ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಸ್ಕೂಲ್ ಆಫ್ ಸೋಶಿಯಲ್ ವರ್ಕ್ (ಸ್ವಾಯತ್ತ) ರೋಶನಿ ನಿಲಯ, ಮಂಗಳೂರು ಆಯೋಜಿಸುವ ‘ಅಕಾಡೆಮಿಡ್ ಒಂಜಿ ದಿನ – ಬಲೆ ತುಳು ಓದುಗ’ ಸ್ಕೂಲ್ ಆಫ್ ಸೋಶಿಯಲ್ ವರ್ಕ್ (ಸ್ವಾಯತ್ತ) ರೋಶನಿ ನಿಲಯದ ಕನ್ನಡ ವಿಭಾಗದ ವಿದ್ಯಾರ್ಥಿಗಳಿಂದ ಅಕಾಡೆಮಿ ಗ್ರಂಥಾಲಯಕ್ಕೆ ಭೇಟಿ ಹಾಗೂ ಅಧ್ಯಯನ ಕಾರ್ಯಕ್ರಮವು ದಿನಾಂಕ 09 ಆಗಸ್ಟ್ 2025ರ ಶನಿವಾರದಂದು ಬೆಳಿಗ್ಗೆ ಘಂಟೆ 10.00ಕ್ಕೆ ಮಂಗಳೂರಿನ ಉರ್ವಸ್ಟೋರ್ ನಲ್ಲಿರುವ ತುಳು ಭವನದ ಸಿರಿ ಚಾವಡಿಯಲ್ಲಿ ನಡೆಯಲಿದೆ.
ಕರ್ನಾಟಕ ತುಳು ಸಾಹಿತ್ಯ ಆಕಾಡಮಿಯ ಅಧ್ಯಕ್ಷರಾದ ಶ್ರೀ ತಾರಾನಾಥ ಗಟ್ಟಿ ಕಾಪಿಕಾಡ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು
ಹಿರಿಯ ಲೇಖಕಿ ಹಾಗೂ ವಿಶ್ರಾಂತ ಪ್ರಾಂಶುಪಾಲರಾದ ಶ್ರೀಮತಿ ಚಂದ್ರಕಲಾ ನಂದಾವರ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಾರ್ತಾ ಭಾರತಿ ದೈನಿಕದ ಹಿರಿಯ ವರದಿಗಾರ್ತಿಯಾದ ಶ್ರೀಮತಿ ಸತ್ಯ ಕೆ. ಹಾಗೂ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯ ಮಂಗಳೂರು ಇಲ್ಲಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಓಬನಾಥ್ ಭಾಗವಹಿಸಲಿದ್ದಾರೆ.