ಹಾಸನ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಸನ ಹಾಗೂ ನಾಟ್ಯಮಯೂರಿ ನೃತ್ಯ ಟ್ರಸ್ಟ್ ರಿಜಿಸ್ಟ್ರಾರ್ ವಿರಾಜಪೇಟೆ ಕೊಡಗು ಇವರ ಜಂಟಿ ಆಶ್ರಯದಲ್ಲಿ ದಿನಾಂಕ 18 ಜನವರಿ 2025ರಂದು ಯುವಶಕ್ತಿಯ ಸಕಾರ ಮೂರ್ತಿ ಸ್ವಾಮಿ ವಿವೇಕಾನಂದ ಜಯಂತಿ ಉತ್ಸವ ಪ್ರಯುಕ್ತ ನಡೆದ ಸ್ವಾಮಿ ವಿವೇಕಾನಂದ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿಯನ್ನು ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಇವರಿಗೆ ಹಾಸನದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಪ್ರದಾನ ಮಾಡಿ ಗೌರವಿಸಲಾಯಿತು.
ಚೆನ್ನಬಸವೇಶ್ವರ ಕ್ಷೇತ್ರದ ಮಲ್ಲಿಕಾರ್ಜುನ ಸ್ವಾಮೀಜಿ, ಅರಕಲಗೂಡು ವಿಧಾನಸಭಾ ಮಾಜಿ ಶಾಸಕ ಎ. ಮಂಜು, ಕನ್ನಡ ಸಾಹಿತ್ಯ ಪರಿಷತ್ ಹಾಸನ ಗೌರವ ಕಾರ್ಯದರ್ಶಿ ಬೊಮ್ಮೇ ಗೌಡ, ಉದ್ಯಮಿ ಸಮಾಜಸೇವಕ ಸಾಧಿಕ್ ಅಹಮದ್ ಉಡುಪಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಧಾಕರ್ ಎಸ್., ಕಾರ್ಕಳದ ಉದ್ಯಮಿ ಶಕೀರ್ ಅಹಮದ್, ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಚಿತ್ರದುರ್ಗ ರಾಜ್ಯ ಕಾರ್ಯದರ್ಶಿ ಸುರೇಶ್ ಜಿ., ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕರಾದ ಆಶಾ ಆರ್. ಅತಿಥಿಗಳಾಗಿ ಉಪಸ್ಥಿತರಿದ್ದರು. ನಾಟ್ಯಮಯೂರಿ ನೃತ್ಯ ಸಂಸ್ಥೆಯ ರೂವಾರಿ ಪ್ರೇಮಾಂಜಲಿ ಆಚಾರ್ಯ ಸ್ವಾಗತಿಸಿ, ಕಾರ್ಯದರ್ಶಿ ದೀಪಕ್ ವಂದಿಸಿ, ವೆಂಕಟೇಶ್ ಆರ್. ಕಾರ್ಯಕ್ರಮ ನಿರೂಪಿಸಿದರು.
