Subscribe to Updates
Get the latest creative news from FooBar about art, design and business.
Author: roovari
ಬೆಂಗಳೂರು: ಜಯಚಾಮರಾಜೇಂದ್ರ ಒಡೆಯರ್ ಅವರ 104ನೇ ಜನ್ಮ ದಿನೋತ್ಸವವನ್ನು ದಿನಾಂಕ 18-07-2023ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು. ಬಳಿಕ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ್ ಜೋಶಿಯವರು “ಜಯಚಾಮರಾಜ ಒಡೆಯರ್ ಅವರು ಮೊದಲಿನಿಂದಲೂ ಅಖಂಡ ಕರ್ನಾಟಕದ ಪ್ರತಿಪಾದಕರಾಗಿದ್ದರು. ಅಖಂಡ ಕರ್ನಾಟಕ ಅವರ ಕನಸಾಗಿತ್ತು. ಅದನ್ನು ನನಸಾಗಿಸಲು ರಾಜಪದವಿಯನ್ನು ತ್ಯಜಿಸಲೂ ಸಿದ್ಧರಾಗಿದ್ದರು. ಶ್ರೀ ಜಯಚಾಮರಾಜ ಒಡೆಯರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಕೂಡ ಆಗಿದ್ದರು. ಅವರ ಕಾಳಜಿಯಿಂದಲೇ ಬಿ.ಎಂ. ಶ್ರೀ ಅಚ್ಚಕೂಟ ಕನ್ನಡ ಮತ್ತು ಮಹಿಳಾ ಘಟಕದ ಯೋಜನೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪನೆಯಾಯಿತು. ಮಹಾರಾಜರು ರಾಷ್ಟ್ರಕವಿ ಕುವೆಂಪು ಅವರ ಶಿಷ್ಯರಾಗಿದ್ದರು. ತಾವೇ ಕುವೆಂಪು ಅವರ ಮನೆಗೆ ಹೋಗಿ ಕನ್ನಡ ಕಲಿತಿದ್ದು ಅವರ ಹಿರಿಮೆ. ಹೀಗಾಗಿಯೇ ಕನ್ನಡ ಪ್ರೇಮ ಅವರಲ್ಲಿ ಮೂಡಿತ್ತು. ಜಯಚಾಮರಾಜೇಂದ್ರ ಗ್ರಂಥರತ್ನಮಾಲೆಯ ಮೂಲಕ ವೇದ, ಪುರಾಣ ಮತ್ತು ಇತಿಹಾಸಗಳ ಗ್ರಂಥಗಳನ್ನು ಸಂಸ್ಕೃತದಿಂದ ಕನ್ನಡಕ್ಕೆ ಪಂಡಿತರಿಂದ ಅನುವಾದ ಮಾಡಿಸಿ…
ಕಾಸರಗೋಡು: ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರ ತೃತೀಯ ಚಾತುರ್ಮಾಸ್ಯದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ದಿನಾಂಕ 19-07-2023 ರಂದು ಉಡುಪಿಯ ರಾಗಧನ ಸಂಸ್ಥೆಯ ಕಾರ್ಯದರ್ಶಿಯಾದ ವಿದುಷಿ ಉಮಾ ಉದಯ ಶಂಕರ್ ಮಣಿಪಾಲ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಹಾಗೂ ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಿತು. ಹಾಡುಗಾರಿಕೆಗೆ ಜೊತೆಯಾಗಿ ವಯೊಲಿನ್ ನಲ್ಲಿ ಕು. ತನ್ಮಯಿ ಉಪ್ಪಂಗಳ ಹಾಗೂ ಮೃದಂಗದಲ್ಲಿ ಶ್ರೀ ಅಜಯಕೃಷ್ಣ ಉಪ್ಪಂಗಳ ಸಹಕರಿಸಿದರು.
