ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮವು ದಿನಾಂಕ 09-12-2024ರಂದು ಸಂಜೆ ಗಂಟೆ 6-25ಕ್ಕೆ ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಈ ದಿನದ ಸರಣಿ ಕಾರ್ಯಕ್ರಮದಲ್ಲಿ ಶ್ರೀಗೌರೀ ಉಪಾಧ್ಯ ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ.
ಶ್ರೀಗೌರೀಯು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಸಂಸ್ಕ್ರತ ಶಾಸ್ತ್ರ ಸ್ನಾತಕೋತ್ತರ ಪದವಿಯ ವಿದ್ಯಾರ್ಥಿನಿಯಾಗಿದ್ದು, ತನ್ನ ಕಲಾ ಪ್ರಯಾಣವನ್ನು 2011ರಲ್ಲಿ ಕರ್ನಾಟಕ ಕಲಾಶ್ರೀ ಆಚಾರ್ಯ ಅಶೋಕ್ ಕುಮಾರ್ ಇವರಲ್ಲಿ ಪ್ರಾರಂಭಿಸಿದಳು. ಕರ್ನಾಟಕ ವಿಶ್ವವಿದ್ಯಾಲಯವು ನಡೆಸುವ ಜೂನಿಯರ್ ಮತ್ತು ಸೀನಿಯರ್ ಪರೀಕ್ಷೆಗಳಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು, 2024ರಲ್ಲಿ ರಂಗಪ್ರವೇಶವನ್ನೂ ಮಾಡಿರುತ್ತಾಳೆ. ನಾಟ್ಯಗುರುಗಳ ಮಾರ್ಗದರ್ಶನದಲ್ಲಿ ಭರತನಾಟ್ಯದ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು, ಬಾಲ ಭವನ, ಬೆಂಗಳೂರು ಗಣೇಶೋತ್ಸವ ಇತ್ಯಾದಿಗಳು ಉಲ್ಲೇಖನೀಯ.