Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ಕೊಂಕಣಿ ಭಾಷೆಗೆ 20 ಆಗಸ್ಟ್ 1992ರಂದು ಸಾಂವಿಧಾನಿಕ ಮಾನ್ಯತೆ ದೊರೆತ ಹಿನ್ನೆಲೆಯಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆಯು 20 ಆಗಸ್ಟ್ 2024ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಕೊಂಕಣಿ ಸಾಹಿತ್ಯ ಅಕಾಡೆಮಿ ಹಾಗೂ ಕೊಂಕಣಿ ಭಾಷಾ ಮಂಡಳ(ರಿ.) ಇವರ ಸಹಯೋಗದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ವಿವಿಧ ಕೊಂಕಣಿ ಸಂಘ ಸಂಸ್ಥೆಗಳು ಭಾಗವಹಿಸಲಿದೆ. ಅಂದು ಬೆಳಿಗ್ಗೆ ಕೊಂಕಣಿ ದ್ವಜಾರೋಹಣದ ಮೂಲಕ ಕಾರ್ಯಕ್ರಮ ಚಾಲನೆಗೊಂಡು ಬಳಿಕ ಹೈಸ್ಕೂಲ್ ವಿಭಾಗ ಹಾಗೂ ಕಾಲೇಜು ವಿಭಾಗದಲ್ಲಿ ವಿದ್ಯಾರ್ಥಿಗಳಿಗಾಗಿ ಕೊಂಕಣಿ ಸಾಂಸ್ಕೃತಿಕ ವೈಭವದ ವಿವಿಧ ಸ್ರ್ಧೆಗಳು ನಡೆಯಲಿವೆ. ಅಪರಾಹ್ನ ಘಂಟೆ 4.30ರಿಂದ ಕೊಂಕಣಿ ಮಾನ್ಯತಾ ದಿನಾಚರಣೆಯ ಸಮಾರೋಪ ಸಮಾರಂಭ ನಡೆಯಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸನ್ಮಾನ್ಯ ಶ್ರೀ ಶಿವರಾಜ್ ಎಸ್. ತಂಗಡಗಿಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಇದೇ ಸಂದರ್ಭದಲ್ಲಿ ಸಾಂಸ್ಕೃತಿಕ ವೈಭವದ ಸ್ಪರ್ಧೆಗಳಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನವನ್ನು ವಿತರಣೆ ನಡೆಯಲಿದ್ದು, ಬಳಿಕ ವಿವಿಧ ಕೊಂಕಣಿ ಜಾನಪದ ಕಲಾತಂಡಗಳಿಂದ ಸಾಂಸ್ಕೃತಿಕ ವಿನೋದಾವಳಿ ನಡೆಯಲಿದೆ.
ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿಯಿಂದ ರಂಗಭೂಮಿ ಕ್ಷೇತ್ರದಲ್ಲಿ ಗಣನೀಯ ಸೇವೆ ಮಾಡಿದವರಿಗೆ ನೀಡುವ ಜೀವಮಾನ ಸಾಧನೆ ಗೌರವ ಪ್ರಶಸ್ತಿಗೆ ನಟಿ ಉಮಾಶ್ರೀ, ನಾಟಕಕಾರರಾದ ಎಚ್. ಎಸ್. ಶಿವಪ್ರಕಾಶ್ ಮತ್ತು ಕೋಟಗಾನಹಳ್ಳಿ ರಾಮಯ್ಯ ಅವರು ಆಯ್ಕೆಯಾಗಿದ್ದಾರೆ. 