Author: roovari

ಐವತ್ತರ ದಶಕದಲ್ಲಿ ಕನ್ನಡ ನವೋದಯ ಕಾವ್ಯವು ತನ್ನ ಸತ್ವವನ್ನು ಬಹುಮಟ್ಟಿಗೆ ಕಳೆದುಕೊಂಡಿದ್ದು ಕಾವ್ಯದಲ್ಲಿ ಏಕತಾನತೆ ಕಂಡುಬರತೊಡಗಿತ್ತು. ನಿಸರ್ಗ ಸೌಂದರ್ಯ, ಆದರ್ಶ ಪ್ರೇಮ, ದೇಶಭಕ್ತಿ ಮೊದಲಾದ ಆಶಯಗಳು ಬೇಂದ್ರೆ, ಕುವೆಂಪು, ಪು.ತಿ.ನ. ಇವರೆಲ್ಲರ ಹಾದಿಯಲ್ಲೇ ಪುನರುಕ್ತವಾಗುತ್ತಿದ್ದವು. ಕಾವ್ಯವು ತನ್ನ ಸಿದ್ಧ ಭಾಷೆಯಲ್ಲಿ ಆರಾಧನೆ-ಸಮರ್ಪಣ ಭಾವವನ್ನು ಬಿಟ್ಟು ಬೇರೆ ಯಾವ ಅನುಭವದ ವ್ಯಾಖ್ಯಾನಕ್ಕೂ ಎಡೆಗೊಡುತ್ತಿರಲಿಲ್ಲ. ಇಂಥ ಸಂದರ್ಭದಲ್ಲಿ ಗೋಪಾಲಕೃಷ್ಣ ಅಡಿಗರು ಹೊಸ ಕಾವ್ಯಭಾಷೆಯ ಮೂಲಕ ಹೊಸ ಅನುಭವ, ಭಾವನೆಗಳನ್ನು ವ್ಯಕ್ತಪಡಿಸತೊಡಗಿದರು. ನವೋದಯ ಕಾವ್ಯಕ್ಕೆ ಪ್ರತಿಕ್ರಿಯೆಯಾಗಿ ಬಂದ ನವ್ಯ ಕಾವ್ಯವು ಕ್ರಮೇಣ ಕನ್ನಡ ನಾಡಿನಾದ್ಯಂತ ಹಬ್ಬಿತು. ಕೇರಳದ ಭಾಗವಾಗಿರುವ ಕಾಸರಗೋಡಿನಲ್ಲಿ ನವ್ಯ ಸಾಹಿತ್ಯವನ್ನು ಕಟ್ಟಿ ಬೆಳೆಸುವ ಉದ್ದೇಶದಿಂದ ಕಾವ್ಯ ರಚನೆಯನ್ನು ಮಾಡಿದವರ ಪೈಕಿ ಎಂ. ಗಂಗಾಧರ ಭಟ್ಟರೂ ಒಬ್ಬರು. ಅವರ ‘ನೆರಳು’ (1967) ಸಂಕಲನದಲ್ಲಿ ಎಲ್ಲ ಉದಯೋನ್ಮುಖ ಕವಿಗಳಲ್ಲಿರುವಂತೆ ನೋವು, ಹತಾಶೆ, ಹಟ ಮತ್ತು ಪ್ರತಿಭಟನೆಗಳಿವೆ. ಕಾವ್ಯದ ವಿನ್ಯಾಸದಲ್ಲಿ ಭಿನ್ನತೆಯನ್ನು ತರಬಯಸುವ ತುಡಿತವಿದೆ. ನವ್ಯ ಸಾಹಿತ್ಯವನ್ನು ಪ್ರಭಾವಿಸಿದ ಭ್ರಮ ನಿರಸನ, ಯಾಂತ್ರಿಕ ಜೀವನ, ಮೌಲ್ಯಗಳ ಅಳಿವು,…

