Subscribe to Updates
Get the latest creative news from FooBar about art, design and business.
Author: roovari
ಉಡುಪಿ/ಮಂಗಳೂರು : ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳಲಿರುವ ಸುವರ್ಣ ಮಹೋತ್ಸವದ ಸಂದರ್ಭ ಕರ್ನಾಟಕ ಸಂಭ್ರಮ 50 ಹೆಸರಾಗಲಿ ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಂತ ವರ್ಷಪೂರ್ತಿ ವೈವಿಧ್ಯಮಯ, ವರ್ಣಮಯ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ವಿಶೇಷ ಮೆರಗು ನೀಡಲು ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉದ್ದೇಶಿಸಿದೆ. ಈ ಸಂಭ್ರಮ ಹೆಚ್ಚಿಸಲು ಕನ್ನಡ ನಾಡು-ನುಡಿ ಸಂಸ್ಕೃತಿಯನ್ನು ಬಿಂಬಿಸುವ ವಿಶಿಷ್ಟವಾದ ಲಾಂಛನ (ಲೋಗೋ)ವನ್ನು ಬಳಸಲು ತೀರ್ಮಾನಿಸಲಾಗಿದ್ದು, ಆಸಕ್ತರಿಂದ ಸುಂದರವಾದ ಲಾಂಛನದ ಮಾದರಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾಗುವ ಮಾದರಿ ಲಾಂಛನಕ್ಕೆ ರೂ.25,000/- ಬಹುಮಾನ ನಿಗದಿಪಡಿಸಲಾಗಿದೆ. ಲಾಂಛನದ ಮಾದರಿಯನ್ನು ಕಳುಹಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿರುತ್ತದೆ. ಆಸಕ್ತರು ಮಾಹಿತಿಗೆ https://www.kannadasiri.karnataka.gov.in ನೋಡಬಹುದು.
ಉಡುಪಿ : ಎರಡೂವರೆ ದಶಕಗಳ ಕಾಲ ವಿವಿಧ ಮೇಳಗಳಲ್ಲಿ ವೇಷಧಾರಿಯಾಗಿ ಕಲಾಸೇವೆ ಮಾಡಿದ ಯುವ ಕಲಾವಿದ ಹೆರಂಜಾಲು ರಾಜೇಂದ್ರ ಗಾಣಿಗ (41ವರ್ಷ) ಅಲ್ಪಕಾಲದ ಅಸೌಖ್ಯದಿಂದ ದಿನಾಂಕ 21-09-2023ರಂದು ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮಾರಣಕಟ್ಟೆ, ಹಾಲಾಡಿ, ಸೌಕೂರು, ನೀಲಾವರ ಮೇಳಗಳಲ್ಲಿ ಹಾಗೂ ಸುಮಾರು ಹತ್ತು ವರ್ಷಗಳ ಕಾಲ ಮಂದಾರ್ತಿ ಮೇಳದಲ್ಲಿ ಪುರುಷ ವೇಷಧಾರಿಯಾಗಿ ಕಲಾ ಸೇವೆಗೈದಿದ್ದಾರೆ. ಅವಿವಾಹಿತರಾಗಿದ್ದ ಇವರು ತಾಯಿ ಹಾಗೂ ಅಪಾರ ಸಂಖ್ಯೆಯ ಕಲಾಭಿಮಾನಿಗಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.