08 ಆಗಸ್ಟ್ 2024ರ ಗುರುವಾರ ಮೂರು ವರ್ಷಗಳ ವಿವಿಧ ಪ್ರಶಸ್ತಿಗಳಿಗೆ ಆಯ್ಕೆಯಾದವರ ಹೆಸರು ಘೋಷಿಸಿದ ಅಕಾಡೆಮಿ ಅಧ್ಯಕ್ಷ ಕೆ. ವಿ. ನಾಗರಾಜಮೂರ್ತಿ, “ರಂಗಭೂಮಿ ಕ್ಷೇತ್ರದ ಸಾಧಕರಿಗೆ ಪ್ರತಿ ವರ್ಷ ಅಕಾಡೆಮಿಯಿಂದ ಪ್ರಶಸ್ತಿ ನೀಡಲಾಗುತ್ತದೆ. ಕಳೆದ ಎರಡು ಸಾಲುಗಳಲ್ಲಿ ಪ್ರಶಸ್ತಿ ನೀಡಿರಲಿಲ್ಲ. ಸದ್ಯ, 2022-23, 2023-24 ಮತ್ತು 2024-25ನೇ ಸಾಲಿಗೆ ಮೂವರಿಗೆ ಜೀವಮಾನ ಸಾಧನೆಗಾಗಿ ಗೌರವ ಪ್ರಶಸ್ತಿ, ತಲಾ 25ರಂತೆ ಒಟ್ಟು 75 ವಾರ್ಷಿಕ ಪ್ರಶಸ್ತಿ ಮತ್ತು 15 ದತ್ತಿನಿಧಿ ಪ್ರಶಸ್ತಿಗೆ ರಂಗ ಸಾಧಕರನ್ನು ಆಯ್ಕೆ ಮಾಡಲಾಗಿದೆ. ರಾಜ್ಯಾದ್ಯಂತ ವೃತ್ತಿ ರಂಗಭೂಮಿಯ 30ಕ್ಕೂ ಹೆಚ್ಚು ಕಲಾವಿದರಿಗೆ ವಾರ್ಷಿಕ ಮತ್ತು ದತ್ತಿ ಪ್ರಶಸ್ತಿ ನೀಡಲಾಗುತ್ತಿದೆ. ಎಲ್ಲಾ ಜಿಲ್ಲೆಗಳನ್ನು ಗಮನದಲ್ಲಿಟ್ಟುಕೊಂಡು ಸಾಮಾಜಿಕ ನ್ಯಾಯ ಮತ್ತು ಜಿಲ್ಲಾವಾರು ಅನ್ವಯವಾಗುವಂತೆ ಸಾಧಕರನ್ನು…
ಕುಶಾಲನಗರ : ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ದಿನಾಂಕ 02-08-2024ರಂದು ಪ್ರಬಂಧ ಸ್ಪರ್ಧೆ ಮತ್ತು ದೇಶ ಭಕ್ತಿ ಗಾಯನ ಸ್ಪರ್ಧೆಯನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕುಶಾಲನಗರದ ಜೂನಿಯರ್ ಕಾಲೇಜು ದೈಹಿಕ ಶಿಕ್ಷಕ ಡಾ. ಸದಾಶಿವ ಪಲ್ಯದ ಇವರು ಮಾತನಾಡಿ “ಕನ್ನಡ ಸಾಹಿತ್ಯಕ್ಕೆ ಮೂಲವಾಗಿರುವ ಜಾನಪದ ಸಾಹಿತ್ಯ ಇತ್ತೀಚಿಗೆ ಮರೆಯಾಗುತ್ತಿರುವುದು ಬೇಸರದ ವಿಚಾರ. 1911ರಲ್ಲಿ ಧಾರವಾಡದಲ್ಲಿ ಕನ್ನಡ ಸಾಹಿತ್ಯ ಸಂಘ ಎನ್ನುವ ಹೆಸರಿನಲ್ಲಿ ಸ್ಥಾಪನೆಯಾಗಿತ್ತು. ಆಗಲೇ ಸಾಹಿತ್ಯದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪ್ರಾರಂಭವಾಯಿತು. ಅನಂತರ ಮೈಸೂರು ಸಂಸ್ಥಾನದಿಂದ ಕನ್ನಡ ಸಾಹಿತ್ಯ ಪರಿಷತ್ತು ಆರಂಭವಾಗಿದ್ದು. ಈಗ ಕುಶಾಲನಗರ ತಾಲೂಕು ಘಟಕ ಸಾಹಿತ್ಯ ಅರಿವು ಮೂಡಿಸಲು ಸಾಕಷ್ಟು ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಶ್ಲಾಘನೆಗೆ ಪಾತ್ರವಾಗುತ್ತಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಮುಖ್ಯ ಶಿಕ್ಷಕ ಎ.ಸಿ. ಮಂಜುನಾಥ್ ಮಾತನಾಡಿ, “ಸ್ಪರ್ಧೆಗಳಲ್ಲಿ ಒಬ್ಬರು ಸೋತಾಗ ಮಾತ್ರ ಮತ್ತೊಬ್ಬರು ಗೆಲ್ಲಲು ಸಾಧ್ಯವಾಗುತ್ತದೆ. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿದವರು ಮಾತ್ರ…