Read More

ಬೆಂಗಳೂರು : ರಂಗಮಂಡಲ (ರಿ.) ಬೆಂಗಳೂರು ಮತ್ತು ಸಿವಗಂಗ ಟ್ರಸ್ಟ್ (ರಿ.) ಇದರ ವತಿಯಿಂದ ಹಮ್ಮಿಕೊಂಡಿದ್ದ ‘ಬಣ್ಣದ ಬೇಸಿಗೆ’ ಮಕ್ಕಳ ರಂಗ ಶಿಬಿರದ ಸಮಾರೋಪ ಸಮಾರಂಭವು ದಿನಾಂಕ 12-05-2024ರಂದು ಸಂಜೆ 6-00 ಗಂಟೆಗೆ ಸಿವಗಂಗ ರಂಗಮಂದಿರದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಬೆಂಗಳೂರಿನ ಬಿ.ಎಂ.ಶ್ರೀ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಬೈರಮಂಗಲ ರಾಮೇಗೌಡ, ನಮ್ಮ ಕನ್ನಡಿಗರ ವಿಜಯಸೇನೆ ಇದರ ಅಧ್ಯಕ್ಷರಾದ ಶ್ರೀ ವಿಜಯಕುಮಾರ್ ಎಸ್., ಸರ್ ಎಂ. ವಿ. ಬಡಾವಣೆಯ ಅಧ್ಯಕ್ಷರಾದ ಶ್ರೀ ರಮೇಶ್ ಎನ್. ಮತ್ತು ಚಲನಚಿತ್ರ ಕಲಾವಿದ ಹಾಗೂ ಸಂಗೀತ ನಿರ್ದೇಶಕರಾದ ಶ್ರೀ ಪ್ರಶಾಂತ ಸಿದ್ಧಿಯವರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ನಿರ್ಮಲ ನಾದನ್ ಅವರು ನಿರ್ದೇಶನದಲ್ಲಿ ರಾಷ್ಟ್ರಕವಿ ಕುವೆಂಪು ವಿರಚಿತ ‘ನನ್ನ ಗೋಪಾಲ’ ಮಕ್ಕಳ ನಾಟಕದ ಪ್ರದರ್ಶನ ನಡೆಯಲಿದೆ. ಈ ನಾಟಕದ ರಂಗ ವಿನ್ಯಾಸ ಭೀಮೇಶ್ ಕೆ. ಮತ್ತು ಕಲಾವಿನ್ಯಾಸ ಮಧು ಆರ್ಯ ಇವರು ಮಾಡಿದ್ದು, ಸಂಗೀತ ನಿರ್ದೇಶನ ಪ್ರಶಾಂತ್ ಸಿದ್ಧಿ ಮತ್ತು ಪ್ರಸಾದನದಲ್ಲಿ ಎಸ್. ಮೋಹನ್ ಕುಮಾರ್ ಸಹಕರಿಸಲಿದ್ದಾರೆ.

Read More

ಕಾಸರಗೋಡು : ಬೇಕಲ ಗೋಕುಲಂ ಗೋಶಾಲೆ ಪರಂಪರಾ ವಿದ್ಯಾಪೀಠದಲ್ಲಿ ಒಂಭತ್ತು ದಿನಗಳ ನೃತ್ಯೋತ್ಸವ ‘ವೈಶಾಖ ನಟನಂ 24’ ಕಾರ್ಯಕ್ರಮವು ದಿನಾಂಕ 08-05-2024ರಂದು ಪ್ರಾರಂಭಗೊಂಡಿತು. ಈ ಕಾರ್ಯಕ್ರಮವನ್ನು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಪ್ರಧಾನ ಅರ್ಚಕರಾದ ಸುಬ್ರಹ್ಮಣ್ಯ ಅಡಿಗ ಇವರು ದೀಪ ಬೆಳಗಿಸಿ ಚಾಲನೆಯನ್ನು ನೀಡಿ ಮಾತನಾಡುತ್ತಾ “ಭಾರತೀಯ ಕಲಾಪ್ರಕಾರಗಳು ಸಂಸ್ಕೃತಿಯ ಪ್ರತೀಕವಾಗಿದೆ. ಸಂಗೀತ, ನೃತ್ಯ ಮೊದಲಾದ ವಿಶಿಷ್ಟ ಕಲೆಗಳಿಗೆ ಪ್ರೋತ್ಸಾಹವನ್ನು ನೀಡುವ ನಿಟ್ಟಿನಲ್ಲಿ ಗೋಕುಲಂ ಗೋಶಾಲೆಯ ನಿರಂತರ ಪ್ರಯತ್ನ ಶ್ಲಾಘನೀಯ. ಸಂಗೀತ, ನೃತ್ಯ, ಯಕ್ಷಗಾನ, ಭಜನೆ ಮೊದಲಾದವುಗಳಲ್ಲಿ ಮಕ್ಕಳನ್ನು ತೊಡಗಿಸಿಕೊಂಡಾಗ ಅದು ಮುಂದಿನ ತಲೆಮಾರಿಗೆ ವರ್ಗಾವಣೆಯಾಗುತ್ತದೆ. ಇಂತಹ ಕಲಾಪ್ರಕಾರಗಳನ್ನು ಉಳಿಸಿಕೊಳ್ಳುವಲ್ಲಿ ಹಿರಿಯರು ಮುತುವರ್ಜಿ ವಹಿಸಬೇಕು” ಎಂದು ಅಭಿಪ್ರಾಯಪಟ್ಟರು. ಗೋಶಾಲೆಯ ಪ್ರಧಾನರಾದ ವಿಷ್ಣುಪ್ರಸಾದ ಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಹಾಗೂ ಪೂರಕಳಿ ಅಕಾಡೆಮಿ ಅಧ್ಯಕ್ಷ ಕೆ. ಕುಂಞರಾಮನ್, ಸಂಗೀತಗಾರ ಟಿ.ಪಿ. ಶ್ರೀನಿವಾಸನ್, ಮೋರ್ಸಿಂಗ್ ವಾದಕ ಪಯ್ಯನ್ನೂರು ಗೋವಿಂದ ಪ್ರಸಾದ್, ಪಲ್ಲವ ನಾರಾಯಣನ್ ಶುಭಹಾರೈಸಿದರು. ವಿನೋದ್ ಕೃಷ್ಣನ್ ಸ್ವಾಗತಿಸಿ, ಡಾ. ನಾಗರತ್ನ ವಂದಿಸಿದರು.…

