ಸುಳ್ಯ : ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಸಂಘವು ಕನ್ನಡ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಹಮ್ಮಿಕೊಂಡ “ಬರವಣಿಗೆ ಮಾಧ್ಯಮ ಶಿಬಿರ” ಕಾರ್ಯಕ್ರಮವು ದಿನಾಂಕ 20 ಫೆಬ್ರವರಿ 2025ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ನಿವೃತ್ತ ಪ್ರಾಧ್ಯಾಪಕರಾದ ಡಾ. ನರೇಂದ್ರ ರೈ ದೇರ್ಲ ಮಾತನಾಡಿ “ಸುಖ ಯಾವುದನ್ನೂ ಸೃಷ್ಟಿಸುವುದಿಲ್ಲ. ಸತತ ಪರಿಶ್ರಮದಿಂದ ಸಾಹಿತ್ಯ ಸೃಷ್ಟಿಯಾಗುತ್ತದೆ. ಆ ನಿಟ್ಟಿನಲ್ಲಿ ಹಳ್ಳಿಯ ಬೇರುಗಳು ಸಾಹಿತ್ಯವನ್ನು ಸೃಷ್ಟಿಸುತ್ತವೆ. ಬದುಕನ್ನು ಕಟ್ಟಿಕೊಡುವ ಮಾಧ್ಯಮ ಬರವಣಿಗೆ ಶಾಶ್ವತವಾಗಿಸುತ್ತದೆ. ನಿಮ್ಮ ಒಂದೇ ಒಂದು ಬರಹ ಕೂಡ ನಿಮ್ಮನ್ನು ಶಾಶ್ವತವಾಗಿಸಬಹುದು. ಆ ನಿಟ್ಟಿನಲ್ಲಿ ಓದುವ ಹವ್ಯಾಸವನ್ನು ಮೂಡಿಸಿಕೊಂಡು ಬರವಣಿಗೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಿ” ಎಂದು ಕರೆ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ. ಎಂ. ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ಶುಭ ಹಾರೈಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಸಂಜೀವ ಕುದ್ರಾಜೆ ಸ್ವಾಗತಿಸಿ, ಕಾರ್ಯಕ್ರಮದ ಸಂಘಟಕರು ಹಾಗೂ ಕನ್ನಡ ಸಂಘದ ಸಂಚಾಲಕರಾದ ಡಾ. ಅನುರಾಧಾ ಕುರುಂಜಿ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿನಿ ಅಭಿಜ್ಞಾ ಕಾರ್ಯಕ್ರಮ ನಿರೂಪಿಸಿ, ಐಕ್ಯೂಎಸಿ ಸಂಚಾಲಕಿ ಡಾ. ಮಮತಾ ಕೆ ವಂದಿಸಿದರು.
Subscribe to Updates
Get the latest creative news from FooBar about art, design and business.