ಬೆಂಗಳೂರು : ನೃತ್ಯಾಂಗಣ ಪ್ರಸ್ತುತ ಪಡಿಸುವ ಗುರು ರಾಧಿಕಾ ಶೆಟ್ಟಿ ಇವರ ಶಿಷ್ಯೆ ಕುಮಾರಿ ದಿಶಾ ಕಾರ್ತಿಕ್ ಇವರ ‘ಭರತನಾಟ್ಯ ರಂಗಪ್ರವೇಶ’ ಕಾರ್ಯಕ್ರಮವನ್ನು ದಿನಾಂಕ 02 ಆಗಸ್ಟ್ 2026ರಂದು ಸಂಜೆ ಗಂಟೆ 4-30ಕ್ಕೆ ಬೆಂಗಳೂರಿನ ಜೆ.ಸಿ. ರೋಡ್ ಎ.ಡಿ.ಎ. ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಶ್ರೀ ಶಿವಗಂಗಾ ಡಾನ್ಸ್ ಅಕಾಡೆಮಿಯ ನಿರ್ದೇಶಕರಾದ ಶ್ರೀಮತಿ ಆಶಾ ಕುಮಾರ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಭರತನಾಟ್ಯ ಕಾರ್ಯಕ್ರಮಕ್ಕೆ ನಟುವಾಂಗಂನಲ್ಲಿ ಗುರು ರಾಧಿಕಾ ಶೆಟ್ಟಿ, ಹಾಡುಗಾರಿಕೆಯಲ್ಲಿ ಶ್ರೀಮತಿ ವಿದ್ಯಾಶ್ರೀ ರಾಧಕೃಷ್ಣನ್, ಮೃದಂಗದಲ್ಲಿ ಶ್ರೀ ಬಾಲಚಂದ್ರ ಭಾಗವತ್ ಮತ್ತು ಕೊಳಲು ಶ್ರೀ ರಾಜ ಗೋಪಾಲನ್ ವಿ.ಪಿ. ಇವರುಗಳು ಸಹಕರಿಸಲಿದ್ದಾರೆ.

