Subscribe to Updates

    Get the latest creative news from FooBar about art, design and business.

    What's Hot

    ಅಂಬುರುಹ ಯಕ್ಷ ಕಲಾ ಕೇಂದ್ರದ ಅಷ್ಟಮ ಸಂಭ್ರಮ | ಜುಲೈ 19

    July 18, 2026

    ಪ್ರೇಕ್ಷಕರ ಮನಮುದಗೊಳಿಸಿದ ‘ಮಾರಿಕಾಡು’ ನಾಟಕ ಪ್ರದರ್ಶನ

    July 18, 2026

    ಮಂಗಳೂರಿನ ಡಾನ್‌ಬಾಸ್ಕೊ ಹಾಲ್‌ನಲ್ಲಿ ‘ಅಂಕುರಾ’ 2ನೇ ಆವೃತ್ತಿ ಪ್ರಸ್ತುತಿ | ಜುಲೈ 26

    July 18, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕಾಯರ್ತೋಡಿಯಲ್ಲಿ ರಂಗ ಮಯೂರಿ ಕಲಾ ಶಾಲೆಯ ‘ಬಣ್ಣ’ ಬೇಸಿಗೆ ಶಿಬಿರದ ಉದ್ಘಾಟನೆ
    Camp

    ಕಾಯರ್ತೋಡಿಯಲ್ಲಿ ರಂಗ ಮಯೂರಿ ಕಲಾ ಶಾಲೆಯ ‘ಬಣ್ಣ’ ಬೇಸಿಗೆ ಶಿಬಿರದ ಉದ್ಘಾಟನೆ

    April 10, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುಳ್ಯ : ಸುಳ್ಯದ ಶ್ರೀ ಹರಿ ಕಾಂಪ್ಲೆಕ್ಸ್ ಇಲ್ಲಿ ಕಾರ್ಯಾಚರಿಸುತ್ತಿರುವ ರಂಗ ಮಯೂರಿ ಕಲಾ ಶಾಲೆಯ ಆಯೋಜನೆಯಲ್ಲಿ 5ನೇ ವರ್ಷದ ‘ಬಣ್ಣ’ ರಾಜ್ಯ ಮಟ್ಟದ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭವು ಮಹಾವಿಷ್ಣು ಸಭಾ ಭವನದಲ್ಲಿ ದಿನಾಂಕ 09-04-2024ರಂದು ನಡೆಯಿತು.

    ರಂಗಮಯೂರಿ ಕಲಾ ಶಾಲೆಯ ನಿರ್ದೇಶಕ ಲೋಕೇಶ್ ಊರುಬೈಲು ಅಧ್ಯಕ್ಷತೆ ವಹಿಸಿದ್ದರು. ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಕಟ ಪೂರ್ವ ಅಧ್ಯಕ್ಷ ಉಮೇಶ್ ಪಿ.ಕೆ.ಯವರು ದೇಸಿಯ ಗ್ರಾಮೀಣ ಸೊಗಡಿನ ಆಟ ಅಡಿಕೆ ಹಾಳೆಯಲ್ಲಿ ಮಗುವನ್ನು ಕುಳ್ಳಿರಿಸಿ ಹಾಳೆಯನ್ನು ಎಳೆಯುವುದರೊಂದಿಗೆ ಶಿಬಿರಕ್ಕೆ ವಿಶಿಷ್ಟ ರೀತಿಯಲ್ಲಿ ಚಾಲನೆ ನೀಡಲಾಯಿತು.

    ಮುಖ್ಯ ಅಭ್ಯಾಗತರಾಗಿ ಕರ್ನಾಟಕ ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿಯವರು ದೀಪ ಪ್ರಜ್ವಲಿಸಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಶೈಲಜಾ ಕುಕ್ಕುಜಡ್ಕ, ಸುದ್ಧಿ ಪತ್ರಿಕೆಯ ಸಂಪಾದಕ ಹರೀಶ್ ಬಂಟ್ವಾಳ್, ಪೋಷಕ ಕಮಿಟಿ ಸದಸ್ಯ ಚಂದ್ರಶೇಖರ ಗುಡ್ಡೆಮನೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ಪ್ರಾಸ್ತಾವಿಕ ಮಾತಿನೊಂದಿಗೆ ನಿರ್ದೇಶಕ ಲೋಕೇಶ್ ಊರುಬೈಲು ಸ್ವಾಗತಿಸಿದರು. ಕಲಾ ಶಾಲೆಯ ಸದಸ್ಯ ಶಶಿಕಾಂತ್ ಮಿತ್ತೂರು ವಂದಿಸಿದರು. ಕು. ಸಿಂಚನಾ ಕಾರ್ಯಕ್ರಮ ನಿರೂಪಿಸಿದರು. ಬಾಲಕೃಷ್ಣ ಮೇನಾಲ ಸಹಕರಿಸಿದರು. ದಿನಾಂಕ 09-04-2024ರಿಂದ 17-04-2024ರ ತನಕ ಬೇಸಿಗೆ ಶಿಬಿರವು ನಡೆಯಲಿದ್ದು 7ರಿಂದ 17ರ ವಯೋಮಾನದ ಮಕ್ಕಳಿಗೆ ಶಿಬಿರದಲ್ಲಿ ವಿವಿಧ ಬಗೆಯ ದೇಸಿಯ ಕಲೆಗಳ ಅನಾವರಣದೊಂದಿಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕಾರ್ಯಾಗಾರ ನಡೆಯಲಿರುವುದು. ರಂಗಮಯೂರಿಯ ಹಿರಿಯ ವಿದ್ಯಾರ್ಥಿಗಳು ಮತ್ತು ಪೋಷಕ ಕಮಿಟಿ ಸದಸ್ಯರು ಸ್ವಯಂ ಸೇವಕರಾಗಿ ಸಹಕರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleರಂಗಶಂಕರದಲ್ಲಿ ‘ಜೊತೆಗಿರುವನು ಚಂದಿರ’ ನಾಟಕ ಪ್ರದರ್ಶನ | ಏಪ್ರಿಲ್ 13
    Next Article ‘ಮನೆ ಅಂಗಳದಲ್ಲಿ ಮಾತುಕತೆ’ ಕಾರ್ಯಕ್ರಮ
    roovari

    Add Comment Cancel Reply


    Related Posts

    ಸಿವಗಂಗ ರಂಗಮಂದಿರದಲ್ಲಿ ಯಕ್ಷಗಾನ ತರಬೇತಿ ಶಿಬಿರ ಮತ್ತು ತಾಲೀಮು | ಜುಲೈ 09

    July 6, 2026

    ರಾಜ್ಯ ಮಟ್ಟದ ಸಿಮೆಂಟ್‌ ಶಿಲ್ಪಕಲಾ ಶಿಬಿರ ಸಮಾರೋಪ ಸಮಾರಂಭ

    June 27, 2026

    ವಿಶ್ವ ಕೊಂಕಣಿ ಕೇಂದ್ರದಲ್ಲಿ ವ್ಯಕ್ತಿತ್ವ ವಿಕಸನ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಾಗಾರಕ್ಕೆ ಚಾಲನೆ

    June 26, 2026

    ಕಲಾಂಗಣದಲ್ಲಿ ಶಿಲ್ಪಕಲಾಕೃತಿಗಳ ಲೋಕಾರ್ಪಣೆ ಮತ್ತು ಸಮಾರೋಪ ಸಮಾರಂಭ | ಜೂನ್ 26

    June 25, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.