ಕಳೆದ ಎರಡು ದಶಕಗಳಿಂದ ಯಕ್ಷಗಾನ ಸೇವೆಯಲ್ಲಿ ತೊಡಗಿ, 500ಕ್ಕೂ ಹೆಚ್ಚು ತಾಳಮದ್ದಳೆ ಮತ್ತು ಯಕ್ಷಗಾನಗಳಲ್ಲಿ ಭಾಗವಹಿಸಿ; “ಕಾಶ್ಯಪ ಮಹಿಳಾ ಯಕ್ಷಗಾನ ತಂಡ”ದ ಮುಂಚೂಣಿ ಕಲಾವಿದೆಯಾಗಿ ಮತ್ತು “ಯಕ್ಷ ಕಲಾಸಂಗಮ” ಎಂಬ ತಂಡವನ್ನು ಕಟ್ಟಿ ಪೋಷಿಸುತ್ತಿರುವ ಕಲಾವಿದೆ ಶ್ರೀಮತಿ ಸುಮಾ ವೆಂಕಟ್ರಮಣ ಹೆಗಡೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನಡುಗೋಡು ಎಂಬ ಪುಟ್ಟ ಗ್ರಾಮದ ಮಹಾಬಲೇಶ್ವರ ಭಟ್ಟ ಹಾಗೂ ಲಲಿತಾ ಭಟ್ ಇವರ ಮಗಳಾಗಿ 14.12.1973ರಂದು ಜನನ. ವಿದ್ವಾನ್ ಸುಬ್ರಾಯ ಭಟ್ಟ ಗಡಿಗೆಹೊಳೆ ಅವರಲ್ಲಿ ಯಕ್ಷಗಾನ ಸಾಹಿತ್ಯಾಭ್ಯಾಸ, ಹಿರಿಯ ಕಲಾವಿದ ಗಣಪತಿ ಭಾಗವತ್ ಕವ್ವಾಳೆ ಇವರಲ್ಲಿ ನೃತ್ಯಾಭ್ಯಾಸ. ನಾನಾಗ ಏಳನೇ ಕ್ಲಾಸಿನಲ್ಲಿ ಓದುತ್ತಿದ್ದೆ. ಬೆಳಗಿನ ಜಾವ ಮೂರರವರೆಗೆ ಗದಾಯುದ್ಧ ಯಕ್ಷಗಾನ ಪ್ರಸಂಗವನ್ನು ನೋಡಿ ಬಂದು ಮಲಗಿದ್ದೆ. ಕನಸಿನಲ್ಲಿ ನಾನೇ ಭೀಮನ ಪಾತ್ರ ಕಟ್ಟಿದ್ದೆ. ಮುಖದ ಮೇಲೆ ಎರಡಿಂಚು ದಪ್ಪದ ಮೀಸೆ, ಮೈಮೇಲೆ ಮಿರಿ ಮಿರಿ ಮಿನುಗುವ ಆಭರಣಗಳು, ಹಳದಿ ಕೆಂಪು ಚೌಕುಳಿ ಬಟ್ಟೆಯ ಯಕ್ಷ ವೇಷ… ಹೀಗೆ ಸಾಗಿತ್ತು ನನ್ನ ಕನಸು.…
ಉಡುಪಿ : ಶ್ರೀ ಭೈರವನಾಥೇಶ್ವರ ಸೇವಾ ಸಮಿತಿ (ರಿ.) ಪೆರ್ಡೂರು ಹಾಗೂ ಇದರ ಆಶ್ರಯದಲ್ಲಿ ನಡೆಯುತ್ತಿರುವ ಸಂಗೀತ ಶಾಲೆಯ 11ನೇ ವಾರ್ಷಿಕೋತ್ಸವದ ಅಂಗವಾಗಿ ಪೆರ್ಡೂರಿನ ಸುಬ್ರಾಯ ಕಲ್ಯಾಣ ಮಂಟಪದಲ್ಲಿ ದಿನಾಂಕ : 16-07-2023ರಂದು ಅವಿಭಜಿತ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆಯ ಉದ್ಘಾಟನಾ ಹಾಗೂ ಸಂಗೀತ ಶಾಲಾ ವಿದ್ಯಾರ್ಥಿಗಳಿಂದ ಭಜನೆ ಕಾರ್ಯಕ್ರಮ ಜರಗಿತು. ನಂತರ ಇದೇ ವೇದಿಕೆಯಲ್ಲಿ ಆಹ್ವಾನಿತ ತಂಡಗಳ ಕುಣಿತ ಭಜನಾ ಸ್ಪರ್ಧೆ ಹಾಗೂ ಸಂಗೀತ ಶಾಲೆಯ ವಿದ್ಯಾರ್ಥಿಗಳಿಗೆ ಸಂಗೀತ ಸ್ಪರ್ಧೆಗಳು ನಡೆದವು. ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಸಮಿತಿಯ ಗೌರವಾಧ್ಯಕ್ಷ ಶ್ರೀ ಕೆ. ಶಾಂತಾರಾಮ್ ಸೂಡ “ಒಂದು ಸಮಿತಿ ಸಾಮಾಜಿಕ ಕಳಕಳಿಯುಳ್ಳ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಜನರನ್ನು ತಲುಪುವಲ್ಲಿ ಹಾಗೂ ಜನರ ಹೃದಯದಲ್ಲಿ ತನ್ನ ಸ್ಥಾನವನ್ನು ಪಡೆದುಕೊಂಡು ಮುಂದುವರೆಯುತ್ತಾ ಸಾಗುವುದು ಒಂದು ಮಹಾನ್ ತಪಸ್ಸು. ಅಂತಹ ಕಾರ್ಯವನ್ನು ಪೆರ್ಡೂರಿನ ಶ್ರೀ ಭೈರವನಾಥೇಶ್ವರ ಸೇವಾ ಸಮಿತಿ ಕಳೆದ ಹನ್ನೊಂದು ವರ್ಷಗಳಿಂದ ಅವಿಭಜಿತ ದಕ್ಷಿಣ ಕನ್ನಡ…
ಮಂಗಳೂರು: ಸಂಗೀತ, ನೃತ್ಯ, ತಾಳವಾದ್ಯ ಸಂಸ್ಥೆಗಳು ಹಾಗೂ ಶಿಕ್ಷಕರ ಜತೆ ಕುಲಪತಿ ಪ್ರೊ.ನಾಗೇಶ್ ವಿ.ಬೆಟ್ಟಕೋಟೆ ನಡೆಸಿದ ಸಂವಾದ ಕಾರ್ಯಕ್ರಮವು ದಿನಾಂಕ 15-07-2023ರಂದು ಮಂಗಳೂರಿನ ಹಂಪನಕಟ್ಟೆ ವಿವಿ ಕಾಲೇಜು ಸಭಾಂಗಣದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಸಂಗೀತ, ನೃತ್ಯ, ತಾಳವಾದ್ಯ ಪರೀಕ್ಷೆಯನ್ನು ಈ ಬಾರಿ ಹಿಂದಿನಂತೆಯೇ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ನಡೆಸುವಂತೆ ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ ಪದಾಧಿಕಾರಿಗಳು ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನಕ ಕಲೆಗಳ ವಿಶ್ವವಿದ್ಯಾಲಯ ಕುಲಪತಿಗಳಾದ ಪ್ರೊ.ನಾಗೇಶ್ ಬೆಟ್ಟಕೋಟೆಯವರನ್ನು ವಿನಂತಿಸಿದ್ದಾರೆ. ಕರ್ನಾಟಕ ಸೆಕೆಂಡರಿ ಎಜುಕೇಶನ್ ಬೋರ್ಡ್ ಪ್ರತಿ ವರ್ಷ ಏಪ್ರಿಲ್, ಮೇ ತಿಂಗಳಲ್ಲಿ ಸಂಗೀತ, ನೃತ್ಯ, ತಾಳವಾದ್ಯ ಪರೀಕ್ಷೆಗಳನ್ನು ನಡೆಸುತ್ತಿತ್ತು. ಈ ವರ್ಷದಿಂದ ಈ ಪರೀಕ್ಷೆ ನಡೆಸುವ ಜವಾಬ್ದಾರಿಯನ್ನು ಡಾ.