ಉಡುಪಿ : ರಾಗ ಧನ, ಉಡುಪಿ (ರಿ) ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ಆಯೋಜಿಸುತ್ತಿರುವ ಕಲಾವಿಹಾರಿ ಶ್ರೀ ಎ.ಈಶ್ವರಯ್ಯ ಸ್ಮಾರಕ ಕಲಾಪ್ರವೀಣ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಗರತ್ನಮಾಲಿಕೆ -16 ‘ಭಾವಗಾನಸಿಂಚನ’ ಕಾರ್ಯಕ್ರಮವು ದಿನಾಂಕ 24-09-2023ರ ಭಾನುವಾರ ಕುಕ್ಕೆಹಳ್ಳಿಯ ಕನಸು ರೆಸಾರ್ಟಿನಲ್ಲಿ ನಡೆಯಲಿದೆ. ಸಂಜೆ 3.30ರಿಂದ ಆರಂಭವಾಗಲಿರುವ ಈ ಕಾರ್ಯಕ್ರಮದಲ್ಲಿ ಮೊದಲಿಗೆ ಹೊಸಬೆಟ್ಟಿನ ಕಲಾ ತರಂಗಿಣಿ ತಂಡದ ಶ್ರೀ ರಾಜೇಶ್ ರಾವ್ ಮತ್ತು ಶಿಷ್ಯರಿಂದ ವೇಣು ವಾದನ ನಡೆಯಲಿದ್ದು, ಶ್ರೀ ಬಾಲಚಂದ್ರ ಭಾಗವತ್ ಮೃದಂಗದಲ್ಲಿ ಸಹಕರಿಸಲಿದ್ದಾರೆ. ಬಳಿಕ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಅತಿಥಿ ಗಣ್ಯರು ಪ್ರೊ. ಮುರಳೀಧರ ಉಪಾಧ್ಯ ಹಿರಿಯಡಕ ಇವರಿಗೆ ಕಲಾವಿಹಾರಿ ಶ್ರೀ ಎ.ಈಶ್ವರಯ್ಯ ಸ್ಮಾರಕ ‘ಕಲಾಪ್ರವೀಣ’ ಪ್ರಶಸ್ತಿ ಪ್ರದಾನ ಮಾಡಲಿರುವರು. ಸಭಾಕಾರ್ಯಕ್ರಮದ ಬಳಿಕ ನಡೆಯಲಿರುವ ‘ಭಾವಗಾನಸಿಂಚನ’ ಕಾರ್ಯಕ್ರಮವದ ಹಾಡುಗಾರಿಕೆಯಲ್ಲಿ ಕೆ.ಆರ್.ರಾಘವೇಂದ್ರ ಆಚಾರ್ಯ, ಶ್ರೀಮತಿ ಗಾರ್ಗಿ ಎನ್ ಶಬರಾಯ, ಶ್ರೀಮತಿ ಶ್ರುತಿ ಗುರುಪ್ರಸಾದ್ ಹಾಗೂ ಕುಮಾರಿ ಶ್ರಾವ್ಯ ಬಾಸ್ರಿ ಭಾಗವಹಿಸಲಿದ್ದು, ತಬಲಾದಲ್ಲಿ ಎನ್.ಮಾಧವ ಆಚಾರ್ಯ,…
ಉಡುಪಿ : ಯಶಸ್ ಪ್ರಕಾಶನ ಕಟಪಾಡಿ ಉಡುಪಿ, ತುಳುಕೂಟ ಉಡುಪಿ (ರಿ.) ಮತ್ತು ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಕಾಪು ಇವರ ಸಹಯೋಗದಲ್ಲಿ ಪತ್ರಕರ್ತ ಪ್ರಕಾಶ ಸುವರ್ಣ ಕಟಪಾಡಿ ರಚಿಸಿರುವ ತುಳು ನಾಟಕ ‘ಅಪ್ಪೆಮ್ಮೆ’ ಇದರ ಪುಸ್ತಕ ಬಿಡುಗಡೆ ಮತ್ತು ತುಳು ಕವಿಗೋಷ್ಠಿ ಕಾರ್ಯಕ್ರಮವು ದಿನಾಂಕ 24-09-2023ರಂದು ಉಡುಪಿ ಕಿದಿಯೂರು ಹೊಟೇಲಿನ ಪವನ್ ರೂಪ್ ಟಾಪ್ ಇಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಶ್ರೀ ಎ.ಸಿ. ಭಂಡಾರಿ ಇವರ ಅಧ್ಯಕ್ಷತೆಯಲ್ಲಿ ಶ್ರೀ ಚೇತನ್ ಕುಮಾರ್ ಶೆಟ್ಟಿಯವರು ಉದ್ಘಾಟಿಸುತ್ತಾರೆ. ಶ್ರೀ ವಿಶ್ವನಾಥ ಶೆಣೈ ಮತ್ತು ಶ್ರೀಮತಿ ಪ್ರಭಾವತಿ ಇವರು ಪುಸ್ತಕ ಬಿಡುಗಡೆ ಮಾಡಲಿದ್ದು, ಡಾ. ವಿ.