ಬೆಂಗಳೂರು : ಭಾರತ ಯಾತ್ರ ಕೇಂದ್ರ ಬೆಂಗಳೂರು ಇದರ ವತಿಯಿಂದ ಭಾರತದ ಮಾಜಿ ಪ್ರಧಾನಿ ಚಂದ್ರಶೇಖರ್ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಇವರ ಜನ್ಮ ಶತಮಾನೋತ್ಸವ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮವನ್ನು ದಿನಾಂಕ 19 ಆಗಸ್ಟ್ 2026ರಂದು ಸಂಜೆ 6-00 ಗಂಟೆಗೆ ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ಮಾಜಿ ವಿಧಾನ ಸಭಾ ಸದಸ್ಯ ಹಾಗೂ ನಟ ಡಾ. ಮುಖ್ಯಮಂತ್ರಿ ಚಂದ್ರು ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ ಇವರು ಉದ್ಘಾಟನೆ ಮಾಡಲಿದ್ದಾರೆ. ಸಂಜೆ 5-30 ಗಂಟೆಗೆ ಶ್ರೀಮತಿ ಲತಾ ಲಕ್ಷ್ಮೀಶ್ ಇವರ ನಿರ್ದೇಶನದಲ್ಲಿ ‘ನೃತ್ಯ ರೂಪಕ’ ಮತ್ತು 6-30 ಗಂಟೆಗೆ ಡಾ. ಬಿ.ವಿ. ರಾಜಾರಾಮ್ ಇವರ ನಿರ್ದೇಶನದಲ್ಲಿ ಬೆಂಗಳೂರಿನ ಕಲಾ ಗಂಗೋತ್ರಿ ಪ್ರಸ್ತುತ ಪಡಿಸುವ ‘ಮೈಸೂರು ಮಲ್ಲಿಗೆ’ ನಾಟಕ ಪ್ರದರ್ಶನ ನಡೆಯಲಿದೆ.

