ಬಂಟ್ವಾಳ : ಕಲಾನಿಕೇತನ ಡಾನ್ಸ್ ಫೌಂಡೇಶನ್ (ರಿ.) ಕಲ್ಲಡ್ಕ ಇವರು ಪ್ರಸ್ತುತ ಪಡಿಸುವ ವಿದುಷಿ ವಿದ್ಯಾ ಮನೋಜ್ ಇವರ ಶಿಷ್ಯೆ ಕುಮಾರಿ ಆತ್ಮಿ ಶೆಟ್ಟಿ ಇವರ ‘ಭರತನಾಟ್ಯ ರಂಗಪ್ರವೇಶ’ವನ್ನು ದಿನಾಂಕ 04 ಏಪ್ರಿಲ್ 2026ರಂದು ಸಂಜೆ ಗಂಟೆ 5-15ಕ್ಕೆ ಬಂಟ್ವಾಳ ಬಿ.ಸಿ. ರೋಡಿನಲ್ಲಿರುವ ಸ್ಪರ್ಶ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಆತ್ಮಿ ಶೆಟ್ಟಿ ಇವರು 12 ವರ್ಷಗಳಿಂದ ಗುರುಗಳಾದ ವಿದುಷಿ ಶ್ರೀಮತಿ ವಿದ್ಯಾ ಮನೋಜ್ ಇವರ ಬಳಿ ಭರತನಾಟ್ಯ ಅಭ್ಯಾಸವನ್ನು ಮಾಡುತ್ತಿದ್ದು, ವಿದ್ವತ್ ಅಂತಿಮ ಪರೀಕ್ಷೆಯ ತಯಾರಿಯಲ್ಲಿದ್ದಾರೆ. ಹಲವು ಪ್ರತಿಷ್ಠಿತ ವೇದಿಕೆಗಳಲ್ಲಿ ಕಾರ್ಯಕ್ರಮಗಳನ್ನು ನೀಡಿದ್ದು, ಜನಮನ್ನಣೆಯನ್ನು ಗಳಿಸಿರುವಂತಹ ಉದಯೋನ್ಮುಖ ಕಲಾವಿದೆ.
ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಪುತ್ತೂರಿನ ವಿಶ್ವಕಲಾನಿಕೇತನ ಇನ್ಸ್ಟಿಟ್ಯೂಟ್ ಆಫ್ ಆರ್ಟ್ ಅಂಡ್ ಕಲ್ಚರ್ ಭರತನಾಟ್ಯ ಸಂಸ್ಥೆಯ ನಿರ್ದೇಶಕರಾದ ಕರ್ನಾಟಕ ಕಲಾಶ್ರೀ ಗುರು ವಿದುಷಿ ನಯನ ವಿ ರೈ, ನೃತ್ಯಗಿರಿ ಮೈಸೂರು ಭರತನಾಟ್ಯ ಸಂಸ್ಥೆಯ ನಿರ್ದೇಶಕರಾದ ಡಾ. ಕೃಪಾ ಪಡ್ಕೆ, ಯಕ್ಷದ್ರುವ ಪಟ್ಲ ಫೌಂಡೇಶನ್ ಮಂಗಳೂರಿನ ಸ್ಥಾಪಕರಾದ ಶ್ರೀ ಪಟ್ಲ ಗುತ್ತು ಸತೀಶ್ ಶೆಟ್ಟಿ, ಹೋಟೆಲ್ ರಂಗೋಲಿಯ ಉದ್ಯಮಿಗಳಾದ ಶ್ರೀ ಚಂದ್ರಹಾಸ ಡಿ ಶೆಟ್ಟಿ ಇವರು ಭಾಗವಹಿಸಲಿದ್ದಾರೆ. ಹಿಮ್ಮೇಳ ಕಲಾವಿದರಾಗಿ ನಟುವಾಂಗದಲ್ಲಿ ಗುರು ವಿದುಷಿ ಶ್ರೀಮತಿ ವಿದ್ಯಾ ಮನೋಜ್, ಹಾಡುಗಾರಿಕೆಯಲ್ಲಿ ವಿದ್ವಾನ್ ನಂದಕುಮಾರ್ ಉನ್ನಿಕೃಷ್ಣನ್ ಬೆಂಗಳೂರು, ಮೃದಂಗ ವಾದನದಲ್ಲಿ ವಿದ್ವಾನ್ ಕಾರ್ತಿಕ್ ವೈದಾತ್ರಿ ಬೆಂಗಳೂರು, ಕೊಳಲು ವಾದನದಲ್ಲಿ ವಿದ್ವಾನ್ ನಿತೀಶ್ ಅಮ್ಮಣ್ಣಾಯ ಬೆಂಗಳೂರು, ವೀಣಾ ವಾದನದಲ್ಲಿ ವಿದ್ವಾನ್ ಗೋಪಾಲ್ ವೆಂಕಟರಮಣ ಬೆಂಗಳೂರು ಇವರು ಸಹಕರಿಸಲಿದ್ದಾರೆ.

