ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅವಿಭಜಿತ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ‘ಕರಾವಳಿ ಲೇಖಕಿಯರ ವಾಚಕಿಯರ ಸಂಘ (ರಿ.)’ ಇದರ ವತಿಯಿಂದ ಡಾ. ಮಮತಾ ತಿಲಕ್ ರಾವ್ ದತ್ತಿ ನಿಧಿ ಪ್ರಾಯೋಜಿತ ‘ಅಮ್ಮ ಸಾಹಿತ್ಯ ಪ್ರಶಸ್ತಿ’ ಮತ್ತು ‘ಅನನ್ಯ ಸಾಧಕಿ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ದಿನಾಂಕ 29 ಮಾರ್ಚ್ 2026ರಂದು ಅಪರಾಹ್ನ 2-30 ಗಂಟೆಗೆ ಮಂಗಳೂರಿನ ಉರ್ವಸ್ಟೋರ್ ಸಾಹಿತ್ಯ ಸದನದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಶಕುಂತಳಾ ಟಿ. ಶೆಟ್ಟಿ ಇವರು ವಹಿಸಲಿದ್ದು, ಟೀಚರ್ ಶೈಕ್ಷಣಿಕ ಪತ್ರಿಕೆಯ ಸಂಪಾದಕರಾದ ಉದಯ ಗಾಂವಕರ ಇವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಹಿರಿಯ ಲೇಖಕಿ ಪ್ರಕಾಶ ಶ್ರೀಮತಿ ಇಂದಿರಾ ಹಾಲಂ ಇವರಿಗೆ ‘ಅಮ್ಮ ಸಾಹಿತ್ಯ ಪ್ರಶಸ್ತಿ’ ಹಾಗೂ ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಸುಶೀಲಾ ನಾಡ ಇವರಿಗೆ ‘ಅನನ್ಯ ಸಾಧಕಿ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಗಿರಿವಾಸಿನಿಯ ಮರುದನಿ ‘ಅಮ್ಮ ಸಾಹಿತ್ಯ ಪ್ರಶಸ್ತಿ’ ಪುರಸ್ಕೃತೆ ಇಂದಿರಾ ಹಾಲಂಬಿ (ಗಿರಿವಾಸಿನಿ)ಯವರ ಕೃತಿಗಳ ಓದು ಮತ್ತು ಸಂವಾದ ಕಾರ್ಯಕ್ರಮ ನಡೆಯಲಿದೆ.