ಕೆ. ಯಾದವ್ ಸಸಿಹಿತ್ಲು ಇವರು ಪುಸ್ತಕ ಪರಿಚಯ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಕುಮಾರಿ ಪ್ರಣಮ್ಯ ಉಪಾಧ್ಯ ಮತ್ತು ಕುಮಾರಿ ವೈಷ್ಣವಿ ಇವರಿಂದ ‘ಯಕ್ಷನೃತ್ಯ’ ಹಾಗೂ ತಂದೆ ತಾಯಿಯರೊಂದಿಗೆ ಮಕ್ಕಳ ‘ತುಳು ಕವಿಗೋಷ್ಠಿ’ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಯಶಸ್ ಪ್ರಕಾಶನ ಕಟಪಾಡಿ ಉಡುಪಿ ಇದರ ಮುಖ್ಯಸ್ಥರಾದ ಶ್ರೀಮತಿ ಪ್ರೀತಿ ಪ್ರಕಾಶ…
ಮಂಗಳೂರು : ಸನಾತನ ನಾಟ್ಯಾಲಯದ ಆಶ್ರಯದಲ್ಲಿ ‘ಸನಾತನ ನೃತ್ಯೋತ್ಸವ’ ಕಾರ್ಯಕ್ರಮವು ದಿನಾಂಕ 17-09-2023ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಸನಾತನ ನಾಟ್ಯಾಲಯದ ವತಿಯಿಂದ ಗೌರವ ಸನ್ಮಾನ ಸ್ವೀಕರಿಸಿದ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡುತ್ತಾ, “ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲ ರೀತಿಯ ಮೂಲ ಸೌಕರ್ಯಗಳನ್ನು ಕಲ್ಪಿಸುವ ಮೂಲಕ ಸ್ವಚ್ಛ ಹಾಗೂ ಸಮೃದ್ಧ ನಗರವನ್ನು ರೂಪಿಸುವ ಜವಾಬ್ದಾರಿಯು ಪಾಲಿಕೆಯ ಹೆಗಲ ಮೇಲಿದೆ ಮತ್ತು ಅದನ್ನು ಸರ್ವಪ್ರಯತ್ನಗಳೊಂದಿಗೆ ನಿರ್ವಹಿಸಲು ಬದ್ಧವಾಗಿದೆ” ಎಂದು ಹೇಳಿದರು. ಈ ಸಂದರ್ಭದಲ್ಲಿ ‘ಶಿಕ್ಷಣದಲ್ಲಿ ರಾಷ್ಟ್ರೀಯತೆ’ ಎಂಬ ವಿಷಯದ ಬಗ್ಗೆ ಮಾತನಾಡಿದ ಯುವವಾಗ್ಮಿ ಲತೇಶ್ ಬಾಕ್ರಬೈಲು ಅವರು, “ನಮ್ಮ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ದೇಶೀಯ ಅಂಶಗಳಿಗೆ ಒತ್ತು ಕೊಡದೇ ಇರುವುದರ ಫಲವಾಗಿ ನಮ್ಮತನದ ಮಹತ್ವವನ್ನು ಮರೆತುಬಿಟ್ಟಿದ್ದೇವೆ. ನಮ್ಮ ದೇಶದಲ್ಲಿರುವ ಜ್ಞಾನ ಸಂಪತ್ತನ್ನು ಅರ್ಥಮಾಡಿಕೊಳ್ಳುವ ಪ್ರಯತ್ನವನ್ನು ನಾವು ಮಾಡಬೇಕಾಗಿದೆ. ಅದಕ್ಕೆ ಬೇಕಾದ ಪೂರಕ ವ್ಯವಸ್ಥೆಯನ್ನು ಕಲಾಮಾಧ್ಯಮಗಳ ಮೂಲಕ ರೂಪಿಸಿಕೊಳ್ಳುವ ವ್ಯವಸ್ಥೆಯಾಗಬೇಕು. ಸನಾತನ ಸಂಸ್ಕೃತಿ ಮತ್ತು…
