ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ತುಳು ಪರಿಷತ್, ಮಯೂರಿ ಫೌಂಡೇಶನ್ ಜಂಟಿಯಾಗಿ ಆಯೋಜಿಸಿದ್ದ 5ನೇ ವರ್ಷದ ದಸರಾ ಬಹುಭಾಷಾ ಕವಿಗೋಷ್ಠಿ ಕಾರ್ಯಕ್ರಮವು ದಿನಾಂಕ 22 ಸೆಪ್ಟೆಂಬರ್ 2025 ರಂದು ಮಂಗಳೂರಿನ ತುಳುಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಬಹುಭಾಷಾ ಕವಿ ವಿಲ್ಸನ್ ಕಟೀಲು ಮಾತನಾಡಿ “ಕವಿಗಳಿಗೆ ಬರವಣಿಗೆಗೆ ವಿಪುಲ ಅವಕಾಶಗಳು ಇವೆ. ಆದರೆ, ಬರಹಗಾರನು ಸಾಮಾಜಿಕ ಜವಾಬ್ದಾರಿಯ ಧ್ವನಿಯಾಗಿ, ಶೋಷಣೆಯ ವಿರುದ್ಧ ಬರೆದಾಗ ಒಳ್ಳೆಯ ಕವಿತೆ ಸೃಷ್ಟಿಯಾಗಲು ಸಾಧ್ಯ” ಎಂದು ಹೇಳಿದರು.
ಸಾಹಿತಿ ಮಲಾರ್ ಜಯರಾಮ್ ರೈ ಅಧ್ಯಕ್ಷತೆ ವಹಿಸಿದ್ದರು. ಮಯೂರಿ ಫೌಂಡೇಶನ್ ಇದರ ಅಧ್ಯಕ್ಷರಾದ ಜಯ ಕೆ. ಶೆಟ್ಟಿ ಮುಂಬೈ, ತುಳು ಪರಿಷತ್ ಇದರ ಅಧ್ಯಕ್ಷರಾದ ಶುಭೋದಯ ಆಳ್ವ, ಮಂಗಳೂರು ತಾಲ್ಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆಯಾದ ಚಂಚಲಾ ತೇಜೊಮಯ ಹಾಗೂ ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷರಾದ ಎ. ಸಿ. ಭಂಡಾರಿ ಉಪಸ್ಥಿತರಿದ್ದರು. ಕವಿಗಳು ಕವಿತೆ ವಾಚಿಸಿದರು.
ಉದ್ಯಾವರ ನಾಗೇಶ್ ಕುಮಾರ್ ಸ್ವಾಗತಿಸಿ, ಅಕ್ಷಯ ಆರ್ .ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಬಾಬು ಕೊರಗ ಪಾಂಗಾಳ ವಂದಿಸಿದರು.
Subscribe to Updates
Get the latest creative news from FooBar about art, design and business.
Previous Articleಮೈಸೂರು ದಸರಾ ಕವಿಗೋಷ್ಠಿಗೆ ಯೋಗೀಶ್ ಕಾಂಚನ್ ಆಯ್ಕೆ