Read More

ಅಜೆಕಾರು : ಮುಂಬೈಯ ಯಕ್ಷಗುರು ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರು ತಮ್ಮ ಹುಟ್ಟೂರು ಅಜೆಕಾರಿನ ಕಲ್ಕುಡಮಾರ್ ಎಂಬಲ್ಲಿ ನೂತನವಾಗಿ ಕಟ್ಟಿಸಿದ ‘ಶ್ರೀ ಬಾಲಾಜಿ’ ಬಾಲಾಶಯ ನಿಲಯದ ಗೃಹಪ್ರವೇಶದ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಸೇವಾ ಬಯಲಾಟ ಹಾಗೂ ಕಲಾವಿದರರಿಗೆ ಸನ್ಮಾನ ಕಾರ್ಯಕ್ರಮವು ದಿನಾಂಕ 03-05-2024 ರಂದು ಅಜೆಕಾರಿನ ಕಲ್ಕುಡಮಾರಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಲು ಆಗಮಿಸಿದ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀಮದ್ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರು ಮಾತನಾಡಿ “ಕರಾವಳಿ ಭಾಗದ ಪ್ರಮುಖ ಧಾರ್ಮಿಕ ಮತ್ತು ಸಾಂಸ್ಕೃತಿಕ ಸ್ವರೂಪದ ಏಕೈಕ ಕಲೆ ಯಕ್ಷಗಾನ. ಪುರಾಣದ ಸಂದೇಶಗಳನ್ನು ಸರಳ ರೂಪದಲ್ಲಿ ಜನಮಾನಸಕ್ಕೆ ಮುಟ್ಟಿಸುವ ಶ್ರೇಷ್ಠ ಕಾರ್ಯ ಯಕ್ಷಗಾನದಿಂದ ಆಗುತ್ತಿದೆ. ಅದೇ ರೀತಿ ತಮ್ಮ ಬದುಕಿನ ಅಶೋತ್ತರಗಳು ಈಡೇರಿದ ಸಂದರ್ಭದಲ್ಲಿ ಹರಕೆ ಬಯಲಾಟಗಳನ್ನು ಆಡಿಸುವ ಸಂಪ್ರದಾಯವೂ ಇಲ್ಲಿ ಬೆಳೆದು ಬಂದಿದೆ. ಮುಖ್ಯ ಅಭ್ಯಾಗತರಾಗಿ ಆಗಮಿಸಿದ ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕ ವೇದಮೂರ್ತಿ ಅನಂತಪದ್ಮನಾಭ ಆಸ್ರಣ್ಣರು…