ನಾಪೋಕ್ಲು : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆ ವತಿಯಿಂದ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ ದಿನಾಂಕ 14-09-2023ರಂದು ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆಯಿತು. ಸ್ಪರ್ಧಾ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಬಿ.ಸಿ ದೊಡ್ಡಗೌಡ ಉದ್ಘಾಟಿಸಿದರು. ದೇಶಭಕ್ತಿ ಗೀತೆ ಗಾಯನ ಸ್ಪರ್ಧೆಯಲ್ಲಿ ಸಂಪಾಜೆ ಸ್ಥಳೀಯ ಸಂಸ್ಥೆಗೊಳಪಟ್ಟ ಒಂಭತ್ತು ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ ನಾಪೋಕ್ಲು ಗ್ರಾಪಂ.ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾವತಿ ಅರುಣ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಅಧ್ಯಕ್ಷ ಧನಂಜಯ.ಎಂ, ಸಂಸ್ಥೆಯ ಎ.ಡಿ.ಸಿ ಹ್ಯಾರಿಸ್ ಕೆ.ಎ, ಅಂಕುರ್ ಪಬ್ಲಿಕ್ ಶಾಲೆಯ ಕಾರ್ಯದರ್ಶಿ ರತ್ನ ಚರ್ಮಣ, ಕೆ.ಪಿ.ಎಸ್ ಉಪಪ್ರಾಂಶುಪಾಲರಾದ ಎಂ.ಎಸ್.ಶಿವಣ್ಣ, ಕಾರ್ಯಕಾರಿ ಸಮಿತಿಯ ಕಾರ್ಯದರ್ಶಿ ಉಷಾರಾಣಿ, ಖಜಾಂಜಿ ಗಂಗಮ್ಮ, ರಂಜಿತ್, ಶಿಕ್ಷಣ ಸಂಯೋಜಕ ಹರೀಶ್ ಇನ್ನಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಂಸ್ಥೆ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಬಿ.ಸಿ.ದೊಡ್ಡಗೌಡ ಅವರನ್ನು ಸನ್ಮಾನಿಸಲಾಯಿತು. ಸ್ಪರ್ಧಾ ವಿಜೇತರು…
ಕಾಪು : ತಾಲೂಕು ಆಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇವರ ವತಿಯಿಂದ ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನ, ಕಟಪಾಡಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ ಮತ್ತು ಕಾಪು ವಿಧಾನಸಭಾ ಕ್ಷೇತ್ರ ವಿಶ್ವಬ್ರಾಹ್ಮಣ ಯುವ ಸಂಘಟನೆಯ ಆಶ್ರಯದಲ್ಲಿ ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ಆಯೋಜಿಸಲಾದ ತಾಲೂಕು ಮಟ್ಟದ ಶ್ರೀ ವಿಶ್ವಕರ್ಮ ಜಯಂತಿಯನ್ನು ದಿನಾಂಕ 17-09-2023ರಂದು ಆಚರಿಸಲಾಯಿತು. ಕಾರ್ಯಕ್ರಮವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ, ಸಾಧಕರನ್ನು ಸನ್ಮಾನಿಸಿದರು. ಕಾಪು ತಹಶೀಲ್ದಾರ್ ನಾಗರಾಜ್ ವಿ.