Subscribe to Updates

    Get the latest creative news from FooBar about art, design and business.

    What's Hot

    ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪಣಂಬೂರು ವೆಂಕಟರಾಯ ಐತಾಳ ಪ್ರತಿಷ್ಠಾನದ ಪ್ರಶಸ್ತಿ ಪ್ರದಾನ

    July 17, 2025

    ಮೂಡಬಿದರೆಯಲ್ಲಿ ಕೊಂಕಣಿ ಸಾಹಿತ್ಯ ಕಾರ್ಯಾಗಾರ | ಜುಲೈ 20

    July 17, 2025

    ಕೋಲಾರ ಪತ್ರಕರ್ತರ ಭವನದಲ್ಲಿ ‘ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನ-2025’ | ಜುಲೈ 19

    July 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದಲ್ಲಿ ಸಂವಾದ ಕಾರ್ಯಕ್ರಮ
    Kannada

    ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದಲ್ಲಿ ಸಂವಾದ ಕಾರ್ಯಕ್ರಮ

    July 17, 2025No Comments3 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮುಂಬಯಿ : ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದಲ್ಲಿ ಸಂವಾದ ಕಾರ್ಯಕ್ರಮವು ದಿನಾಂಕ 14 ಜುಲೈ 2025ರ ಸೋಮವಾರದಂದು ನಡೆಯಿತು.
    ಸಮಾರಂಭದಲ್ಲಿ ‘ಬಿಲ್ಲವರಲ್ಲಿ ಜಾತಿ ಧರ್ಮ ಮತ್ತು ಸಾಮಾಜಿಕ ಚಲನಶೀಲತೆಯ ಸಮಸ್ಯೆಗಳ ಪರಿಹಾರ’ ಈ ವಿಷಯದ ಕುರಿತು ಅಧ್ಯಯನವನ್ನು ಕೈಗೊಂಡಿರುವ ಸ್ವಿಟ್ಜರ್ಲ್ಯಾಂಡ್‌ನ ಜುರಿಕ್ ವಿಶ್ವವಿದ್ಯಾಲಯದ ಸಂಶೋಧಕ, ಸಹಾಯಕ ಪ್ರಾಧ್ಯಾಪಕರಾದ ಡಾ. ಮುಕೇಶ್ ಕುಮಾರ್ ಮಾತನಾಡಿ “ಒಂದು ಕಾಲದಲ್ಲಿ ಮೇಲ್ವರ್ಗದವರಿಂದ ಅಸ್ಪ್ರಶ್ಯರೆನಿಸಿಕೊಂಡು ಸಮಾಜದಿಂದ ಬಹಿಷ್ಕೃತರಾದ ಬಿಲ್ಲವರು ಶ್ರೀಮಂತವಾದ ಸಾಂಸ್ಕೃತಿಕ ಹಿನ್ನೆಲೆಯಿಂದ ಬಂದವರು. ದಾರ್ಶನಿಕ ನಾರಾಯಣ ಗುರುಗಳ ಮಾರ್ಗದರ್ಶನವನ್ನೇ ಸ್ಫೂರ್ತಿಯಾಗಿಸಿಕೊಂಡು ಹಲವಾರು ಸಂಘರ್ಷಗಳನ್ನು ಎದುರಿಸಿಯೂ ಬಿಲ್ಲವರು ಉನ್ನತ ಸ್ಥಾನಮಾನವನ್ನು ಗಳಿಸಿಕೊಂಡರು. ಬಾಸೆಲ್ ಮಿಶನ್ ವರದಿಯಲ್ಲಿ ದಾಖಲಾಗಿರುವ ಬಿಲ್ಲವರ ಕುರಿತು ಓದಿ ಆಸಕ್ತಿಯಿಂದ ಅಧ್ಯಯನವನ್ನು ನಡೆಸುತ್ತಿರುವೆ. ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಮಂಗಳೂರಿಗೆ ಭೇಟಿ ನೀಡುತ್ತಿದ್ದೇನೆ. ತಳಮಟ್ಟಕ್ಕೆ ತಳ್ಳಲ್ಪಟ್ಟ ಈ ಸಮಾಜವು ನಾರಾಯಣ ಗುರುಗಳ ಪ್ರೇರಣೆಯಿಂದ ಹೇಗೆ ಉನ್ನತಿಯನ್ನು ಕಂಡಿತು ಎಂದು ತಿಳಿಯುವುದು ನನ್ನ ಅಧ್ಯಯನದ ಮುಖ್ಯ ಉದ್ದೇಶವಾಗಿದೆ. ಬಿಲ್ಲವ ಸಮುದಾಯ ಕಳೆದ ನೂರು ವರ್ಷಗಳಲ್ಲಿ ಮಾಡಿರುವ ಸಾಧನೆ ಅಪಾರ. ಇಲ್ಲಿ ಪ್ರಗತಿಪರ ಚಿಂತಕ ದಾರ್ಶನಿಕ ನಾರಾಯಣ ಗುರುಗಳ ಪಾತ್ರ ಘನವಾದದ್ದು. ಮುಂಬಯಿ ಬಿಲ್ಲವರ ನಾನಾ ಮುಖಗಳ ಸಾಧನೆಯನ್ನು ಕಳೆದ ಒಂದೂವರೆ ತಿಂಗಳಿನಿಂದ ಅಧ್ಯಯನ ಮಾಡುತ್ತಿದ್ದೇನೆ. ಮುಂಬಯಿ ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ನನ್ನ ಸಂಶೋಧನೆಯ ಹಿನ್ನೆಲೆಯಲ್ಲಿ ಕೆಲವು ವಿಚಾರಗಳನ್ನು ಹಂಚಿಕೊಳ್ಳಲು ಅವಕಾಶ ಸಿಕ್ಕಿದೆ. ಕನ್ನಡ ವಿಭಾಗದ ಶೈಕ್ಷಣಿಕ ಚಟುವಟಿಕೆಗಳು ಸಮುದಾಯವನ್ನು ಬೆಸೆಯುವ ನಿಟ್ಟಿನಲ್ಲಿ ಮಹತ್ವದ್ದಾಗಿದೆ” ಎಂಬುದಾಗಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
    ಇನ್ನೋರ್ವ ಅಥಿತಿಯಾಗಿ ಆಗಮಿಸಿದ ಮಣಿಪಾಲದ ಮಾಹೆ ವಿಶ್ವವಿದ್ಯಾಲಯದ ಸಹಪ್ರಾಧ್ಯಾಪಕರಾದ ಪ್ರಥ್ವಿರಾಜ್ ಕವತ್ತಾರ್ ಮಾತನಾಡಿ “ಕಳೆದ ಹಲವಾರು ವರ್ಷಗಳಿಂದ ಮುಂಬಯಿ ವಿಶ್ವವಿದ್ಯಾಲಯದ ಕನ್ನಡ ವಿಭಾಗ ಬೇರೆ ಬೇರೆ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಅಕಾಡೆಮಿಕ್ ಎಂದರೆ ಸಮಾಜದಿಂದ ದೂರವಾದ ವಾತಾವರಣ ಎಂದು ನಾವು ಭಾವಿಸುತ್ತೇವೆ. ಪ್ರೊ. ಉಪಾಧ್ಯ ಅವರು ಶಿಕ್ಷಣ ಮತ್ತು ಸಮಾಜವನ್ನು ಒಂದೆಡೆ ಸೇರಿಸಿಕೊಂಡು ಸೌಹಾರ್ದಯುತವಾಗಿ ಮುನ್ನಡೆಯುತ್ತಿದ್ದಾರೆ. ದೇಶದ ಬೇರೆ ಬೇರೆ ಭಾಗಗಳಲ್ಲಿ ಕನ್ನಡ ವಿಭಾಗಗಳಿವೆ. ಆದರೆ ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗವು ತುಂಬಾ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ” ಎಂದು ಅವರು ವಿಭಾಗದ ಸಾಧನೆಯನ್ನು ಪ್ರಶಂಸಿಸಿದರು.
    ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕನ್ನಡ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಪ್ರೊ. ಜಿ. ಎನ್ ಉಪಾಧ್ಯ ಮಾತನಾಡಿ “ಶೋಧನೆ ಎನ್ನುವುದು ನಿರಂತರವಾದ ಒಂದು ಪ್ರಕ್ರಿಯೆ ಎಂಬ ಮಾತಿದೆ. ಸಮಾಜದ ವಿಭಿನ್ನ ನೆಲೆಗಳ ಬೆಳವಣಿಗೆಯನ್ನು ಗುರುತಿಸಿ ಕಾಲಕಾಲಕ್ಕೆ ಮೌಲ್ಯಮಾಪನ ಮಾಡುವ ಶೋಧ ಕಾರ್ಯ ಅನಿವಾರ್ಯ. ಡಾ. ಮುಕೇಶ್ ಕುಮಾರ್ ಅವರು ಅಂತಾರಾಷ್ಟ್ರೀಯ ನೆಲೆಯಲ್ಲಿ ಸ್ವಿಜರ್ಲ್ಯಾಂಡ್ ವಿಶ್ವವಿದ್ಯಾಲಯದಲ್ಲಿ ಬಿಲ್ಲವ ಸಮುದಾಯದ ಒಂದು ಶತಮಾನದ ಏಳುಬೀಳುಗಳ ಕಥನವನ್ನು ಅಧಿಕೃತ ದಾಖಲೆಗಳೊಂದಿಗೆ ಕಟ್ಟಿಕೊಡಲು ಮುಂದಾಗಿರುವುದು