Read More

ಉಡುಪಿ : ಉಡುಪಿ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ ಮತ್ತು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಉಡುಪಿ ಇವರ ಸಹಯೋಗದೊಂದಿಗೆ ಕನ್ನಡ ಸಾಹಿತ್ಯ ಪರಿಷತ್ತಿನ 110ನೇ ಸಂಸ್ಥಾಪನಾ ದಿನಾಚರಣೆ ಮತ್ತು ದತ್ತಿ ಉಪನ್ಯಾಸ ಕಾರ್ಯಕ್ರಮವು ದಿನಾಂಕ 07-05-2024ರಂದು ಉಡುಪಿಯ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ನಡೆಯಿತು. ಸಮಾರಂಭವನ್ನು ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಉದ್ಘಾಟಿಸಿದರು. ಡಾ. ಕೋಟ ಶಿವರಾಮ ಕಾರಂತ ದತ್ತಿ ಉಪನ್ಯಾಸದಲ್ಲಿ ‘ಕಾರಂತರ ಸಾಹಿತ್ಯ ಚಿಂತನೆ’ ಈ ವಿಷಯದ ಕುರಿತು ಮಾತನಾಡಿದ ಸಾಹಿತಿ ಡಾ. ನಿಕೇತನ, “ಕಾರಂತರ ಕೃತಿಗಳು ಓದುಗರನ್ನು ಸಹೃದಯಿಗಳನ್ನಾಗಿ ಮಾಡುತ್ತದೆ. ವೈಚಾರಿಕ ದೃಷ್ಟಿಕೋನ ಬೆಳೆಸುತ್ತದೆ. ಪದವೀಧರರು ವಿದ್ಯಾವಂತರೆನಿಸಿಕೊಳ್ಳುವುದಿಲ್ಲ. ವಿದ್ಯೆಯ ಜೊತೆಗೆ ವಿವೇಕ ಮೂಡಲು ಸಾಹಿತ್ಯ ಓದಬೇಕು. ಬದುಕನ್ನು ಸಂಭ್ರಮಿಸಬೇಕಾದರೆ ವರ್ತಮಾನದಲ್ಲಿ ಜೀವಿಸಬೇಕು. ಇದರಿಂದ ವ್ಯಕ್ತಿ ಶಕ್ತಿಯಾಗಲು ಸಾಧ್ಯ. ಸಣ್ಣ ವಿಷಯಗಳಿಗೆ ಆತ್ಮಹತ್ಯೆಗೆ ಮುಂದಾಗುವ ಎಳೆಯ ಮನಸ್ಸುಗಳು ಕಾರಂತರ ಕೃತಿಗಳನ್ನು ಓದಬೇಕು. ಆಗ ಅಂಥ ಆಲೋಚನೆಗಳೇ ಹುಟ್ಟುಕೊಳ್ಳುವುದಿಲ್ಲ, ಬದುಕಿನ ಅನನ್ಯತೆ ಅರಿವಾಗುತ್ತದೆ” ಎಂದು ಹೇಳಿದರು.…