ನಾಯ್ಕಡ ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಮುರುಡೇಶ್ವರದ ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಚೇಂಪಿ ದಿನೇಶ್ ಆಚಾರ್ಯ ಉಪನ್ಯಾಸ ನೀಡಿದರು. ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮುಕ್ತೇಸರ ಶೇಖರ ಆಚಾರ್ಯ, ಕಟಪಾಡಿ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನದ ಆಡಳಿತ ಮುಕ್ತೇಸರ ನವೀನ್ ಆಚಾರ್ಯ ಪಡುಬಿದ್ರಿ, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ ಮೂಲ್ಕಿ, ಕಾಪು…
ದೆಹಲಿ: ಗುರು ಸರೋಜಾ ವೈದ್ಯನಾಥನ್ ದಿನಾಂಕ 21-09-2023ರಂದು ತನ್ನ 86ನೆಯ ವಯಸ್ಸಿನಲ್ಲಿ ದೆಹಲಿಯ ಸ್ವಗೃಹದಲ್ಲಿ ಅನಾರೋಗ್ಯದ ಕಾರಣ ನಿಧನ ಹೊಂದಿದ್ದಾರೆ. ‘ಗಣೇಶ ನಾಟ್ಯಾಲಯ’ ಸಂಸ್ಥೆಯನ್ನು 1974ರಲ್ಲಿ ಹುಟ್ಟು ಹಾಕಿದ ಇವರೊಬ್ಬ ಪ್ರಖ್ಯಾತ ನೃತ್ಯ ಸಂಯೋಜಕಿ, ಬರಹಗಾರ್ತಿ. ನೃತ್ಯ ಮತ್ತು ಸಾಹಿತ್ಯವನ್ನು ಮುಖ್ಯವಾಗಿಟ್ಟುಕೊಂಡು ಅದರ ಶುದ್ಧತೆಯನ್ನು ಉಳಿಸಿ, ಬೆಳೆಸಿ ಇತರ ಕಲಾವಿದರೂ ಅದನ್ನು ಮುಂದಿನ ಪೀಳಿಗೆಗೆ ತಲುಪಿಸುವಂತೆ ಪ್ರಯತ್ನಿಸುವಲ್ಲಿ ಪ್ರಾಮಾಣಿಕವಾಗಿ ದುಡಿದ ಇವರೊಬ್ಬ ನೃತ್ಯ ಕ್ಷೇತ್ರದ ಹರಿಕಾರರೆಂದೇ ಹೇಳಬಹುದು. ಸಂಗೀತ ಮತ್ತು ನೃತ್ಯ ಕ್ಷೇತ್ರಕ್ಕೆ ಸಂಬಂಧಪಟ್ಟ ಹಾಗೇ ಅನೇಕ ಕೃತಿಗಳನ್ನು ಬರೆದು ಪ್ರಕಟಿಸಿದ್ದಾರೆ. 2002ರಲ್ಲಿ ಪದ್ಮಶ್ರೀ ಪ್ರಶಸ್ತಿ, 2013ರಲ್ಲಿ ಪದ್ಮಭೂಷಣ ಪ್ರಶಸ್ತಿ, ಸಂಗೀತ ನಾಟಕ ಅಕಾಡಮಿ ಪ್ರಶಸ್ತಿ ಮತ್ತು ತಮಿಳ್ನಾಡು ಸರಕಾರದಿಂದ ಕಲೈಮಾಮಣಿ ಪುರಸ್ಕಾರ ಇವೆಲ್ಲವೂ ನೃತ್ಯ ಕ್ಷೇತ್ರದಲ್ಲಿ ಅವರು ಮಾಡಿದ ಸಾಧನೆಗೆ ಸಂದ ಗೌರವಗಳು.
ಸಿದ್ದಾಪುರ : ಖ್ಯಾತ ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನಬೈಲ್ ದಿನಾಂಕ 20-09-2023ರ ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದರು. ಉ.ಕ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಗೌರಾ ನಾಯ್ಕ ಮತ್ತು ಕನ್ನಮ್ಮ ದಂಪತಿಗಳಿಗೆ 1-09-1959ರಲ್ಲಿ ಜನಿಸಿದ ಇವರು ಹಂಗಾರಕಟ್ಟೆ ಯಕ್ಷಗಾನ ಕೇಂದ್ರದಲ್ಲಿ 1984ರಲ್ಲಿ ತಮ್ಮ ಯಕ್ಷಗಾನ ಶಿಕ್ಷಣ ಆರಂಭಿಸಿದರು. ಮುಂದೆ ಗುರುಗಳಾದ ಶ್ರೀ ಕೆ.