ಹೆಮ್ಮೆಯ ಸಂಗತಿ. ಅವರ ಪ್ರಯತ್ನ ಸಂಶೋಧನ ಆಸಕ್ತಿ ಯುವತಲೆಮಾರಿಗೆ ಅನುಕರಣೀಯ ಅಂಶ, ಹೆಮ್ಮೆ ಪಡುವ ಸಂಗತಿ. ಮುಂಬಯಿಗೆ ವಲಸೆ ಬಂದ ಮೊಗವೀರ ಸಮುದಾಯದ ಕುರಿತು ಈಗಾಗಲೇ ಡಾ. ಜಿ. ಪಿ. ಕುಸುಮ ಅವರು ಅಧ್ಯಯನ ಮಾಡಿದ್ದಾರೆ. ಅನಿತಾ ಪೂಜಾರಿಯವರು ಮುಂಬಯಿಯ ಬಿಲ್ಲವರ ಯಶೋಗಾಥೆಯನ್ನು ಕಟ್ಟಿಕೊಡುವ ಪ್ರಯತ್ನದಲ್ಲಿ ಸಂಶೋಧನ ಅಧ್ಯಯನದಲ್ಲಿ ನಿರತರಾಗಿದ್ದಾರೆ. ಯಾವುದೇ ಮೀಸಲಾತಿ ಮತ್ತೊಂದು ಮೊಗದೊಂದು ಸೌಲಭ್ಯ ಇಲ್ಲದೆಯೂ ಈ ತಳ ಸಮುದಾಯಗಳು ಮುಂಬಯಿಯಲ್ಲಿ ಮಾಡಿದ ಸಾಹಸಕಾರ್ಯ ಬೆರಗು ಹುಟ್ಟಿಸುತ್ತದೆ. ಇದು ನಾಡಿಗೆ ಮಾದರಿ. ಇದನ್ನು ದಾಖಲಿಸುವ ಕೆಲಸವನ್ನು ಕನ್ನಡ ವಿಭಾಗ ನಿರಂತರವಾಗಿ ಮಾಡುತ್ತಾ ಬಂದಿದೆ. ಡಾ. ಮುಕೇಶ್ ಕುಮಾರ್ ಅವರು ಕನ್ನಡ ವಿಭಾಗವನ್ನು ಹುಡುಕಿಕೊಂಡು ಬಂದಿರುವುದು ಖುಷಿಕೊಟ್ಟ ಸಂಗತಿ. ಮಣಿಪಾಲದ ಮಾಹೆ ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ. ಪೃಥ್ವಿರಾಜ್ ಕವತ್ತಾರು ಅವರು ಸಹ ಈ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ಸಂತೋಷದ ಸಂಗತಿ. ನೆಲಮೂಲದ ನಮ್ಮ ಸಂಸ್ಕೃತಿಯನ್ನು ನಾವು ಕಡೆಗಣಿಸಬಾರದು. ಇತಿಹಾಸವೆಂದರೆ ಹಳೆಯದು ಮಾತ್ರವಲ್ಲ. ವರ್ತಮಾನದ ವಿದ್ಯಮಾನಗಳು ಸಹ ದಾಖಲಾಗುತ್ತಾ ಹೋಗಬೇಕು” ಎಂಬುದಾಗಿ ತಮ್ಮ ಅಭಿಪ್ರಾಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಿದರು.
    ಡಾ. ಮುಕೇಶ್ ಕುಮಾರ್, ಡಾ ಪೃಥ್ವಿರಾಜ್ ಕವತ್ತಾರು ಅವರನ್ನು ಇದೇ ಸಂದರ್ಭದಲ್ಲಿ ಮುಂಬೈ ವಿಶ್ವವಿದ್ಯಾಲಯದ ಪರವಾಗಿ ಶಾಲು ಹೊಂದಿಸಿ ಗ್ರಂಥ ಗೌರವ ನೀಡಿ ಸನ್ಮಾನಿಸಲಾಯಿತು. ಈ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಖ್ಯಾತ ಭಾಗವತರಾದ ವಾಸುದೇವ ಎರ್ಮಾಳ್ ಹಾಗೂ ದೇಲಂತಮಜಲು ಸುಬ್ರಮಣ್ಯ ಭಟ್ ಅವರನ್ನು ವಿಭಾಗದ ಪರವಾಗಿ ಗೌರವಿಸಲಾಯಿತು. ಪಿ. ಎಚ್. ಡಿ. ಅಧ್ಯಯನಕ್ಕೆ ಹೊಸದಾಗಿ ಸೇರ್ಪಡೆಯಾದ ಸವಿತಾ ಅರುಣ್ ಶೆಟ್ಟಿ ಅವರನ್ನು ಇದೇ ಸಂದರ್ಭದಲ್ಲಿ ಕೃತಿ ಪುಷ್ಪ ಗೌರವ ನೀಡುವ ಮೂಲಕ ಸ್ವಾಗತಿಸಲಾಯಿತು. ಸುರೇಖಾ ದೇವಾಡಿಗ, ಕರುಣಾಕರ ಕಾಪು, ಆಶಾ ಸುವರ್ಣ, ದಯಾಶಶಿ, ಉಷಾ ಶೆಟ್ಟಿ ಮೊದಲಾದವರು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಾರ್ಯಕ್ರಮವನ್ನು ಸಂಶೋಧನ ವಿದ್ಯಾರ್ಥಿಯಾದ ಪ್ರತಿಭಾ ರಾವ್ ನಿರೂಪಿಸಿ, ಅನಿತಾ ಪೂಜಾರಿ ವಂದಿಸಿದರು.

