಮುರಳೀಧರ ಉಪಾಧ್ಯ ಹಿರಿಯಡ್ಕ ಮಾಡಲಿರುವರು. ಮುಖ್ಯ ಅಭ್ಯಾಗತರಾಗಿ ಮಾಜಿಸಚಿವರಾದ ಶ್ರೀ ಪ್ರಮೋದ್ ಮಧ್ವರಾಜ್, ಮಾಹೆಯ ಸಹಕುಲಾಧಿಪತಿಗಳಾದ ಡಾ. ನಾರಾಯಣ ಸಭಾಹಿತ್, ಮಣಿಪಾಲ ಯುನಿವರ್ಸಲ್ ಪ್ರೆಸ್ ಪ್ರಧಾನ ಸಂಪಾದಕರಾದ ಪ್ರೊ. ನೀತಾ ಇನಾಂದಾರ್ ಹಾಗೂ ಕಸಾಪ ದ.ಕ.ಜಿಲ್ಲೆ ಅಧ್ಯಕ್ಷರಾದ ಶ್ರೀ ಪ್ರದೀಪ ಕುಮಾರ್ ಕಲ್ಕೂರ್ ಮತ್ತು ಹಿರಿಯ ಯಕ್ಷಗಾನ ಕಲಾವಿದರಾದ…

Read More

ಬಂಟ್ವಾಳ : ಬಂಟ್ವಾಳ ತಾಲೂಕಿನ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ಎರಡನೇ ವರ್ಷದ ಯಕ್ಷ ಧ್ರುವ ಯಕ್ಷ ಶಿಕ್ಷಣದ ಉದ್ಘಾಟನೆಯು ದಿನಾಂಕ 18-06-2024ರಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಅಂಚನ್ ಅಧ್ಯಕ್ಷತೆಯಲ್ಲಿ ನೆರವೇರಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ಪ್ರಧಾನ ಕಾರ್ಯದರ್ಶಿ ದೇವದಾಸ್ ಶೆಟ್ಟಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಖ್ಯಾತ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿಯವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಪ್ರೇಮ, ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ಕಾರ್ಯದರ್ಶಿ ಮೋಹನದಾಸ್ ಕೊಟ್ಟಾರಿ, ಯಕ್ಷ ಗುರುಗಳಾದ ಓಂ ಪ್ರಕಾಶ್, ಮಾತೃ ಸಮಿತಿಯ ಅಧ್ಯಕ್ಷೆ ಪ್ರಿಯಾ ಮತ್ತು ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

Read More

ಮಂಗಳೂರು : ಸಂಗೀತ್ ಭಾರತಿ ಫೌಂಡೇಷನ್ (ರಿ.) ಪ್ರಸ್ತುತ ಪಡಿಸುವ ಕರೆ ರಾಗಗಳ ಬೈಠಕ್ ‘ರಾಗ್ ಪರಿಚಯ್’ ಕಾರ್ಯಕ್ರಮವನ್ನು ದಿನಾಂಕ 30-06-2024ರಂದು ಸಂಜೆ 5-30ಕ್ಕೆ ಮಂಗಳೂರಿನ ಶಾರದಾ ವಿದ್ಯಾಲಯದ ಧ್ಯಾನ ಮಂದಿರ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಕ್ಯಾಪ್ಟನ್ ಗಣೇಶ ಕಾರ್ನಿಕ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ರಾಗಗಳ ಬಗ್ಗೆ ವಿವರಣೆ ನೀಡಲು ಬೆಂಗಳೂರಿನ ಪಂಡಿತ್ ವ್ಯಾಸಮೂರ್ತಿ ಕಟ್ಟಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ. ಬೆಂಗಳೂರಿನ ಮನಸಾ ಶಾಸ್ತ್ರಿ, ರತೀಂದ್ರ ದಾಸ್ ಗುಪ್ತ, ಸಾಗರ್ ಭರತ್ ರಾಜ್ ಮತ್ತು ಮಂಗಳೂರಿನ ನಾಗ್ ಕಿರಣ್ ನಾಯಕ್ ಹರೇಕಳ ಇವರುಗಳು ಕಾರ್ಯಕ್ರಮ ನೀಡಲಿದ್ದಾರೆ.