ಕಾಸರಗೋಡು : ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಕಲಾ-ದೀಕ್ಷಾ (ಗುರು ಶಿಷ್ಯ ಪರಂಪರೆ) ಯೋಜನೆಯನ್ವಯ ಯಕ್ಷಗಾನ ಬೊಂಬೆಯಾಟ ಕಲಿಕಾ ತರಗತಿಯು ದಿನಾಂಕ 17 ಜುಲೈ 2024ರಂದು ಪ್ರಾರಂಭವಾಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಸೋಮಣ್ಣ ಬೇವಿನಮರದ ಇವರು ಮಾತನಾಡಿ “ಕರ್ನಾಟಕದಿಂದ ಹೊರಗುಳಿದಿರುವ ಅಚ್ಚಗನ್ನಡ ಪ್ರದೇಶವಾದ ಗಡಿನಾಡು ಕಾಸರಗೋಡಿನಲ್ಲಿ ಪ್ರಾಚೀನ ಹಾಗೂ ಪರಂಪರಾಗತ ಕಲೆ ಯಕ್ಷಗಾನ ಬೊಂಬೆಯಾಟಕ್ಕೆ ಕಾಯಕಲ್ಪ ನೀಡುತ್ತಿರುವ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ಸಾಧನೆ ಸ್ತುತ್ಯರ್ಹ. ನಯನ ಮನೋಹರವಾದ ಚಂದ್ರಗಿರಿಯ ತೀರದಲ್ಲಿ ನೆಲೆ ನಿಂತಿರುವ ಸಂಘದ ಯಕ್ಷಪುತ್ಥಳಿ ಬೊಂಬೆ ಮನೆಗೆ ರಾಷ್ಟ್ರದ ಪ್ರವಾಸೋದ್ಯಮ ನಕಾಶೆಯಲ್ಲಿ ವಿಶೇಷ ಸ್ಥಾನ ಕಲ್ಪಿಸಲು ಕೇಂದ್ರ, ರಾಜ್ಯ ಸರಕಾರಗಳು ಇನ್ನಾದರೂ ಪ್ರಯತ್ನಿಸಬೇಕು” ಎಂದು ಹೇಳಿದರು. ಪಿಲಿಕುಂಜೆ ಯಕ್ಷಪುತ್ಥಳಿ ಬೊಂಬೆ ಮನೆಯಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಕವಿ, ಪತ್ರಕರ್ತ ರಾಧಾಕೃಷ್ಣ ಕೆ. ಉಳಿಯತ್ತಡ್ಕ ವಹಿಸಿದ್ದರು. ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಸದಸ್ಯ ಎ.ಆರ್. ಸುಬ್ಬಯ್ಯಕಟ್ಟೆ, ಪ್ರೊಫೆಸರ್…
ಚನ್ನರಾಯಪಟ್ಟಣ : ಉಮೇಶ್ ತೆಂಕನಹಳ್ಳಿ ಇವರ ಅನುಭವದ ಅಂತರಾಳದ ಕೃತಿ ‘ಕಪ್ಪು ಹಲ್ಲಿನ ಕಥೆ’ ಚೊಚ್ಚಲ ಕಾದಂಬರಿ ಲೋಕಾರ್ಪಣೆ ಕಾರ್ಯಕ್ರಮವನ್ನು ದಿನಾಂಕ 12 ಆಗಸ್ಟ್ 2024ರಂದು ಬೆಳಗ್ಗೆ 10-30 ಗಂಟೆಗೆ ಚನ್ನರಾಯಪಟ್ಟಣ ರಾಘವೇಂದ್ರ ಸಾಮಿಲ್ ರಸ್ತೆಯ ರಂಗ ಲೋಕದಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರವಣಬೆಳಗೊಳ ಕ್ಷೇತ್ರದ ಶಾಸಕರಾದ ಶ್ರೀ ಸಿ.ಎನ್. ಬಾಲಕೃಷ್ಣ ಇವರ ಅಧ್ಯಕ್ಷತೆ ನಡೆಯುವ ಈ ಕಾರ್ಯಕ್ರಮದಲ್ಲಿ ಚನ್ನರಾಯಪಟ್ಟಣದ ಜನಪದ ವಿದ್ವಾಂಸರಾದ ಡಾ. ಚಂದ್ರು ಕಾಳೇನಹಳ್ಳಿ ಇವರು ಕೃತಿ ಲೋಕಾರ್ಪಣೆ ಮಾಡಲಿರುವರು.
