ಕಾಸರಗೋಡು : ಕೀರ್ತಿಶೇಷ ಬಲಿಪ ಭಾಗವತ ದ್ವಯರ ಪ್ರಶಸ್ತಿ ಪ್ರದಾನ ಹಾಗೂ 22ನೇ ವರ್ಷದ ಸೇವಾ ತಾಳಮದ್ದಲೆ ಕಾರ್ಯಕ್ರಮವನ್ನು ದಿನಾಂಕ 19 ಜುಲೈ 2026ರಂದು ಮಧ್ಯಾಹ್ನ 2-00 ಗಂಟೆಗೆ ಮಲ್ಲ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಮಲ್ಲ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಆನೆಮಜಲು ಶ್ರೀ ಸತ್ಯನಾರಾಯಣ ಭಟ್ ಇವರು ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ಯಕ್ಷಗಾನ ಕಲಾವಿದರಾದ ವಾಟೆಪಡ್ಪು ವಿಷ್ಣು ಶರ್ಮ ಇವರು ಅಭಿನಂದನಾ ಭಾಷಣ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಹಿರಿಯ ಯಕ್ಷಗಾನ ಕಲಾವಿದರಾದ ಕೂಟೇಲು ಬಾಲಕೃಷ್ಣ ಭಟ್ ಇವರಿಗೆ ‘ಬಲಿಪ ಭಾಗವತ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ‘ಭೃಗು ಶಾಪ’ ಯಕ್ಷಗಾನ ತಾಳಮದ್ದಲೆ ನಡೆಯಲಿದೆ.