Read More

ಸುರತ್ಕಲ್ : ಮಣಿ ಕೃಷ್ಣಸ್ವಾಮಿ ಅಕಾಡೆಮಿ ಮತ್ತು ಸುರತ್ಕಲ್ ನಾಗರಿಕ ಸಲಹಾ ಸಮಿತಿ ಸಂಸ್ಥೆಗಳ ಆಶ್ರಯದಲ್ಲಿ ಹಿರಿಯ ಸಂಗೀತ ಗುರು ಪಡುಬಿದ್ರಿ ಸುಬ್ರಾಯ ಮಾಣಿ ಭಾಗವತರ್ ಸಂಸ್ಮರಣೆ ಕಾರ್ಯಕ್ರಮವು ದಿನಾಂಕ 12-05-2024ರಂದು 5ಗಂಟೆಗೆ ಸುರತ್ಕಲ್‌ನ ‘ಅನುಪಲ್ಲವಿ’ಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ದೀಕ್ಷಾ ಶೆಟ್ಟಿ ಮತ್ತು ಯುವ ಕಲಾಮಣಿ ಶ್ರೇಯಾ ಕೊಳತ್ತಾಯ ಇವರಿಂದ ಸಂಗೀತ ಕಛೇರಿ ನಡೆಯಲಿದೆ. ಇವರಿಗೆ ವಯಲಿನ್‌ನಲ್ಲಿ ಸುನಾದ ಪಿ.ಎಸ್. ಮತ್ತು ಮೃದಂಗದಲ್ಲಿ ಪ್ರಣವ್ ಸುಬ್ರಹ್ಮಣ್ಯ ಸಹಕರಿಸಲಿರುವರು. ಇದೇ ಸಂದರ್ಭದಲ್ಲಿ ಮಂಗಳೂರು ಸ್ಟಿಕ್ ಮೆಕೆ ವಿಭಾಗದಲ್ಲಿ ಸಕ್ರಿಯ ಕಾರ್ಯಕರ್ತರಾಗಿ ದುಡಿದು ತಮ್ಮ ಬಿ.ಇ. ಪದವಿಯನ್ನು ಪೂರ್ತಿಗೊಳಿಸಿ ಊರಿಗೆ ತೆರಳುತ್ತಿರುವ ಸೂರ್ಯ ಗಣೇಶ್, ಪ್ರಣವ್ ಸುಬ್ರಹ್ಮಣ್ಯ ಇವರಿಗೆ ಬೀಳ್ಕೊಡುಗೆ ಜರಗಲಿದೆ. ಸುರತ್ಕಲ್ ವಿಭಾಗದ ಕನ್ನಡ ಸಾಹಿತ್ಯ ಪರಿಷತ್ ಇದರ ಅಧ್ಯಕ್ಷೆ ಗುಣವತಿ ರಮೇಶ್ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದು, ಕಲಾಸಕ್ತರಿಗೆ ಮುಕ್ತ ಪ್ರವೇಶವಿರುವುದಾಗಿ ಅಕಾಡೆಮಿ ಕಾರ್ಯದರ್ಶಿ ಪಿ. ನಿತ್ಯಾನಂದ ರಾವ್ ತಿಳಿಸಿದ್ದಾರೆ.

Read More

ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಡಿಕೇರಿ ನಗರದ ಕ.ಸಾ.ಪ. ಕಛೇರಿಯಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವು ದಿನಾಂಕ 05-05-2024ರಂದು ನಡೆಯಿತು. ಈ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಇವರು ಮಾತನಾಡಿ “ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿಗೆ ಇದೀಗ 110ನೆಯ ವರ್ಷದ ಸಂಭ್ರಮ. ಕನ್ನಡ ನಾಡು, ನುಡಿ, ಸಂಸ್ಕೃತಿ ರಕ್ಷಣೆಗಾಗಿ 1915ರಲ್ಲಿ ಆಗಿನ ಮೈಸೂರು ಸಂಸ್ಥಾನದ ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ವಿಶೇಷ ಕಾಳಜಿ ವಹಿಸಿ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಪರಿಷತ್ ಸಂಸ್ಥಾಪನೆಗೊಳ್ಳಲು ಪ್ರಮುಖ ಕಾರಣರಾಗಿದ್ದರು. ಆಗಿನಿಂದ ಇಂದಿನವರೆಗೂ ಹಲವು ಮಹನೀಯರು ಕನ್ನಡ ಕಟ್ಟುವ ಕಾರ್ಯದಲ್ಲಿ ತೊಡಗಿ ಕನ್ನಡ ನಾಡು, ನುಡಿ ಬೆಳವಣಿಗೆಗೆ ನೆರವಾಗಿದ್ದಾರೆ. ಕನ್ನಡ ನಾಡಿನಲ್ಲಿ ಕೈಗಾರಿಕೆ, ವಿದ್ಯೆ, ಕೃಷಿಗೆ ಆದ್ಯತೆ ನೀಡಿದ್ದ ಅವರು, ಮೈಸೂರು ಸಂಸ್ಥಾನದಲ್ಲಿ ಬೃಹತ್ ಕೈಗಾರಿಕೆ ಸ್ಥಾಪನೆ…

