Subscribe to Updates

    Get the latest creative news from FooBar about art, design and business.

    What's Hot

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

    May 28, 2025

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಬಲಿಪ ಹಾಡುಗಾರಿಕೆ’ಯ ಕಂಚಿನ ಕಂಠ ಮೌನವಾಗಿದೆ
    Yakshagana

    ‘ಬಲಿಪ ಹಾಡುಗಾರಿಕೆ’ಯ ಕಂಚಿನ ಕಂಠ ಮೌನವಾಗಿದೆ

    February 16, 2023Updated:August 19, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    16 ಫೆಬ್ರವರಿ 2023, ಮೂಡಬಿದಿರೆ: ಯಕ್ಷ ರಂಗದ ಭೀಷ್ಮ, ಭಾಗವತಿಕೆಯಲ್ಲಿ ತನ್ನದೇ ಮೇರು ಶೈಲಿಯಾದ ‘ಬಲಿಪ ಹಾಡುಗಾರಿಕೆ’ಯನ್ನು ದಶಕಗಳಿಂದ ಯಕ್ಷಪ್ರಿಯರಿಗೆ ಉಣಪಡಿಸಿದ ಶ್ರೀಯುತ ಬಲಿಪ ನಾರಾಯಣ ಭಾಗವತರು ಇಂದು (84 ವರ್ಷ) ನಮ್ಮನ್ನಗಲಿದ್ದಾರೆ… ಕಂಚಿನ ಕಂಠ ಮೌನವಾಗಿದೆ… ಭಾಗವತಿಕೆಯ ರಂಗದಲ್ಲಿ ಅಗ್ರಜರಾಗಿ ನಿಂತ ಬಲಿಪರು ಮಂಗಳ ಹಾಡಿನೊಂದಿಗೆ ಇಹಲೋಕದ ಬಂಧ ಕಳಚಿ ಸರ್ವವಂದ್ಯನ ಕಿವಿಗಳನ್ನು ತಂಪಾಗಿಸಲು ನಾಕಕ್ಕೆ ಸರದಿದ್ದಾರೆ… “ನೋಡಿ ನಿರ್ಮಲ ಜಲ ಸಮೀಪದಿ…”, “ಜಗವು ನಿನ್ನಾಧೀನ ಖಗಪತಿ ವಾಹನ…”, “ರಾಮಕೃಷ್ಣರು ಮನೆಗೆ ಬಂದರು ಬಾಗಿಲು ತೆರೆಯಿರೊ”, “ಎಲವೋ ಕುಂತೀ ಸುತನೇ” ಎಂಬಿತ್ಯಾದಿ ವಿವಿಧ ಸ್ವರ ಏರಿಳಿತದ ಸಮ್ಮಿಲನ-ಸಮತೋಲನ ಹೊಂದಿದ್ದ ‘ಬಲಿಪ’ ಶೈಲಿಗೆ ಅದರದ್ದೇ ಆದ ತೂಕ-ಸ್ಥರ…

    ಅಜ್ಜ ಬಲಿಪರು ಹುಟ್ಟುಹಾಕಿದ ಯಕ್ಷಗಾನ ತೆಂಕುತಿಟ್ಟು ಹಾಡುಗಾರಿಕೆಯ ಬಲಿಪ ಶೈಲಿಯ ಪ್ರಬಲ ಪ್ರತಿಪಾದಕ,ಕಾಸರಗೋಡು ಪೆರ್ಲ ಪಡ್ರೆಯ ಯಕ್ಷಗಾನ ಸೊಗಡಿನ ಮಣ್ಣಲ್ಲಿ ಹುಟ್ಟಿ ಬೆಳೆದು ಮೂಡುಬಿದಿರೆ ನೂಯಿಯಲ್ಲಿದ್ದು ತನ್ನ ಮುಂದಿನ ತಲೆಮಾರಿಗೆ ಬಲಿಪ ಛಾಪನ್ನು ಮೆರೆದ ಶ್ರೀ ಬಲಿಪ ನಾರಾಯಣ ಭಾಗವತರು ಇದೀಗ ನಿಧನರಾದ ಸುದ್ದಿ ಬಂದಿದೆ. ಇನ್ನು ಮುಂದೆ ಅದೊಂದು ನೆನಪು, ದಂತಕತೆ ಮಾತ್ರ. ಕಂಬನಿ ಮಿಡಿವ ಆರ್ದ್ರ ಹೃದಯ ತುಂಬಿದ ಭಾವನೆಗಳೊಂದಿಗೆ ಆ ಚೇತನಕ್ಕೆ ನಮೋ ನಮಃ…