ಮಂಗಳೂರು: ಕರ್ನಾಟಕ ನಾಟಕ ಅಕಾಡೆಮಿಯ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಹಿರಿಯ ರಂಗಕರ್ಮಿ ಮಂಗಳೂರಿನ ವಸಂತ ವಿ. ಅಮೀನ್ ಆಯ್ಕೆಯಾಗಿದ್ದಾರೆ. ನಿರಂತರ 56 ವರ್ಷಗಳಿಂದ ಕಲಾಕ್ಷೇತ್ರದಲ್ಲಿ ದುಡಿದಿರುವ ಶ್ರೀಯುತರು ಕಥೆ, ಕವನ, ಸಾಮಾಜಿಕ, ಚಾರಿತ್ರಿಕ ಹಾಗೂ ಐತಿಹಾಸಿಕ ಸಹಿತ 21 ನಾಟಕ ರಚನೆ ಮಾಡಿದ್ದಾರೆ. ತುಳು ನಾಟಕಕ್ಕೆ ಈವರೆಗೆ ಎರಡು ಸಾವಿರಕ್ಕೂ ಅಧಿಕ ಸಾಹಿತ್ಯ ರಚಿಸಿರುವ ಇವರು ಕಿಶೋರ್ ಡಿ. ಶೆಟ್ಟಿ ನೇತೃತ್ವದ ‘ಲಕುಮಿ’ ನಾಟಕ ತಂಡದ ಎಲ್ಲ ನಾಟಕಕ್ಕೆ ಸಾಹಿತ್ಯ ರಚಿಸಿ ಅವರ ಎಲ್ಲ ನಾಟಕದಲ್ಲಿ ಅಭಿನಯಿಸಿದ್ದಾರೆ. ‘ಒರಿಯರ್ದೊರಿ ಅಸಲ್’ ಸಹಿತ ಕೆಲವು ನಾಟಕಗಳನ್ನು ನಿರ್ದೇಶನ ಮಾಡಿರುವ ಇವರು ತುಳು ಚಲನಚಿತ್ರದ ತಾಂತ್ರಿಕ ವರ್ಗದಲ್ಲೂ ದುಡಿದಿದ್ದಾರೆ. 24 ಗಂಟೆಯಲ್ಲಿ ತಯಾರಾದ ‘ಸೆಪ್ಟೆಂಬರ್ 8’ ತುಳು ಸಿನೆಮಾದ ಸಂಭಾಷಣೆ ಹಾಗೂ ಗೀತ ಸಾಹಿತ್ಯ ರಚಿಸಿದ್ದಾರೆ.
ಮಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಬೆಂಗಳೂರಿನ ‘ಕನ್ನಡ ಜಾಣ ಜಾಣೆ’ಯರ ವೇದಿಕೆ ಇವರ ಸಹಯೋಗದಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಮೂರು ದಿನಗಳ ಪಿ. ಲಂಕೇಶ್ ಕೃತಿಗಳ ಅಧ್ಯಯನ ಶಿಬಿರಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2024ರ ಸೆಪ್ಟೆಂಬರ್ ಕೊನೆಯ ವಾರದಲ್ಲಿ ಹಾಸನದಲ್ಲಿ ನಡೆಯಲಿರುವ ಈ ಶಿಬಿರಕ್ಕೆ 20 ರಿಂದ 40 ವರ್ಷ ವಯಸ್ಸಿನ ರಾಜ್ಯದ ಎಲ್ಲ ಭಾಗದ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 17 ಆಗಸ್ಟ್ 2024 ಕೊನೆಯ ದಿನ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್ಸೈಟ್ : https://karnatakasahithy- aacademy.org ನಮೂನೆ, ವಿವರಗಳನ್ನು ಪಡೆದು ಕೊಳ್ಳು ವಂತೆ ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ತಿಳಿಸಿದ್ದಾರೆ.
ಸಾಣೇಹಳ್ಳಿ: ಚಿತ್ರದುರ್ಗದ ಸಾಣೇಹಳ್ಳಿಯ ಶಿವಕುಮಾರ ರಂಗಮಂದಿರದಲ್ಲಿ ಸಾಣೇಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ 7 ಆಗಸ್ಟ್ 2024ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿ “ನಮ್ಮಲ್ಲಿ ಅಡಗಿರುವ ಶಕ್ತಿ ಸಾಮರ್ಥ್ಯವನ್ನು ಹೊರಹೊಮ್ಮಿಸಬೇಕು ಎನ್ನುವ ಅಭೀಷ್ಠೆ ಎಲ್ಲ ಮಗುವಿನಲ್ಲೂ ಇರುತ್ತದೆ. ಅದಕ್ಕೆ ಪೂರಕವಾದ ವಾತಾವರಣ ಸಿಕ್ಕರೆ ಆ ಮಗು ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದಲು ಸಾಧ್ಯ. ಯಾವ ಮಕ್ಕಳೂ ಪ್ರತಿಭಾಹೀನರಲ್ಲ. ಎಲ್ಲ ಮಕ್ಕಳಲ್ಲೂ ಪ್ರತಿಭೆ ಅವ್ಯಕ್ತವಾಗಿರುತ್ತದೆ. ಅದನ್ನು ಪ್ರತಿಭಾ ಕಾರಂಜಿಯ ಮೂಲಕ ವ್ಯಕ್ತಪಡಿಸುವಂಥ ಕೆಲಸ ಮನೆಯಲ್ಲಿ, ಶಾಲೆಯಲ್ಲಿ, ಸಮಾಜದಲ್ಲಿ ನಡೆಯಬೇಕು. ಮಕ್ಕಳು ಪ್ರತಿಭಾಹೀನರೆಂದು ಅವಹೇಳನ ಮಾಡದೇ ಸ್ವಲ್ಪ ಅವಕಾಶ ಸಿಕ್ಕರೆ ನಮ್ಮ ಮಕ್ಕಳು ಯಾರಿಗಿಂತಲೂ ಕಡಿಮೆಯಿಲ್ಲ ಎನ್ನುವುದನ್ನು ಆ ಮಕ್ಕಳ ಮನೋಭೂಮಿಕೆಯಲ್ಲಿ ಬಿತ್ತುವ ಕಾರ್ಯವನ್ನು ಆಯಾ ಶಾಲೆಯ ಶಿಕ್ಷಕರು ಮಾಡಬೇಕಾಗುತ್ತದೆ. ಒಂದೊಂದು ಸಾರಿ ಪ್ರತಿಭಾವಂತರಿಗೆ ಎಲ್ಲ ಅವಕಾಶಗಳನ್ನು ಕೊಟ್ಟು ಉಳಿದವರನ್ನು ಹಿಂದೆ ತಳ್ಳುವ ಕೆಲಸ ಆಗುತ್ತದೆ. ಯಾವ ಮಗುವಿನಲ್ಲಿ ಪ್ರತಿಭೆ ಇಲ್ಲ ಅಂತ ಅಂದುಕೊಂಡು ದೂರ ತಳ್ಳುವಿರೋ ಆ…
ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಹಯೋಗದೊಂದಿಗೆ ತುಳು ನಾಟಕ ಕಲಾವಿದರ ಒಕ್ಕೂಟದ 21ನೇ ವಾರ್ಷಿಕ ಸಂಭ್ರಮ, ‘ತೌಳವ ಪ್ರಶಸ್ತಿ’ ಪ್ರದಾನ ಸಮಾರಂಭ, ಹಿರಿಯ ಕಲಾವಿದರಿಗೆ ಸಮ್ಮಾನ, ಕೀರ್ತಿಶೇಷ ಕಲಾವಿದರ ನೆಂಪು ಕಾರ್ಯಕ್ರಮ ಹಾಗೂ ಅಶಕ್ತ ಕಲಾವಿದರಿಗೆ ಗೌರವಧನ ವಿತರಣಾ ಕಾರ್ಯಕ್ರಮವು 02 ಆಗಸ್ಟ್2024ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಾತನಾಡಿ “ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಲು ತುಳು ಎಲ್ಲ ರೀತಿಯ ಅರ್ಹತೆಗಳನ್ನು ಹೊಂದಿದೆ. ಹಾಗಾಗಿ ಅದನ್ನು ಕೇಳುವಲ್ಲಿ ಮತ್ತು ನೀಡುವಲ್ಲಿ ನ್ಯಾಯವಿದೆ. ತುಳುವನ್ನು ರಾಜ್ಯದ ಅಧಿಕೃತಭಾಷೆಯನ್ನಾಗಿ ಘೋಷಿಸುವುದಕ್ಕಾಗಿ ಸರಕಾರ ಕೇಳಿದಂತೆ ಎಲ್ಲ ದಾಖಲೆಗಳೊಂದಿಗೆ ವರದಿಯನ್ನು ಸಲ್ಲಿಸಲಾಗಿದೆ. ಬೇರೆ ಕೆಲವು ರಾಜ್ಯಗಳಲ್ಲಿ ಎರಡು, ಮೂರು ಮತ್ತು ಅದಕ್ಕಿಂತಲೂ ಹೆಚ್ಚಿನ ಭಾಷೆಗಳನ್ನು ಅಧಿಕೃತ ಭಾಷೆಗಳನ್ನಾಗಿ ಘೋಷಿಸಲಾಗಿದೆ. ನಮ್ಮ ರಾಜ್ಯದಲ್ಲಿ ತುಳು ಶೀಘ್ರ ಅಧಿಕೃತ ರಾಜ್ಯ ಭಾಷೆಯಾಗಬೇಕಾಗಿದೆ. ಹಲವು ಹಂತಗಳನ್ನು ದಾಟಿ ಇಂದು ಶ್ರೀಮಂತವಾಗಿ ಬೆಳೆದಿರುವ…
ಉಡುಪಿ : ವನಸುಮ ಟ್ರಸ್ಟ್ ಕಟಪಾಡಿ ಸಹಭಾಗಿತ್ವದಲ್ಲಿ ಖ್ಯಾತ ವಿದ್ವಾಂಸ ಗುರುರಾಜ ಮಾರ್ಪಳ್ಳಿ ಅವರು ಹುಟ್ಟುಹಾಕಿರುವ ‘ಶಾಸ್ತ್ರೀಯ ಯಕ್ಷ ಮೇಳ ಉಡುಪಿ’ ವತಿಯಿಂದ `ಋತುಪರ್ಣ ‘ ಯಕ್ಷಗಾನ ಪ್ರದರ್ಶನವು 04 ಆಗಸ್ಟ್ 2024ರ ಭಾನುವಾರದಂದು ಉಡುಪಿಯ ಯಕ್ಷಗಾನ ಕಲಾರಂಗದ ಐ. ವೈ. ಸಿ. ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ “ಇಂದು ಆಧುನಿಕತೆಯನ್ನು ಮೇಳೈಸಿಕೊಂಡು ವಿಜೃಂಭಿಸುತ್ತಿರುವ ಯಕ್ಷಗಾನ ಪ್ರದರ್ಶನದ ಅಬ್ಬರದ ನಡುವೆ ಶಾಸ್ತ್ರೀಯ ರೀತಿಯಲ್ಲಿ ಯಕ್ಷಗಾನವನ್ನು ಇಂದಿನ ಪೀಳಿಗೆಗೆ ಪರಿಚಯಿಸಲು ಮುಂದಾಗಿರುವ ವಿದ್ವಾಂಸ ಡಾ. ಗುರುರಾಜ ಮಾರ್ಪಳ್ಳಿ ಇವರ ಪ್ರಯತ್ನ ಅನುಕರಣೀಯ. ಯಕ್ಷಗಾನ ಹಿಂದೆ ಹೇಗಿತ್ತು ಎಂಬುದರ ಬಗ್ಗೆ ಇಂದಿನ ಯುವ ಪೀಳಿಗೆಗೆ ಅರಿವಿಲ್ಲ. ಇಂದು ಆಧುನಿಕತೆಯ ಕಾಲಘಟ್ಟದಲ್ಲಿ ಯಕ್ಷಗಾನ ಸಾಕಷ್ಟು ಬದಲಾವಣೆಯನ್ನು ಕಂಡಿದೆ. ಕಲಾವಿದರಿಗೆ ಉತ್ತಮ ಸಂಪಾದನೆಯ ದಾರಿ ನೀಡಿದೆ. ಹಿಂದಿನ ಯಕ್ಷಗಾನವನ್ನು ಕಂಡವರು, ಇಂದಿನ ಬದಲಾವಣೆಗಳನ್ನು ಕಂಡು ವ್ಯಥೆ ಪಟ್ಟಿರುವುದನ್ನು ಕಂಡಿದ್ದೇನೆ. ಈ ಸಂದರ್ಭದಲ್ಲಿ ಯಕ್ಷಗಾನದ ಶಾಸ್ತ್ರೀಯ…