Read More

ಉಡುಪಿ : ಉಡುಪಿಯ ಯಕ್ಷಗಾನ ಕಲಾರಂಗವು ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಸ್ಮರಣೆಯಲ್ಲಿ ನೀಡುವ ‘ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ’ಗೆ ಹಿರಿಯ ಯಕ್ಷಗಾನ ಕಲಾವಿದ ಹಾಗೂ ವಿದ್ವಾಂಸರಾದ ಗುರುರಾಜ ಮಾರ್ಪಳ್ಳಿ ಆಯ್ಕೆಯಾಗಿದ್ದಾರೆ. ಮಾರ್ಪಳ್ಳಿಯವರು ಯಕ್ಷಗಾನವಲ್ಲದೆ ನಾಟಕ, ಸಿನೇಮಾ, ಸಂಗೀತಾ, ಶಿಲ್ಪ ಮತ್ತು ಸಾಹಿತ್ಯ ಹೀಗೆ ಕಲೆಯ ಬಹು ಆಯಾಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡ ಬಹುಮುಖೀ ಕಲಾಸಾಧಕರಾಗಿದ್ದಾರೆ. ಪ್ರಶಸ್ತಿಯು ಪ್ರಶಸ್ತಿ ಪರಿಕರ ಸಹಿತ ರೂಪಾಯಿ 40,000/- ನಗದು ಪುರಸ್ಕಾರವನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 19-05- 2024ರ ಭಾನುವಾರದಂದು ಯಕ್ಷಗಾನ ಕಲಾರಂಗದ ನೂತನ ಕಟ್ಟಡದ ಐವೈಸಿ ಸಭಾಂಗಣದಲ್ಲಿ ಪ್ರಶಸ್ತಿ ಸ್ಥಾಪಕ ತಲ್ಲೂರು ಫ್ಯಾಮಿಲಿ ಟ್ರಸ್ಟಿನ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಇವರ ಉಪಸ್ಥಿತಿಯಲ್ಲಿ ಅತಿಥಿ ಗಣ್ಯರ ಸಮಕ್ಷಮದಲ್ಲಿ ನಡೆಯಲಿದೆ.

Read More

ಸುರತ್ಕಲ್ : ಸುರತ್ಕಲ್ ರೋಟರಿ ಕ್ಲಬ್ ಆಯೋಜಿಸಿದ್ದ ಸಾಹಿತ್ಯ ಮತ್ತು ಬದುಕು ವಿಶೇಷ ಉಪನ್ಯಾಸ ಕಾರ್ಯಕ್ರಮವು ದಿನಾಂಕ 04-05-2024ರಂದು ಸುರತ್ಕಲ್ಲಿನ ವಿದ್ಯಾದಾಯಿನಿ ಸಂಕಿರಣದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಯುವ ಸಾಹಿತಿ ಹಾಗೂ ಸುರತ್ಕಲ್ ಎಂ. ಆರ್. ಪಿ. ಎಲ್. ಸಂಸ್ಥೆಯ ಸಹಾಯಕ ಮೇಲ್ವಿಚಾರಕ ಅಧಿಕಾರಿ ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು “ಬದುಕಿನ ಪರಿಪೂರ್ಣತೆಗೆ ಸಾಹಿತ್ಯದ ಓದು ಅಗತ್ಯ. ಮನೋರಂಜನೆಯೊಂದಿಗೆ ಜ್ಞಾನದ ವಿಸ್ತರಣೆಗೆ ಕಾರಣವಾಗುವ ಸಾಹಿತ್ಯಾಭಿರುಚಿಯನ್ನು ಪ್ರತಿಯೊಬ್ಬರು ಮೂಡಿಸಿಕೊಳ್ಳಬೇಕು. ಭಾವನಾತ್ಮಕ ಕೌಶಲ್ಯ ಇಂದಿನ ಅಗತ್ಯವಾಗಿದ್ದು ಈ ನಿಟ್ಟಿನಲ್ಲಿ ಸಾಮಾಜಿಕ ಸೇವಾ ಸಂಸ್ಥೆಗಳ ಕಾರ್ಯ ಮಹತ್ತರದ್ದಾಗಿದೆ.” ಎಂದು ಹೇಳಿದರು. ಕೃಷ್ಣರಾಜ ತಂತ್ರಿ ಯು. ಎಸ್. ಎ. ಮಾತನಾಡಿ “ಮಕ್ಕಳ ಶಾಲೆಗೆ ಹೋಗುವ ಹಂತದಲ್ಲಿಯೇ ಓದಿನ ಅಭಿರುಚಿ ಬೆಳೆಸುವ ಕಾರ್ಯ ನಡೆಯಬೇಕಿರುವುದು ಭಾವನೆಗಳ ಅಭಿವ್ಯಕ್ತಿಗೆ ಸಾಹಿತ್ಯ ಮಾಧ್ಯಮ ಉಪಯುಕ್ತವಾಗಿದೆ.” ಎಂದರು. ಸುರತ್ಕಲ್ ರೋಟರಿ ಕ್ಲಬ್ ಅಧ್ಯಕ್ಷ ಯೋಗಿಶ್ ಕುಳಾಯಿ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರೊ. ಕೃಷ್ಣಮೂರ್ತಿ ಆಶಯನುಡಿಗಳನ್ನಾಡಿದರು. ರೋಟರಿ ಕ್ಲಬ್…