ಪಿ ಹೆಗಡೆ, ಸದಾನಂದ ಐತಾಳ, ದುರ್ಗಪ್ಪ ಗುಡಿಗಾರ, ಘೋರ್ಪಡೆ ವಿಠ್ಠಲಯ್ಯನವರು ಮತ್ತು ಶ್ರೀ ಸದಾನಂದ ಹೆಬ್ಬಾರರ ಮಾರ್ಗದರ್ಶನದಲ್ಲಿ ಪ್ರಬುದ್ದರಾಗಿ ಬೆಳೆದರು. ಸಣ್ಣಸ್ವರ, ಬಿಗಿಯಾದ ಲಯದ ಹಿಡಿತ ಹಾಗೂ ಸ್ಪಷ್ಟ ಸಾಹಿತ್ಯದ ಭಾಗವತರಾಗಿದ್ದ ಇವರು ಕೃತಿ ರಚನಾಕಾರರೂ ಆಗಿದ್ದರು. ಶ್ರೀಯುತರು ಗೋಳಿಗರಡಿ, ರಂಜದಕಟ್ಟೆ, ಅಮೃತೇಶ್ವರಿ, ಕುಮಟ, ಪೆರ್ಡೂರು, ಸಾಲಿಗ್ರಾಮ,ಹಾಲಾಡಿ, ಮಡಾಮಕ್ಕಿ, ಶನೀಶ್ವರ, ಆಜ್ರಿ, ಕಳವಾಡಿ, ಸಿಗಂದೂರು ಇತ್ಯಾದಿ ಮೇಳಗಳಲ್ಲಿ ಸೇವೆ ಸಲ್ಲಿಸಿದ್ದಾರೆ. 57ವರ್ಷ ವಯಸ್ಸಾಗಿದ್ದ ಇವರು ಪತ್ನಿ, ಪುತ್ರ, ಪುತ್ರಿ, ಅಪಾರ ಬಂಧುಗಳು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.
ಮಂಗಳೂರು : ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ವತಿಯಿಂದ ದಿ. ಲಿಯಾಂಡರ್ ವರ್ನನ್ ನೊರೊನ್ಹಾ ಸಂಸ್ಮರಣೆಯ ಸಹ ಪ್ರಾಯೋಜಕತ್ವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಏರ್ಪಡಿಸಿದ್ದ ‘ಸ್ವರ ಕುಡ್ಲ ಸೀಸನ್ -5’ ಸಂಗೀತ ಸ್ಪರ್ಧೆಯ ಉದ್ಘಾಟನಾ ಸಮಾರಂಭವು ದಿನಾಂಕ 17-09-2023ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಂಗಳೂರು ವಿಶ್ವವಿದ್ಯಾನಿಲಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕರ್ನಲ್ ಶರತ್ ಭಂಡಾರಿ ನಿಟ್ಟೆಗುತ್ತು ಇವರು ಮಾತನಾಡುತ್ತಾ “ಸಂಗೀತ ಕೇಳುವುದರಿಂದ ಮನಸ್ಸಿಗೆ ಶಾಂತಿ ನೆಮ್ಮದಿ ದೊರೆಯುತ್ತದೆ. ಉತ್ತಮ ಸಂಗೀತಗಳು ಮನಸ್ಸಿಗೆ ಮುದ ನೀಡುತ್ತವೆ. ಸಂಗೀತ ಕೇಳುವುದು ಉತ್ತಮ ಅಭ್ಯಾಸ” ಎಂದು ಅಭಿಪ್ರಾಯಪಟ್ಟರು. ಖ್ಯಾತ ಗಾಯಕ ಟಾಗುರ್ ದಾಸ್ ಅವರು ಸ್ಪರ್ಧೆಗೆ ಚಾಲನೆ ನೀಡಿದರು. ಒಕ್ಕೂಟದ ಅಧ್ಯಕ್ಷ ಮೋಹನ್ ಪ್ರಸಾದ್ ನಂತೂರು ಅಧ್ಯಕ್ಷತೆ ವಹಿಸಿದ್ದರು. ಸಿಂಫನಿ ಮ್ಯೂಸಿಕಲ್ ಇನ್ ಸ್ಟ್ರುಮೆಂಟ್ ಮಳಿಗೆಯ ಮಾಲಕರು ಲೊಯ್ ನೊರೊನ್ಹಾ ದಂಪತಿ ಹಾಗೂ ವಿಶ್ವವಿದ್ಯಾನಿಲಯ ಕಾಲೇಜು ಹಳೆ ವಿದ್ಯಾರ್ಥಿ ಸಂಘದ…