    ಬಲಿಪ ನಾರಾಯಣ ಭಾಗವತರು ಮೂಲತಃ ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದವರು. ಇವರು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಸಮೀಪದ ನೂಯಿ ಎಂಬಲ್ಲಿ ವಾಸವಾಗಿದ್ದರು. ಇವರು ತೆಂಕುತಿಟ್ಟಿನ ಪ್ರಸಿದ್ಧ ಮತ್ತು ಹಿರಿಯ ಭಾಗವತರು. ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದಲ್ಲಿ ಹಲವಾರು ವರ್ಷ ಭಾಗವತರಾಗಿ ಸೇವೆ ಸಲ್ಲಿಸಿದ್ದಾರೆ. ಇವರು ಯಕ್ಷಗಾನದ ಹಲವಾರು ಪ್ರಸಂಗಗಳನ್ನು ರಚಿಸಿದ್ದಾರೆ. ಯಕ್ಷಗಾನ ಹಾಡುಗಳ ಅನೇಕ ಕೃತಿಗಳನ್ನೂ ರಚಿಸಿದ್ದಾರೆ.

    ವೈಯಕ್ತಿಕ ಜೀವನ
    ಬಲಿಪರು ಕಾಸರಗೋಡಿನ ಪಡ್ರೆ ಗ್ರಾಮದಲ್ಲಿ ಮಾರ್ಚ್ 13, 1938ರಂದು ಜನಿಸಿದರು. ಇವರ ತಂದೆ ಬಲಿಪ ಮಾಧವ ಭಟ್ ಮತ್ತು ತಾಯಿ ಸರಸ್ವತಿ. ಇವರು 7ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ. ತಮ್ಮ ಅಜ್ಜ ದಿ.ಬಲಿಪ ನಾರಾಯಣ ಭಾಗವತರಿಂದ ಭಾಗವತಿಕೆ ಕಲಿತು 13ನೇ ವರ್ಷದಲ್ಲಿ ರಂಗ ಪ್ರವೇಶಗೈದರು. ಇವರ ಪತ್ನಿ ಶ್ರೀಮತಿ ಜಯಲಕ್ಷ್ಮಿ. ಇವರ ನಾಲ್ವರು ಪುತ್ರರ ಪೈಕಿ, ಮಾಧವ ಬಲಿಪರಿಗೆ ಹಿಮ್ಮೇಳವಾದನ ತಿಳಿದಿದ್ದು, ಶಿವಶಂಕರ ಬಲಿಪ ಮತ್ತು ದಿ. ಪ್ರಸಾದ ಬಲಿಪರು ಉತ್ತಮ ಭಾಗವತರು, ಪ್ರಸಾದ ಬಲಿಪರು ಕಟೀಲು ಮೇಳದಲ್ಲಿ ಮುಖ್ಯ ಭಾಗವತರಾಗಿ ಸೇವೆ ಸಲ್ಲಿಸುತ್ತಿದ್ದರು. ಇನ್ನೋರ್ವ ಪುತ್ರ ಶಶಿಧರ್ ಬಲಿಪ ಕೃಷಿಕರು.

    ಯಕ್ಷಗಾನ ಕ್ಷೇತ್ರಕ್ಕೆ ಕೊಡುಗೆ
    ಬಲಿಪ ನಾರಾಯಣ ಭಾಗವತರು 6೦ ವರ್ಷಗಳ ಕಾಲ ಯಕ್ಷಗಾನ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಪಡ್ರೆ ಜಠಾಧಾರಿ ಮೇಳವನ್ನು ಇವರು ಮೊದಲಿಗೆ ಆರಂಭಿಸಿದರು. ಯಕ್ಷಗಾನದ 5೦ಕ್ಕೂ ಹೆಚ್ಚು ಪ್ರಸಂಗಗಳ ಕಂಠಪಾಠ ಬಲಿಪರಿಗಿದೆ. 3೦ ಪ್ರಕಟಿತ ಮತ್ತು 15 ಅಪ್ರಕಟಿತ ಯಕ್ಷಗಾನ ಪ್ರಸಂಗಗಳನ್ನು ರಚಿಸಿದ್ದಾರೆ. ಕಪ್ಪು ಮೂರು, ಬಿಳಿ ಐದರ ಸ್ವರದಲ್ಲಿ ಬಲಿಪರು ಹಾಡುತ್ತಾರೆ. ಇವರನ್ನು ತೆಂಕು ತಿಟ್ಟು ಯಕ್ಷ ರಂಗದ ಭೀಷ್ಮ ಎಂದು ಕರೆಯುತ್ತಾರೆ. ಇವರ ಯಕ್ಷಗಾನದ ಸುದೀರ್ಘ ಸೇವೆಗಾಗಿ ಯಕ್ಷಾಭಿಮಾನಿಗಳು ಬಲಿಪ ಅಮೃತ ಭವನವನ್ನು ಕಟ್ಟಿಸಿಕೊಟ್ಟಿದ್ದಾರೆ. ಬಲಿಪ ನಾರಾಯಣ ಭಾಗವತರು ಐದು ದಿನದ ದೇವೀ ಮಹಾತ್ಮೆ ಎಂಬ ಮಹಾಪ್ರಸಂಗವನ್ನು ರಚಿಸಿದ್ದು ವೇಣೂರಿನ ಕಜೆ ಸುಬ್ರಹ್ಮಣ್ಯ ಭಟ್ ಮತ್ತು ಅವರ ಸ್ನೇಹಿತರು ಇದನ್ನು ಪ್ರಕಟಿಸಿದ್ದು ಯಕ್ಷಗಾನದ ಇತಿಹಾಸದಲ್ಲೇ ಇದೊಂದು ಮಹತ್ವದ ಕೃತಿಯಾಗಿದೆ.

