ಉಡುಪಿ : ಯಕ್ಷಗಾನ ಕಲಾರಂಗ (ರಿ.) ಉಡುಪಿ ಇದರ ವತಿಯಿಂದ ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಸ್ಮರಣಾರ್ಥ ಯಕ್ಷಗಾನ ಕಲಾರಂಗ ಪ್ರಶಸ್ತಿ ಮತ್ತು ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭವನ್ನು ದಿನಾಂಕ 05 ಜೂನ್ 2026ರಂದು ಉಡುಪಿಯ ಯಕ್ಷಗಾನ ಕಲಾರಂಗ ಐ.ವೈ.ಸಿ. ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಧರ್ಮಕರ್ತೃ ಡಾ. ಜಿ. ಭೀಮೇಶ್ವರ ಜೋಶಿ ಇವರು ಹಿರಿಯ ವಿದ್ವಾಂಸರಾದ ಡಾ. ಚಂದ್ರಶೇಖರ ದಾಮ್ಲೆ ಇವರಿಗೆ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಯನ್ನು ಪ್ರದಾನ ಮಾಡಲಿದ್ದು, ವಿಶ್ರಾಂತ ಕುಲಪತಿಗಳಾದ ಡಾ. ಬಿ.ಎ. ವಿವೇಕ ರೈ ಇವರು ಅಭಿನಂದನಾ ನುಡಿಗಳನ್ನಾಡಲಿದ್ದಾರೆ.

