ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇದರ ವತಿಯಿಂದ ಗೌರವ ಪ್ರಶಸ್ತಿ ಮತ್ತು ಪುಸ್ತಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ದಿನಾಂಕ 15 ಮಾರ್ಚ್ 2025ರಂದು ಬೆಳಿಗ್ಗೆ 10-00 ಗಂಟೆಗೆ ಮಂಗಳೂರಿನ ಉರ್ವಸ್ಟೋರ್ ತುಳು ಭವನದ ಅಮೃತ ಸೋಮೇಶ್ವರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಇವರ ಅಧ್ಯಕ್ಷತೆಯಲ್ಲಿ ಹಾಗೂ ಸನ್ಮಾನ್ಯ ಯು.ಟಿ. ಖಾದರ್ ಇವರ ಉಪಸ್ಥಿತಿಯಲ್ಲಿ ಗೌರವ ಪ್ರಶಸ್ತಿ ಮತ್ತು ಪುಸ್ತಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಡಾ. ಪುರುಷೋತ್ತಮ ಬಿಳಿಮಲೆ ಇವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ.