ಬೆಂಗಳೂರು : ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಇದರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ, ವಿಚಾರ ಸಂಕಿರಣ ಮತ್ತು ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 09 ಆಗಸ್ಟ್ 2026ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಬೆಳಗ್ಗೆ 10-00 ಗಂಟೆಗೆ ಗಾಯಕ ಆಂಜನೇಯ ಮೂರ್ತಿಯವರಿಂದ ಗಾನ ಸಂಭ್ರಮ, ವಿಚಾರ ಸಂಕಿರಣದಲ್ಲಿ ‘ಕೆಂಪೇಗೌಡ ಕನಸಿನ ಬೆಂಗಳೂರು ಅಂದು – ಇಂದು’ ಎಂಬ ವಿಷಯದ ಬಗ್ಗೆ ಡಾ. ಶಾಂತರಾಜು ಇವರಿಂದ ಉಪನ್ಯಾಸ ಹಾಗೂ ಸಭಾ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ ಸಿರಿ ಸಾಂಸ್ಕೃತಿಕ ಪ್ರತಿಷ್ಠಾನ ಇವರಿಂದ ಭರತನಾಟ್ಯ ಪ್ರದರ್ಶನಗೊಳ್ಳಲಿದೆ.

