ಮಂಗಳೂರು : ಸನಾತನ ನಾಟ್ಯಾಲಯ ಪ್ರಸ್ತುತ ಪಡಿಸುವ ಗುರು ಶಾರದಾಮಣಿ ಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ಇವರ ಶಿಷ್ಯೆ ವಿದುಷಿ ಸಿಂಚನಾ ಎಸ್. ಕುಲಾಲ್ ಇವರ ‘ಭರತನಾಟ್ಯ ರಂಗಪ್ರವೇಶ’ವು ದಿನಾಂಕ 12 ಅಕ್ಟೋಬರ್ 2025ರಂದು ಸಂಜೆ 5-00ಕ್ಕೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.
ಕರ್ನಾಟಕ ಕಲಾತಿಲಕ ನಾಟ್ಯಾಚಾರ್ಯ ಶ್ರೀ ಉಳ್ಳಾಲ್ ಮೋಹನ್ ಕುಮಾರ್ ಇವರಿಂದ ದೇವತಾ ದೀಪ ಪ್ರಜ್ವಲನೆಯೊಂದಿಗೆ ಪ್ರಾರಂಭವಾಗುವ ಈ ಕಾರ್ಯಕ್ರಮದಲ್ಲಿ ಆಳ್ವಾಸ್ ನ ಡಾ. ಮೋಹನ್ ಆಳ್ವ ಮತ್ತು ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಭರತನಾಟ್ಯ ಕಾರ್ಯಕ್ರಮಕ್ಕೆ ನಟುವಾಂಗಂನಲ್ಲಿ ಗುರು ಶಾರದಾಮಣಿ ಶೇಖರ್, ಹಾಡುಗಾರಿಕೆಯಲ್ಲಿ ವಿನೀತ್ ಪುರವಂಕರ, ಮೃದಂಗದಲ್ಲಿ ರಾಜನ್ ಪಯ್ಯನೂರ್ ಮತ್ತು ಕೊಳಲು ನಿತೀಶ್ ಅಮ್ಮಣ್ಣಯ್ಯ ಇವರುಗಳು ಸಹಕರಿಸಲಿದ್ದಾರೆ.