ಗಂಗೂಬಾಯಿ ಹಾನಗಲ್ ವಿವಿಗೆ ಸರ್ಕಾರ ವಹಿಸಿದೆ.ಈ ಹಿನ್ನೆಲೆಯಲ್ಲಿ ಈ ಬಾರಿಯ ಪರೀಕ್ಷೆಯನ್ನು ಸುಗಮ ಹಾಗೂ ಸುಸೂತ್ರವಾಗಿ ನಡೆಸುವ ಸಲುವಾಗಿ ಕಲಾ ಸಂಸ್ಥೆ ಹಾಗೂ ಶಿಕ್ಷಕರೊಂದಿಗೆ ಸಂವಾದ ನಡೆಸಲಾಗುತ್ತಿದೆ ಎಂದು ಹೇಳಿದರು. ಈ ವರ್ಷ ಪರೀಕ್ಷೆಗಳು ಸೆಕೆಂಡರಿ…
ಮಂಗಳೂರು: ಮೈಸೂರಿನಲ್ಲಿರುವ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಜೊತೆ ರಾಜ್ಯದ ನೋಂದಾಯಿತ ಶಿಕ್ಷಣ ಸಂಸ್ಥೆಗಳು ಒಡಂಬಡಿಕೆ ಮಾಡಿಕೊಂಡು ಸಂಗೀತ, ನೃತ್ಯ, ಮತ್ತು ಇತರ ಪ್ರದರ್ಶಕ ಕಲೆಗಳ ಕೋರ್ಸ್ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಸಂಗೀತ ಹಾಗೂ ಕಲಾಸಂಸ್ಥೆಗಳು 30-07-2023ರೊಳಗೆ ನೋಂದಣಿ ಮಾಡಿಕೊಳ್ಳಬಹುದು ಎಂದು ಡಾ.ಗಂಗೂಬಾಯಿ ಹಾನಗಲ್ ವಿ.ವಿಯ ಕುಲಪತಿ ಪ್ರೊ. ನಾಗೇಶ್ ವಿ. ಬೆಟ್ಟಕೋಟೆ ಇವರು ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ವಿ.ವಿ ಜೊತೆ ಒಡಂಬಡಿಕೆ ಮಾಡಿಕೊಂಡ ಸಂಸ್ಥೆಗಳು ನಡೆಸುವ ವಿವಿಧ ಕಲಾ ಪ್ರಕಾರಗಳಿಗೆ ಸಂಬಂಧಿಸಿ ನೀಡುವ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಅಥವಾ ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ನಿಯಮಾನುಸಾರ ಪರೀಕ್ಷೆಗಳನ್ನು ನಡೆಸಲಿದೆ. ಈವರೆಗೆ ಕರ್ನಾಟಕ ಸರಕಾರದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸುತ್ತಿದ್ದ ಸಂಗೀತ ಪರೀಕ್ಷೆ ಮತ್ತು ಪ್ರದರ್ಶಕ ಕಲೆಗಳ ಪರೀಕ್ಷೆಗಳ ಸಂಪೂರ್ಣ ಜವಾಬ್ದಾರಿಯನ್ನು ಗಂಗೂಬಾಯಿ ಹಾನಗಲ್ ವಿ.ವಿ ವಹಿಸಲಿದೆ. ವಿವಿಯು ಈವರೆಗೆ ಕೇಂದ್ರ ಸ್ಥಾನದಲ್ಲಿ…