Read More

ಮಂಗಳೂರು : ನೃತ್ಯಾಂಗಣ ವತಿಯಿಂದ ಡಾ. ಅರುಣ್ ಕುಮಾರ್ ಮೈಯ್ಯ ಇವರ ಸ್ಮರಣಾರ್ಥ ಪ್ರಸ್ತುತ ಪಡಿಸಿದ ‘ಯುವ ನೃತ್ಯೋತ್ಸವ 2024’ವು ದಿನಾಂಕ 23-06-2024ರಂದು ಡಾನ್ ಬೋಸ್ಕೋ ಹಾಲ್ ನಲ್ಲಿ ನಡೆಯಿತು. ಈ ನೃತ್ಯೋತ್ಸವ ಕಾರ್ಯಕ್ರಮವನ್ನು ಗಾನ ನೃತ್ಯ ಅಕಾಡೆಮಿ ಇದರ ನಿರ್ದೇಶಕರಾದ ವಿದುಷಿ ಶ್ರೀಮತಿ ವಿದ್ಯಾಶ್ರೀ ರಾಧಾಕೃಷ್ಣ ಇವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಶಾಸ್ತ್ರೀಯ ನೃತ್ಯ ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ ಯುವ ಮತ್ತು ಉದಯೋನ್ಮುಖ ಕಲಾವಿದರಾದ ಸಂಜನಾ ರಾಜೇಶ್, ಯುಕ್ತಿ ಉಡುಪ, ಸ್ವರಲಿ ಘನ್ಗುರ್ಡೆ, ಅದಿತಿ ರವಿ ಪ್ರಕಾಶ್, ಅಪೇಕ್ಷಾ ಕಾಮತ್, ಅನಂತಕೃಷ್ಣ ಸಿ.ವಿ. ಮತ್ತು ಶಿಲ್ಪ ವರಕ್ಕೋತ್ ಏಕವ್ಯಕ್ತಿ ಪ್ರದರ್ಶನ ನೀಡಿದರು. ಯುವ ನೃತ್ಯೋತ್ಸವದ ಅಂಗವಾಗಿ ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ ಮತ್ತು ವಿದುಷಿ ಮಂಜುಳಾ ಸುಬ್ರಹ್ಮಣ್ಯ ಇವರ ಶಿಷ್ಯ ವೃಂದದವರಿಂದ ಭರತನಾಟ್ಯ ಪ್ರದರ್ಶಿಸಿದರು. ಗುರು ಪ್ರವಿತಾ ಅಶೋಕ್ ಇವರ ಶಿಷ್ಯೆ ಕುಂದಾಪುರದ ಯುಕ್ತಿ ಉಡುಪ ಪ್ರಥಮ ಸ್ಥಾನ ಪಡೆದು ‘ಅರುಣೋದಯ ಪ್ರಶಸ್ತಿ’ ಪಡೆದರು. ಬೆಂಗಳೂರಿನ ಉಪಾಧ್ಯೆ ಸ್ಕೂಲ್…

Read More

ಮುದ್ರಾಡಿ : ನಮ ತುಳುವೆರ್ ಕಲಾ ಸಂಘಟನೆ (ರಿ.) ಮತ್ತು ಕರ್ನಾಟಕ ಬೀದಿ ನಾಟಕ ಅಕಾಡೆಮಿ ನೀಡುವ ಪ್ರತಿಷ್ಠಿತ ‘ಸಿ.ಜಿ.ಕೆ. ರಂಗಪುರಸ್ಕಾರ 2024’ಕ್ಕೆ ಮಂಗಳೂರು ಜಿಲ್ಲೆಯಿಂದ ನಾಟಕಕಾರ ನಿರ್ದೇಶಕ ಸಂಘಟಕ ಶಶಿರಾಜ್ ಕಾವೂರು ಆಯ್ಕೆಯಾಗಿರುತ್ತಾರೆ. ಇವರು ವೃತ್ತಿಯಲ್ಲಿ ನ್ಯಾಯವಾದಿ ಪ್ರವೃತ್ತಿಯಲ್ಲಿ ನಾಟಕಕಾರ, ನಟ, ಸಂಘಟಕ ಮತ್ತು ಗೀತರಚನೆಕಾರರು. ಬರೆದ ನಾಟಕಗಳು- ಏಕಾದಶಾನನ, ಬರ್ಬರೀಕ, ನೆಮ್ಮದಿ ಅಪಾರ್ಟ್‌ಮೆಂಟ್ ಫ್ಲಾಟ್ ನಂಬರ್ 252, ಐಸಿಯೂ, ಸರದಾರನ ಸ್ವಗತ, ಸಂಪಿಗೆನಗರ ಪೋಲೀಸ್ ಸ್ಟೇಶನ್, ದಾಟ್ಸ್ ಆಲ್ ಯುವರ್ ಆನರ್, ಮಿನುಗೆಲೆ ಮಿನುಗೆಲೆ ನಕ್ಷತ್ರ, ವ್ಯೂಹ, ಮರಗಿಡಬಳ್ಳಿ, ಪರಶುರಾಮ, ಛತ್ರಪತಿ ಶಿವಾಜಿ, ನೆಮ್ಮದಿ ಅಪಾರ್ಟ್‌ಮೆಂಟ್ ಬ್ಲಾಕ್ ಬಿ ಇತ್ಯಾದಿ. ಪೊಸ ಒಸರ್, ಪರ್ಂದ್ ಪೆಲಕಾಯಿ, ಬರ್ಬರೀಕ, ಪಿಲಿತ ಪಂಜ, ಬಿಂಬದುಲಾಯಿದ ಬಿಂಬ, ಮಾಲೆ ಪಟಾಕಿ, ಪುದ್ದು ಕೊಡ್ತರ್ ಇತ್ಯಾದಿ ತುಳು ಪುಸ್ತಕಗಳು. ಧಾರವಾಡದ ದ.ರಾ.ಬೇಂದ್ರೆ ಪ್ರಶಸ್ತಿ, ಫ.ಶಿ. ಭಾಂಡಗೆ ಪ್ರಶಸ್ತಿ, ರಂಗಭೂಮಿ ನಾಟಕ ರಚನಾ ಪ್ರಶಸ್ತಿ, ಎರಡು ಸಲ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಎರಡು ಸಲ…

Read More

ಕಿನ್ನಿಗೋಳಿ : ಶಿವಪ್ರಣಂ (ರಿ.) ನೃತ್ಯ ತರಗತಿಯ ವತಿಯಿಂದ ಕಿನ್ನಿಗೋಳಿಯ ಯುಗಪುರುಷ ಮತ್ತು ನೇಕಾರ ಸೌಧ ಇವುಗಳ ಸಹಯೋಗದೊಂದಿಗೆ ‘ಶಿವಾಂಜಲಿ 2024’ ನೃತ್ಯ ಪ್ರದರ್ಶನದ ಎರಡನೇ ದಿನದ ಕಾರ್ಯಕ್ರಮವು ದಿನಾಂಕ 09-06-2024ರಂದು ಕಿನ್ನಿಗೋಳಿಯ ಯುಗಪುರುಷದಲ್ಲಿ ನಡೆಯಿತು. ಭರತಾಂಜಲಿ ಸಂಸ್ಥೆಯ ನಿರ್ದೇಶಕರಾದ ಗುರು ಶ್ರೀಧರ ಹೊಳ್ಳ ಹಾಗೂ ಶ್ರೀಮತಿ ಪ್ರತಿಮಾ ಶ್ರೀಧರ್ ಇವರು ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಭುವನಾಭಿರಾಮ ಉಡುಪ, ದುಗ್ಗಣ್ಣ ಸಾವಂತರು, ಡಾ. ಅರುಣ್ ಉಳ್ಳಾಲ ಇವರುಗಳು ಭಾಗವಹಿಸಿ ಶುಭಾ ಕೋರಿದರು. ಆಶಾ ಕೀರ್ತಿ ಕಾರ್ಯಕ್ರಮ ನಿರೂಪಿಸಿ, ಸಂಸ್ಥೆಯ ನಿರ್ದೇಶಕಿ ಅನ್ನಪೂರ್ಣ ರಿತೇಶ್ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಶಿವಪ್ರಣಂ ಸಂಸ್ಥೆಯ ವಿದ್ಯಾರ್ಥಿಗಳು ‘ಶಿವಾಂಜಲಿ’ ನೃತ್ಯ ಪ್ರದರ್ಶನ ನೀಡಿದರು.

