Subscribe to Updates

    Get the latest creative news from FooBar about art, design and business.

    What's Hot

    ‘ಎ ಬಯೋಗ್ರಫಿಕಲ್ ಸ್ಕೆಚ್ ಆಫ್ ಮುದ್ದು ಮೂಡುಬೆಳ್ಳೆ’ ಕೃತಿ ಲೋಕಾರ್ಪಣೆ

    June 23, 2026

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ‘ಯಕ್ಷಗಾನ ಏಕಪಾತ್ರಾಭಿನಯ’

    June 23, 2026

    ವಿಶ್ವ ಕೊಂಕಣಿ ಕೇಂದ್ರದ ಐದು ಪ್ರಶಸ್ತಿಗಳಿಗೆ ಅರ್ಜಿ ಅಹ್ವಾನ | ಕೊನೆಯ ದಿನಾಂಕ ಆಗಸ್ಟ್ 31

    June 23, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ‘ಬ್ಯಾರಿ ಸಾಹಿತ್ಯ ಸಮ್ಮೇಳನ’ | ಜನವರಿ 04
    Beary

    ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ‘ಬ್ಯಾರಿ ಸಾಹಿತ್ಯ ಸಮ್ಮೇಳನ’ | ಜನವರಿ 04

    January 3, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನವನ್ನು ದಿನಾಂಕ 04 ಜನವರಿ 2026ರಂದು ಬೆಳಗ್ಗೆ 9-00 ಗಂಟೆಗೆ ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ನಡೆಯಲಿದೆ.

    ಬೆಳಿಗ್ಗೆ ಗಂಟೆ 9-30ಕ್ಕೆ ಗುರುಪುರ ಕೈಕಂಬದ ಸಬೀಲುಲ್ ಹುದಾ ಅಲ್‌ಬಿರ್ರ್ ಶಾಲಾ ಆವರಣದಿಂದ ಪ್ರಾರಂಭವಾಗುವ ಮೆರವಣಿಗೆಯನ್ನು ಸಮ್ಮೇಳನ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಎಂ.ಎಚ್. ಮೊಹಿದಿನ್ ಅಡ್ಡೂರು ಉದ್ಘಾಟಿಸುವರು. ಗಂಟೆ 10-15ಕ್ಕೆ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಸಮ್ಮೇಳನ ಉದ್ಘಾಟಿಸಲಿದ್ದು, ಸಾಹಿತಿ ಅಬ್ದುಲ್ ರಹಿಮಾನ್ ಕುತ್ತೆತ್ತೂರು ಸಮ್ಮೇಳನದ ಅಧ್ಯಕ್ಷತೆ ವಹಿಸುವರು. ವಿವಿಧ ಅಕಾಡೆಮಿಗಳ ಅಧ್ಯಕ್ಷರು ಭಾಗವಹಿಸುವರು.

    ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಶಮೀಮಾ ಕುತ್ತಾರ್ ಇವರ ‘ಪಡಿಞ್ಞಾರ್ರೋ ಪೂ’ (ಕಥಾ ಸಂಕಲನ), ಹಸೀನ ಮಲ್ನಾಡ್ ಇವರ ‘ಮಿನ್ನಾಂಪುಲು’ (ಹನಿಗವನ ಸಂಕಲನ), ಎನ್.ಎಂ. ಹನೀಫ್ ನಂದರಬೆಟ್ಟು ಇವರ ‘ಸಂಪುಕಾತ್’ (ಕವನ ಸಂಕಲನ). ಬಶೀರ್ ಅಹ್ಮದ್ ಬೆಳ್ಳಾಯಿರು ಇವರ ‘ಬೆಲ್‌ಚ’ (ಕವನ ಸಂಕಲನ) ಮತ್ತು ಹೈದರಲಿ ಕಾಟಿಪಳ್ಳ ಇವರ ‘ನಸೀಅತ್’ (ಕವನ ಸಂಕಲನ) ಬ್ಯಾರಿ ಕೃತಿಗಳು ಬಿಡುಗಡೆಗೊಳ್ಳಲಿವೆ.