ಉಡುಪಿ: ಉಡುಪಿ ಜಿಲ್ಲಾ ನಾಟಕ ಕಲಾವಿದರ ಒಕ್ಕೂಟದ ಪ್ರಥಮ ವರ್ಷದ ವಾರ್ಷಿಕೋತ್ಸವ ‘ರಂಗ ಸಂಗಮ’ ವು ದಿನಾಂಕ 16-07-2023ರಂದು ಉಡುಪಿಯ ಎಂ.ಜಿ.ಎಮ್ ಕಾಲೇಜಿನ ಮುದ್ದಣ್ಣ ಮಂಟಪದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಆರು ಭಿನ್ನ ನಾಟಕಗಳ ಆಯ್ದ ಭಾಗಗಳ ರಂಗ ಪ್ರಯೋಗ ಯಶಸ್ವಿಯಾಗಿ ಪ್ರದರ್ಶನಗೊಂಡಿತು. ದ.ಕ, ಉಡುಪಿ, ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಹಲವಾರು ವೃತ್ತಿಪರ ನಾಟಕ ತಂಡಗಳಿದ್ದು ಅದರಲ್ಲಿ ಉಡುಪಿಯ ವೃತ್ತಿಪರ ನಾಟಕ ತಂಡಗಳ ಕಲಾವಿದರು ನಿರ್ಮಿಸಿದ ‘ಉಡುಪಿ ಜಿಲ್ಲಾ ನಾಟಕ ಕಲಾವಿದರ ಒಕ್ಕೂಟ’ವು ತನ್ನ ಪ್ರಥಮ ವರ್ಷಾಚರಣೆಯ ಸಂದರ್ಭದಲ್ಲಿ ವಿಭಿನ್ನ ಪ್ರಯೋಗವಾಗಿ ನವ್ಯ ರಂಗಭೂಮಿಯ ನಾಟಕಗಳ ತುಣುಕುಳನ್ನು ಅಭ್ಯಾಸಿಸಿ ಪ್ರದರ್ಶಿಸಿದರು. ವೃತ್ತಿಪರ ನಾಟಕಗಳು ಹೆಚ್ಚಾಗಿ ಹಾಸ್ಯ ಪ್ರಧಾನ ನಾಟಕಗಳಾಗಿದ್ದು ಅದರಲ್ಲಿ ಅಭಿನಯಿಸುವ ಕಲಾವಿದರು ಮೊದಲ ಬಾರಿಗೆ ನಿರ್ದೇಶಕ ವಿದ್ದು ಉಚ್ಚಿಲ್ ಮಾ ರ್ಗದರ್ಶನದಲ್ಲಿ 3 ಇಂಗ್ಲೀಷ್ ನಾಟಕಗಳ ತುಳು ಅನುವಾದ ಮತ್ತು 3 ನವ್ಯ ನಾಟಕಗಳ ತುಣುಕುಗಳನ್ನು ಪ್ರದರ್ಶಿಸಿ ಪ್ರೇಕ್ಷಕರನ್ನು ರಂಜಿಸಿದರು. ವಿಲಿಯಂ ಶೇಕ್ಸ್ ಪಿಯರ್ ಅವರ ‘ಮ್ಯಾಕ್ ಬೆತ್ ‘ನಾಟಕವನ್ನು…
ಉಡುಪಿ : ಕುಟುಂಬ ಮತ್ತು ಸಮಾಜದಿಂದ ದೂರ ಉಳಿದು, ದೈನಂದಿನ ಜೀವನ ನಿರ್ವಹಣೆಗಾಗಿ ಇಷ್ಟವಿಲ್ಲದಿದ್ದರೂ ಅವಮಾನ ಪಡುವಂತಹ ಭಿಕ್ಷಾಟನೆ ಮತ್ತಿತರ ಚಟುವಟಿಕೆಗಳಲ್ಲಿ ತೊಡಗುವ ಅನಿವಾರ್ಯತೆಗೆ ಸಿಲುಕುವವರು ಲಿಂಗತ್ವ ಅಲ್ಪಸಂಖ್ಯಾತರು ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ಪಡೆಯುವುದರ ಮೂಲಕ ಮತ್ತು ತಮ್ಮಲ್ಲಿನ ಪ್ರತಿಭೆಯ ಮೂಲಕ ಗೌರವಯುತ ಜೀವನ ನಡೆಸುವುದು ಮತ್ತು ಅತ್ಯುನ್ನತ ಸಾಧನೆ ಮಾಡುವುದು ಸಾಧ್ಯವಿದೆ. ಇದಕ್ಕೆ ಉಡುಪಿ ಜಿಲ್ಲಾಡಳಿತ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅತ್ಯುತ್ತಮ ಅವಕಾಶ ಕಲ್ಪಿಸುವ ಮೂಲಕ ರಾಜ್ಯಕ್ಕೆ ಮಾದರಿ ಕಾರ್ಯಕ್ರಮ ಆಯೋಜಿಸಿದೆ. ಉಡುಪಿ ಜಿಲ್ಲಾಡಳಿತದ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಡಿಯಲ್ಲಿ ಜಿಲ್ಲೆಯಲ್ಲಿರುವ ಆಸಕ್ತ 19 ಮಂದಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಕಾರ್ಕಳದ ಸ್ತ್ರೀ ಶಕ್ತಿ ಭವನದಲ್ಲಿ ರೂ. 10,000ಗಳ ಸ್ಟೈಫಂಡ್‌ನೊಂದಿಗೆ ದಿನಾಂಕ 05-06-2023ರಿಂದ 04-07-2023ರವರೆಗೆ ಒಂದು ತಿಂಗಳ ಕಾಲ ಕರಾವಳಿಯ ಹೆಮ್ಮೆಯ ಕಲೆಯಾದ ಯಕ್ಷಗಾನ ಪ್ರದರ್ಶನದ ತರಬೇತಿ ನೀಡಲಾಗಿದೆ. ತರಬೇತಿಯಲ್ಲಿ ನೃತ್ಯ, ಅಭಿನಯ, ಸಂಭಾಷಣೆಯಲ್ಲಿ ಪರಿಣಿತ ಸಾಧಿಸಿರುವ ಲಿಂಗತ್ವ ಅಲ್ಪ ಸಂಖ್ಯಾತರು ತರಬೇತಿ ಅಂತ್ಯದಲ್ಲಿ ‘ಶ್ವೇತ ಕುಮಾರ ಚರಿತ್ರೆ’…
ಮಂಗಳೂರು : ಶ್ರೀ ದುರ್ಗಾ ಕಲಾ ತಂಡದ ‘ಪುಗರ್ತೆ’ ಕಲಾವಿದೆರ್ ವಿಟ್ಲ ಮೈರ ಕೇಪು ಅಭಿನಯಿಸುವ ಹಾಗೂ ನಿತಿನ್ ಹೊಸಂಗಡಿ ಇವರ ನಿರ್ದೇಶನದ ‘ಕಲ್ಜಿಗದ ಕಾಳಿ ಮಂತ್ರದೇವತೆ’ ಅದ್ದೂರಿ ಭಕ್ತಿ ಪ್ರಧಾನ ತುಳು ನಾಟಕದ ಪ್ರದರ್ಶನವು ದಿನಾಂಕ 26-07-2023ಕ್ಕೆ ಬುಧವಾರ ಸಂಜೆ 6 ಗಂಟೆಗೆ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದ್ದು, ಈ ನಾಟಕದ ಪ್ರವೇಶ ಉಚಿತವಾಗಿದೆ. ಈ ನಾಟಕಕ್ಕೆ ವಿನೋದ್ ರಾಜ್ ಕೋಕಿಲ ಸಂಗೀತ ನೀಡಿದ್ದು, ಪಟ್ಲ ಸತೀಶ್ ಶೆಟ್ಟಿ, ಮೈಮ್ ರಾಮ್ ದಾಸ್ ಮತ್ತು ವಿನೋದ್ ರಾಜ್ ಕೋಕಿಲರವರ ಹಿನ್ನಲೆ ಗಾಯನವಿರುವ ಈ ನಾಟಕದ ಹಾಡುಗಳ ಸಾಹಿತ್ಯ ಕೆ.ಕೆ. ಪೇಜಾವರ್ ಇವರದ್ದು, ಸುಂದರ್ ರೈ ಮಂದಾರ ಮತ್ತು ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಇವರ ಸಂಪೂರ್ಣ ಸಲಹೆ ಸಹಕಾರವಿದೆ.
