ತುಮಕೂರು : ಪ್ರೊ. ಎಚ್.ಜಿ. ಸಣ್ಣಗುಡ್ಡಯ್ಯ ಪ್ರತಿಷ್ಠಾನ (ರಿ.) ತುಮಕೂರು ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜು, ತುಮಕೂರು ವಿಶ್ವವಿದ್ಯಾನಿಲಯ ಮತ್ತು ತುಮಕೂರು ವಿಶ್ವವಿದ್ಯಾನಿಲಯ ಕನ್ನಡ ಅಧ್ಯಾಪಕರ ಒಕ್ಕೂಟ ಇದರ ವತಿಯಿಂದ ‘ಪ್ರಶಸ್ತಿ ಪ್ರದಾನ ಸಮಾರಂಭ’ವನ್ನು ದಿನಾಂಕ 21 ಫೆಬ್ರವರಿ 2025ರಂದು ಮಧ್ಯಾಹ್ನ 12-00 ಗಂಟೆಗೆ ತುಮಕೂರು ವಿಶ್ವವಿದ್ಯಾನಿಲಯದ ಸರ್.ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಎಂ. ವೆಂಕಟೇಶ್ವರಲು ಇವರು ವಹಿಸಲಿದ್ದು, ಬಹುಮುಖಿ ಸಂಸ್ಕೃತಿ ಚಿಂತಕರಾದ ಪ್ರೊ. ಬರಗೂರು ರಾಮ ಚಂದ್ರಪ್ಪ ಇವರು ಆಶಯ ನುಡಿಗಳನ್ನಾಡಲಿದ್ದಾರೆ. ಶ್ರೀ ರಘುನಾಥ ಚ. ಹ. ಮತ್ತು ಶ್ರೀಮತಿ ರೂಪ ಹಾಸನ ಇವರುಗಳಿಗೆ ಬೆಂಗಳೂರಿನ ಪ್ರಸಿದ್ಧ ವಿಮರ್ಶಕರಾದ ಡಾ. ಎಚ್.ಎಸ್. ರಾಘವೇಂದ್ರ ರಾವ್ ಇವರು ಪ್ರಶಸ್ತಿ ಪ್ರದಾನ ಮಾಡಲಿರುವರು.