Read More

ತೆಕ್ಕಟ್ಟೆ: ಶ್ರೀ ಕೈಲಾಸ ಕಲಾಕ್ಷೇತ್ರ ತೆಕ್ಕಟ್ಟೆ, ಧಮನಿ ಹಾಗೂ ದಿಮ್ಸಾಲ್ ಸಂಸ್ಥೆಗಳ ಸಹಯೋಗದೊಂದಿಗೆ ಆಯೋಜಿಸಿದ ‘ರಜಾರಂಗು-24’ ಶಿಬಿರದಲ್ಲಿ ಮಕ್ಕಳ ನಾಟಕೋತ್ಸವದ ಎರಡನೇಯ ದಿನದ ಕಾರ್ಯಕ್ರಮವು ದಿನಾಂಕ 07-05-2024 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಬಿರದ ನಿರ್ದೇಶಕರಾದ ನಾಗೇಶ್ ಕೆದೂರು ಅವರನ್ನು ಅಭಿವಂದಿಸಿ ಮಾತನಾಡಿದ ಪ್ರಸಿದ್ಧ ಸಾಹಿತಿ ಸುಧಾ ಆಡುಕುಳ “ಸಾಂಸ್ಕೃತಿಕ ಚಟುವಟಿಕೆಗಳು ಜೀವಂತವಾಗಿದ್ದರೆ ಆ ಊರನ್ನು ಹೊರಗಿನವರು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಗುರುತಿಸುತ್ತಾರೆ. ತೆಕ್ಕಟ್ಟೆಯ ಸಾಂಸ್ಕೃತಿಕ ಕಾರ್ಯಕ್ರಮದ ಸುದ್ದಿಗಳು ಇತ್ತೀಚಿಗೆ ಬಹಳವಾಗಿ ಪತ್ರಿಕೆಗಳಲ್ಲಿ ಬರುತ್ತಿವೆ. ಕಲಾವಿದರ ಬಳಗವೇ ಇಲ್ಲಿಯ ಕೇಂದ್ರಗಳಲ್ಲಿ ಸೃಷ್ಠಿಯಾಗುತ್ತಿದೆ. ಮನಸ್ಸುಗಳನ್ನು ಮತ್ತು ಸಾಂಸ್ಕೃತಿಕ ರೂಪಗಳನ್ನು ಒಟ್ಟು ಗೂಡಿಸಿ ಹೊಲಿಯುವ ಕಾರ್ಯ ತೆಕ್ಕಟ್ಟೆಯ ಸಂಸ್ಥೆಗಳದ್ದಾಗುತ್ತಿದೆ. ಮಕ್ಕಳ ಶಿಬಿರಗಳನ್ನು ನೆರವೇರಿಸುವುದು ಸುಲಭದ ಕೆಲಸವಲ್ಲ. ದಶವಾರ್ಷಿಕವಾದ ಬೆಳೆಗಾಗಿ ನಿರೀಕ್ಷಿಸುತ್ತಿರುವ ಕೆಲಸವಾಗಿದೆ. ಮುಂದೊಂದು ದಿನ ಚಿತ್ರಕಾರನಾಗಬೇಕು, ಡಾಕ್ಟರ್ ಆಗಬೇಕು, ಕಲಾವಿದನಾಗಬೇಕು ಎಂದು ನಿರ್ಣಯವನ್ನು ತೆಗೆದುಕೊಳ್ಳುವ ತೀರ್ಮಾನ ಶಿಬಿರದಲ್ಲಿ ಆಗುತ್ತದೆ.” ಎಂದು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉದಯ್ ಕುಮಾರ್ ಶೆಟ್ಟಿ ಮಾತನಾಡಿ “ಕರಾವಳಿಯ ಸಾಂಸ್ಕೃತಿಕ…

Read More