ಬೆಂಗಳೂರು : ಬಂಡಾಯ ಸಾಹಿತ್ಯ ಸಂಘಟನೆ ಬೆಂಗಳೂರು ಜಿಲ್ಲಾ ಘಟಕ ಆಯೋಜಿಸುವ ತಿಂಗಳ ಕಾರ್ಯಕ್ರಮ ದಿನಾಂಕ 06-10-2023 ರಂದು ಬೆಂಗಳೂರಿನ ಕಬ್ಬನ್ ಪಾರ್ಕ್ ಬಳಿ ಇರುವ ಸಚಿವಾಲಯ ಕ್ಲಬ್ಬಿನ ಸಿ.ಎಂ.ಸಭಾಂಗಣದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಗಾಂಧೀಜಿ – ಸಮಕಾಲೀನ ಪ್ರಸ್ತುತತೆ ಎಂಬ ವಿಷಯದ ಬಗ್ಗೆ ನಿವೃತ್ತ ಇತಿಹಾಸ ಪ್ರಾಧ್ಯಾಪಕರಾದ ಡಾ.ಅಶ್ವತ್ಥ ನಾರಾಯಣ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಭಾರತದ ಅಧ್ಯಕ್ಷರಾದ ಶ್ರೀ ಕಿಗ್ಗ ರಾಜಶೇಖರ್ ಎಸ್.ಜಿ ವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಬಂಡಾಯ ಸಾಹಿತ್ಯ ಸಂಘಟನೆಯ ಜಿಲ್ಲಾ ಸಂಚಲಕರು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಸರ್ವರ ಸ್ವಾಗತ ಕೋರಿದ್ದಾರೆ.