    ಮಧ್ಯಾಹ್ನ 12-00ಕ್ಕೆ ಸಮ್ಮೇಳನಾಧ್ಯಕ್ಷರ ಭಾಷಣದ ಮೇಲೆ ಚರ್ಚಾಗೋಷ್ಠಿ ನಡೆಯಲಿದೆ. ಮಧ್ಯಾಹ್ನ 2-00 ಗಂಟೆಗೆ ಸಾಹಿತಿ ಮುಹಮ್ಮದ್ ಬಡ್ಡೂರು ಅಧ್ಯಕ್ಷತೆಯಲ್ಲಿ ಬ್ಯಾರಿ ಕವಿಗೋಷ್ಠಿ, ಮೂಡುಬಿದಿರೆ ಆಳ್ವಾಸ್ ಕಾಲೇಜಿನ ದಫ್ ತಂಡದಿಂದ ದಫ್ ಹಾಡು ಮತ್ತು ಬ್ಯಾರಿ ಹಾಡುಗಾರರ ತಂಡದಿಂದ ಹಾಡುಗಳ ಪ್ರಸ್ತುತಿ, ಸಂಜೆ 4-00ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸಾಧಕರಿಗೆ ಸನ್ಮಾನ ನಡೆಯಲಿದೆ. ಬ್ಯಾರಿ ಇನ್ಫೋ.ಕಾಂನ ಮುಖ್ಯಸ್ಥ ಬಿ.ಎ. ಮುಹಮ್ಮದ್ ಅಲಿ ಸಮಾರೋಪ ಭಾಷಣ ಮಾಡುವರು. ಸಂಜೆ ಗಂಟೆ 6-30ಕ್ಕೆ ಇಸ್ಮಾಯಿಲ್ ಮೂಡುಶೆಡ್ಡೆ ಇವರ ನಿರ್ದೇಶನದಲ್ಲಿ ‘ಬ್ರೋಕರ್ ಪೋಕರ್’ ಬ್ಯಾರಿ ನಾಟಕ ಮತ್ತು ಗುರುಪುರದ ಎಂ.ಜಿ.ಎಂ. ತಂಡದಿಂದ ತಾಲೀಮು ಪ್ರದರ್ಶನ ನಡೆಯಲಿದೆ.

    baikady beary Book release dance drama felicitation Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleನೃತ್ಯ ವಿಮರ್ಶೆ | ಮನರಂಜಿಸಿದ ಶರ್ವಾಣಿ ನಾಟ್ಯಶಾಲೆಯ ಸುಮನೋಹರ ನೃತ್ಯವೈವಿಧ್ಯ
    Next Article ಸುನಾದ ಸಂಗೀತ ಕಲಾಶಾಲೆಯ ಸುನಾದ ಸಂಗೀತೋತ್ಸವ ಸಂಭ್ರಮ
    roovari

    Add Comment Cancel Reply


    Related Posts

    ‘ಎ ಬಯೋಗ್ರಫಿಕಲ್ ಸ್ಕೆಚ್ ಆಫ್ ಮುದ್ದು ಮೂಡುಬೆಳ್ಳೆ’ ಕೃತಿ ಲೋಕಾರ್ಪಣೆ

    June 23, 2026

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ‘ಯಕ್ಷಗಾನ ಏಕಪಾತ್ರಾಭಿನಯ’

    June 23, 2026

    ವಿಶ್ವ ಕೊಂಕಣಿ ಕೇಂದ್ರದ ಐದು ಪ್ರಶಸ್ತಿಗಳಿಗೆ ಅರ್ಜಿ ಅಹ್ವಾನ | ಕೊನೆಯ ದಿನಾಂಕ ಆಗಸ್ಟ್ 31

    June 23, 2026

    ಡಾ. ಪಾದೇಕಲ್ಲು ವಿಷ್ಣು ಭಟ್ ಮತ್ತು ಶ್ರೀ ಟಿ.ಎ.ಎನ್. ಖಂಡಿಗೆ ಇವರಿಗೆ ‘ವರ್ಧಮಾನ ಸಾಹಿತ್ಯ ಪ್ರಶಸ್ತಿ’ ಘೋಷಣೆ

    June 23, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.