Read More

ಸುರತ್ಕಲ್ : ಮಧ್ಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಷನ್ ವತಿಯಿಂದ ಯಕ್ಷಧ್ರುವ ಯಕ್ಷ ಶಿಕ್ಷಣ ಉಚಿತ ತರಗತಿಯು ದಿನಾಂಕ 21-06-2024ರಂದು ಪ್ರಾರಂಭಗೊಂಡಿತು. ಈ ಕಾರ್ಯಕ್ರಮವನ್ನು ಉದ್ಘಾಟನೆಗೊಳಿಸಿದ ಮುಂಬೈನ ವಿ.ಕೆ. ಸಮೂಹ ಸಂಸ್ಥೆಯ ಸಿ.ಎಂ.ಡಿ. ಕರುಣಾಕರ ಎಂ. ಶೆಟ್ಟಿ ಮಧ್ಯಗುತ್ತು ಇವರು ಮಾತನಾಡಿ “ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಪಠ್ಯೇತರ ಚಟುವಟಿಕೆಗಳಾದ ಯಕ್ಷಗಾನದಲ್ಲೂ ತೊಡಗಿಸಿಕೊಂಡಾಗ ವಿದ್ಯಾರ್ಥಿಗಳ ಮನೋಬಲ ವೃದ್ಧಿಯಾಗುತ್ತದೆ” ಎಂದು ಹೇಳಿದರು. ಯಕ್ಷಧ್ರುವ ಪಟ್ಲ ಫೌಂಡೇಷನ್ ಸ್ಥಾಪಕ ಅಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ ಮಾತನಾಡಿ, “ಟ್ರಸ್ಟ್ ವತಿಯಿಂದ 80 ಶಾಲೆಗಳಲ್ಲಿ ಸುಮಾರು ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ಶಿಕ್ಷಣ ತರಬೇತಿ ನೀಡಲಾಗುತ್ತಿದೆ” ಎಂದರು. ಪಟ್ಲ ಫೌಂಡೇಷನ್‌ನ ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಎಸ್. ಪೂಂಜ ಅಧ್ಯಕ್ಷತೆಯನ್ನು ವಹಿಸಿದ್ದರು. ಉದ್ಯಮಿ ಮಾಧವ ಶೆಟ್ಟಿ ಬಾಳ, ಶಾಲೆಯ ಮುಖ್ಯ ಶಿಕ್ಷಕಿ ಕುಸುಮಾ, ಯಕ್ಷಗಾನ ಶಿಕ್ಷಕಿ ಪೂರ್ಣಿಮಾ ಯತೀಶ್ ರೈ, ಫೌಂಡೇಷನ್‌ನ ಸುರತ್ಕಲ್ ಘಟಕದ ಕಾರ್ಯದರ್ಶಿ ಗಂಗಾಧರ ಪೂಜಾರಿ,…