ಮಂಗಳೂರು : 76ನೇ ವರ್ಷಾಚರಣೆಯಲ್ಲಿರುವ ‘ಯುಗಪುರುಷ’ದ ಸಂಸ್ಥಾಪಕ ದಿ. ಕೊ. ಅ. ಉಡುಪರ ಸಂಸ್ಮರಣಾ ಸಮಾರಂಭ, ಕೊ. ಅ. ಉಡುಪ ಪ್ರಶಸ್ತಿ ಪ್ರದಾನ, ಅರ್ಚಕ ಸಂಮಾನ, ಕೃತಿ ಬಿಡುಗಡೆ ಸಮಾರಂಭ, ವಿದ್ಯಾರ್ಥಿವೇತನ ವಿತರಣೆ, ಸಾಂಸ್ಕೃತಿಕ ಸಮಾರಂಭವು ದಿನಾಂಕ 24-07-2023ರಂದು ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ನಡೆಯಲಿದೆ. ಮಂಗಳೂರು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಲಿದ್ದು, ಶ್ರೀಕ್ಷೇತ್ರ ಕಟೀಲಿನ ಪ್ರಧಾನ ಅರ್ಚಕ ಕೆ. ಲಕ್ಷ್ಮೀನಾರಾಯಣ ಆಸ್ರಣ್ಣ ಆಶೀರ್ವಚನ ನೀಡಲಿರುವರು. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ ಸಂಸ್ಮರಣಾ ಭಾಷಣ ಮಾಡಲಿದ್ದಾರೆ. ಕದ್ರಿ ನವನೀತ ಶೆಟ್ಟಿ ಅವರಿಗೆ ಕೊ. ಅ. ಉಡುಪ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಯುಗಪುರುಷ ಶ್ರೀ ರಾಘವೇಂದ್ರ ಸ್ವಾಮಿ ಮಂದಿರದ ಅರ್ಚಕರಾದ ರಾಘವೇಂದ್ರ ಉಡುಪ ಅವರನ್ನು ಕಮಲಾಕ್ಷಿ ಉಡುಪ ಸ್ಮರಣಾರ್ಥ ಅರ್ಚಕರ ನೆಲೆಯಲ್ಲಿ ಗೌರವಿಸಲಾಗುವುದು. ಯುಗಪುರುಷ ಪ್ರಕಟಣಾಲಯದಿಂದ ಪ್ರಕಟಿತ ಕೆ. ಬಾಲಕೃಷ್ಣ ಉಡುಪ ರಚಿಸಿದ ‘ಸ್ಫೂರ್ತಿ’ ಹಾಗೂ ದೇವೇಂದ್ರ ಅಮೀನ್ ರಚಿಸಿದ ‘ಮಾಯದ ಮಾಣಿಕ್ಯ’ ಕೃತಿಗಳನ್ನು ಕಸಾಪ ಮಾಜಿ ರಾಜ್ಯಾಧ್ಯಕ್ಷ…