    baikady kannada Literature roovari
    Share. Facebook Twitter Pinterest LinkedIn Tumblr WhatsApp Email
    Previous Articleತಿಂಗಳ ನಾಟಕ ಸಂಭ್ರಮದಲ್ಲಿ ‘ಸ್ವಾತಂತ್ರ್ಯದ ಓಟ’ ನಾಟಕ ಪ್ರದರ್ಶನ | ಜುಲೈ 19
    Next Article ಬೆಂಗಳೂರಿನ ಶ್ರೀ ವೇಣುಗೋಪಾಲಕೃಷ್ಣ ಸಮುದಾಯ ಭವನದಲ್ಲಿ ‘ಸುವರ್ಣ ಪರ್ವ -12’ | ಜುಲೈ 19
    roovari

    Add Comment Cancel Reply


    Related Posts

    ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪಣಂಬೂರು ವೆಂಕಟರಾಯ ಐತಾಳ ಪ್ರತಿಷ್ಠಾನದ ಪ್ರಶಸ್ತಿ ಪ್ರದಾನ

    July 17, 2025

    ಮೂಡಬಿದರೆಯಲ್ಲಿ ಕೊಂಕಣಿ ಸಾಹಿತ್ಯ ಕಾರ್ಯಾಗಾರ | ಜುಲೈ 20

    July 17, 2025

    ಕೋಲಾರ ಪತ್ರಕರ್ತರ ಭವನದಲ್ಲಿ ‘ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನ-2025’ | ಜುಲೈ 19

    July 17, 2025

    `ಗುರುವಿಟ್ಠಲ ಕೃಪಾ’ ಭವನದಲ್ಲಿ ಶ್ರೀ ವ್ಯಾಸರಾಯರ ಸ್ಮರಣೆ ಹಾಗೂ ಗಮಕ ಕಾರ್ಯಕ್ರಮ

    July 17, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.