Read More

ಮಣಿಪಾಲ : ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟ್ (ರಿ.) ಸರಳೇಬೆಟ್ಟು ಮಣಿಪಾಲ ಹಾಗೂ ಕರ್ನಾಟಕ ಗಮಕ ಕಲಾ ಪರಿಷತ್ತು ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಗಮಕ ವಾಚನ ವ್ಯಾಖ್ಯಾನ ಕಾರ್ಯಕ್ರಮವನ್ನು ದಿನಾಂಕ 30-06-2024ರಂದು ಅಪರಾಹ್ನ 3-30 ಗಂಟೆಗೆ ಮಣಿಪಾಲದ ಸರಳೇಬೆಟ್ಟು ರತ್ನ ಸಂಜೀವ ಕಲಾಮಂಡಲದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಘವಾಂಕ ಕವಿಯ ಹರಿಶ್ಚಂದ್ರ ಕಾವ್ಯದ ‘ಆತ್ಮ ವಿಕ್ರಯ’ ಎಂಬ ಭಾಗವನ್ನು ಮಂಚಿಯ ಗಮಕಿ ಶ್ರೀಮತಿ ಮಂಜುಳಾ ಸುಬ್ರಹ್ಮಣ್ಯ ಭಟ್ ಇವರು ವಾಚನ ಮತ್ತು ಡಾ. ರಾಘವೇಂದ್ರ ರಾವ್ ಇವರು ವ್ಯಾಖ್ಯಾನ ನೀಡಲಿರುವರು.

Read More

ತೆಕ್ಕಟ್ಟೆ: ತೆಕ್ಕಟ್ಟೆಯ ಹಯಗ್ರೀವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಯಶಸ್ವೀ ಕಲಾವೃಂದದ ಸಹಕಾರದೊಂದಿಗೆ ಯಕ್ಷಾಂತರಂಗ-ವ್ಯವಸಾಯೀ ಯಕ್ಷ ತಂಡದ ಯಕ್ಷ ದುಂದುಭಿ-2024ರಲ್ಲಿ ‘ಕಾರಂತ ಯಕ್ಷಾಂತರಗ ಪ್ರಶಸ್ತಿ ಪ್ರದಾನ’ ಸಮಾರಂಭವು ದಿನಾಂಕ 23-06-2024 ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ “ಹಿರಿಯರಾಗಿ ಸಾಕಷ್ಟು ಅನುಭವವುಳ್ಳ ಕೃಷ್ಣಮೂರ್ತಿ ಉರಾಳರು ಅನುಭವೀ ಕಲಾವಿದರ ತಂಡವನ್ನು ಕಟ್ಟಿಕೊಂಡು ‘ಯಕ್ಷಾಂತರಂಗ’ ಸಂಘಟನೆಯ ಮೂಲಕ ಸಾಂಪ್ರದಾಯಿಕ ಯಕ್ಷ ನಡೆಯನ್ನೇ ಸಾರ್ವತ್ರಿಕವಾಗಿ ಮತ್ತೆ ಮತ್ತೆ ನೆನಪಿಸುತ್ತಾ ಸಮಾಜದಲ್ಲಿ ಪ್ರಶಂಸೆಗೆ ಪಾತ್ರವಾಗುವಂತೆ ಮಾಡಿದ್ದಾರೆ. ಸಂಸ್ಥೆಯು ಮತ್ತೆ ಮತ್ತೆ ಸಾಂಸ್ಕೃತಿಕವಾಗಿ ಬೆಳಗುತ್ತಾ ಇನ್ನಷ್ಟು ಕಾಲ ಕಾಂತಿಯನ್ನು ನೀಡಲಿ.” ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಅಭಿನಂದನಾ ನುಡಿಗಳನ್ನಾಡಿದ ಖ್ಯಾತ ಪ್ರಸಂಗಕರ್ತ ಪ್ರಸಾದ್ ಕುಮಾರ್ ಮೊಗೆಬೆಟ್ಟು “ಯಕ್ಷಗಾನದ ಸರ್ವಾಂಗವನ್ನು ಬಲ್ಲ ಅನೇಕರ ಪರಂಪರೆಯ ಕೊಂಡಿ ಬಡಗು ತಿಟ್ಟಿನ ಹಿರಿಯ ಭಾಗವತ ಸಾಧಕ ಶ್ರೇಷ್ಠರು ಹೆರೆಂಜಾಲು ಗೋಪಾಲ ಗಾಣಿಗರು. ಯಕ್ಷರಂಗದಲ್ಲಿ ಹಂತ ಹಂತವಾಗಿ ಮೇಲೆ ಬಂದ ಗಾಣಿಗರು ಭಾಗವತಿಗೆ ಕಲಿತು ಮೇಳ ಸೇರಿಕೊಂಡವರು. ಮರವಂತೆಯ…

Read More