    ಲಭಿಸಿದ ಪ್ರಶಸ್ತಿಗಳಲ್ಲಿ ಕೆಲವು

    • ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ 2010
    • ಸಾಮಗ ಪ್ರಶಸ್ತಿ 2012
    • ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ `ಜ್ಞಾನ ಪ್ರಶಸ್ತಿ’ 2003
    • ಕರ್ನಾಟಕ ಜಾನಪದ ಪರಿಷತ್ತು ದೊಡ್ಡಮನೆ ಲಿಂಗೇಗೌಡ ಪ್ರಶಸ್ತಿ 2002
    • 71ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ `ಕರ್ನಾಟಕ ಶ್ರೀ ‘ಪ್ರಶಸ್ತಿ, 2003
    • ಪದವೀಧರ ಯಕ್ಷಗಾನ ಮಂಡಳಿ ಮುಂಬಯಿ `ಅಗರಿ ಪ್ರಶಸ್ತಿ’ 2002
    • ಶೇಣಿ ಪ್ರಶಸ್ತಿ, 2002
    • ಕವಿ ಮುದ್ದಣ ಪುರಸ್ಕಾರ, 2003
    • ಕೂಡ್ಲು ಸುಬ್ರಾಯ ಶ್ಯಾನುಭೋಗ ಪ್ರಶಸ್ತಿ, 2003
    • ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ವತಿಯಿಂದ ಬೆಂಗಳೂರಿನ ರಾಜ್ಯಮಟ್ಟದ ಸನ್ಮಾನ,2003
    • ಕರ್ನಾಟಕ ಸಂಘ ದುಬೈಯಲ್ಲಿ ಸನ್ಮಾನ, 2003
    • ಪಾರ್ತಿಸುಬ್ಬ ಪ್ರಶಸ್ತಿ
    • ಆಳ್ವಾಸ್ ನುಡಿಸಿರಿ ಪ್ರಶಸ್ತಿ

    Share. Facebook Twitter Pinterest LinkedIn Tumblr WhatsApp Email
    Previous Articleಕಲಾ ಸಾಧಕರಿಗೆ ಸುವರ್ಣ ರಂಗ ಸನ್ಮಾನ – 2023
    Next Article ಲಾವಣ್ಯ (ರಿ.) ಬೈಂದೂರಿನ ರಂಗ ಪಂಚಮಿ 2023 (ನಾಟಕೋತ್ಸವ-ಯಕ್ಷಗಾನ) ಫೆಬ್ರವರಿ 20ರಿಂದ 24
    roovari

    Add Comment Cancel Reply


    Related Posts

    ರಂಗ ಚಿನ್ನಾರಿಯಿಂದ ಸಂಸ್ಕೃತಿ ಉಳಿಸುವ ಕೆಲಸ – ಎಡನೀರು ಶ್ರೀ ಗಳು

    May 28, 2025

    ಸಮಾರೋಪಗೊಂಡ ಪುತ್ರಕಾಮೇಷ್ಠಿ ತಾಳಮದ್ದಲೆ ಸಪ್ತಾಹ

    May 28, 2025

    ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ‘ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025’ | ಜೂನ್ 01

    May 28, 2025

    ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಯಕ್ಷಗಾನ ವಿಚಾರ ಸಂಕಿರಣ, ಯಕ್ಷಗಾನ ಪ್ರದರ್ಶನ

    May 27, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.