ಮಂಗಳೂರು : ನಾದನೃತ್ಯ ಸ್ಕೂಲ್ ಆಫ್ ಡಾನ್ಸ್ ಎಂಡ್ ಕಲ್ಚರಲ್ ಟ್ರಸ್ಟ್ (ರಿ.) ಮಂಗಳೂರು ಇದರ ವತಿಯಿಂದ ಪದವರ್ಣವೆಂಬ ನೃತ್ಯಬಂಧದ ವಿವಿಧ ಮುಖಗಳು ‘ಬಣ್ಣಗಳ ಭಾವಲೋಕ’ ನೃತ್ಯ ಪ್ರದರ್ಶನವು ದಿನಾಂಕ 18-05-2024ರಂದು ಸಂಜೆ 6-00ರಿಂದ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮವನ್ನು ಮೈಸೂರಿನ ಪ್ರದರ್ಶಕ ಕಲೆಗಳ ಕೇಂದ್ರದ ನಿರ್ದೇಶಕಿ ಡಾ. ವಸುಂಧರಾ ದೊರೆಸ್ವಾಮಿ ಇವರು ಉದ್ಘಾಟಿಸಲಿದ್ದು, ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ತಿನ ಅಧ್ಯಕ್ಷರಾದ ವಿದ್ವಾನ್ ಯು.ಕೆ. ಪ್ರವೀಣ್ ಮುಖ್ಯ ಅಭ್ಯಾಗತರಾಗಿ ಪಾಲ್ಗೊಳ್ಳಲಿದ್ದಾರೆ.