Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಫ.ಗು. ಹಳಕಟ್ಟಿಯವರ 144ನೆಯ ಜನ್ಮದಿನೋತ್ಸವ
    Literature

    ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಫ.ಗು. ಹಳಕಟ್ಟಿಯವರ 144ನೆಯ ಜನ್ಮದಿನೋತ್ಸವ

    July 5, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ವಚನ ಪಿತಾಮಹ ಫ.ಗು. ಹಳಕಟ್ಟಿಯವರ 144ನೆಯ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದಿನಾಂಕ 02-07-2024ರಂದು ಆಚರಿಸಲಾಯಿತು.

    ಕಾರ್ಯಕ್ರಮದಲ್ಲಿ ಫ.ಗು. ಹಳಕಟ್ಟಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ “ವಚನ ಸಾಹಿತ್ಯದ ವಿರಾಟ್ ಸ್ವರೂಪವನ್ನು ತೋರಿಸಿ ಕೊಟ್ಟ ಫ.ಗು. ಹಳಕಟ್ಟಿಯವರು ಸಹಜವಾಗಿಯೇ ವಚನ ಪಿತಾಮಹ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹಳಕಟ್ಟಿಯವರು ತಾಳೆಯೋಲೆಗಳನ್ನು ಸಂಗ್ರಹಿಸುವುದಕ್ಕೂ ಮೊದಲು, ಕವಿ ಹಾಗೂ ಚರಿತೆಕಾರರು ಗುರುತಿಸಿದ್ದು ಕೇವಲ 50 ವಚನಕಾರರನ್ನು ಮಾತ್ರ. ಫ.ಗು. ಹಳಕಟ್ಟಿಯವರು ತಮ್ಮ ಸಂಶೋಧನೆಯ ಮೂಲಕ 250ಕ್ಕೂ ಹೆಚ್ಚು ವಚನಕಾರರನ್ನು ಬೆಳಕಿಗೆ ತಂದರು. ಜೊತೆಗೆ ಹರಿಹರನ 42 ರಗಳೆಗಳನ್ನು ಸಂಶೋಧಿಸಿ ಪ್ರಕಟಿಸಿದ ಸಾಧನೆ ಹಳಕಟ್ಟಿಯವರಿಗೆ ಸಲ್ಲುತ್ತದೆ. ಹಳಕಟ್ಟಿಯವರು ಬಸವಣ್ಣನವರ ವಚನಗಳನ್ನು ಇಂಗ್ಲೀಷಿಗೆ ಅನುವಾದಿಸಿ ‘ಇಂಡಿಯನ್ ಆಂಟಿಕ್ವರಿ’ಯಲ್ಲಿ ಪ್ರಕಟಗೊಳಿಸಿದರು. ಅಷ್ಟೇ ಅಲ್ಲ ವಚನಗಳ ಗಾಯನಕ್ಕೂ ವ್ಯವಸ್ಥೆ ಮಾಡಿಸಿದರಲ್ಲದೆ ಶ್ರೇಷ್ಠ ಸಂಗೀತಕಾರರನ್ನು ವಚನ ಗಾಯನ ರೆಕಾರ್ಡಿಂಗಿಗಾಗಿ ಮುಂಬಯಿಯವರೆಗೆ ಕಳುಹಿಸಿದರು. ಹೀಗೆ ವಚನ ಸಾಹಿತ್ಯದ ಪ್ರಸಾರ ಕಾರ್ಯವನ್ನು ಅವರು ಬಹುಮುಖಿಯಾಗಿ ಕೈಗೊಂಡರು. ಮುಂಬಯಿಯಲ್ಲಿ ವಿದ್ಯಾರ್ಥಿಗಳು ಮತ್ತು ಅಲ್ಲಿನ ಜನರಲ್ಲಿದ್ದ ಗುಜರಾತಿ ಮತ್ತು ಮರಾಠಿ ಭಾಷಾಭಿಮಾನ ಹಾಗೂ ಕನ್ನಡದವರಲ್ಲಿ ತಮ್ಮ ಭಾಷೆಯ ಬಗ್ಗೆ ಇದ್ದ ನಿರಭಿಮಾನ ಇವರ ಮನಸ್ಸಿನ ಮೇಲೆ ತುಂಬಾ ಪರಿಣಾಮ ಬೀರಿತು. ಕನ್ನಡ ನಾಡು, ನುಡಿ, ನೆಲ, ಜಲ, ಸಾಹಿತ್ಯ, ಸಂಸ್ಕೃತಿಗಾಗಿ ದುಡಿಯಲು ವಿದ್ಯಾರ್ಥಿ ದಿಸೆಯಲ್ಲೇ ದೃಢಸಂಕಲ್ಪ ಮಾಡಿದರು. ಕರ್ನಾಟಕ ಏಕೀಕರಣಕ್ಕಾಗಿ ಆಗಲೇ ಹೋರಾಟದಲ್ಲಿ ನಿರತರಾಗಿದ್ದ ಆಲೂರು ಇವರಿಗಾಗ ಸ್ಫೂರ್ತಿಯಾಗಿದ್ದರು. ದೂರದೃಷ್ಟಿಯ ಹಳಕಟ್ಟಿಯವರು ಸಾಹಿತ್ಯ ಮತ್ತು ಪತ್ರಿಕೋದ್ಯಮದ ಜೊತೆ ಜೊತೆಗೆ ಸಂಘಟನೆ, ಬ್ಯಾಂಕಿಂಗ್, ಕೃಷಿ, ನೇಕಾರಿಕೆ, ಸಹಕಾರಿ ಹೀಗೆ ಎಲ್ಲದರಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದರು. ಮುಂಬಯಿಯ ವಿಧಾನ ಪರಿಷತ್ತಿನ ಸದಸ್ಯತ್ವ, ಬಳ್ಳಾರಿಯಲ್ಲಿ ನಡೆದ 12ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, 3ನೇ ಕರ್ನಾಟಕ ಏಕೀಕರಣ ಪರಿಷತ್ತಿನ ಅಧ್ಯಕ್ಷತೆ ಹೀಗೆ ಹಲವು ಗೌರವಗಳು ದಕ್ಕಿರುವುದು ಇವರ ಸಾಧನೆಗೆ ಸಾಕ್ಷಿ.” ಎಂದು ಹೇಳಿದರು.

    ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣಾ ವಿಭಾಗದ ಸಂಚಾಲಕರಾದ ಪ್ರೊ. ಎನ್. ಎಸ್. ಶ್ರೀಧರ ಮೂರ್ತಿ ಮಾತನಾಡಿ “ಹಳಕಟ್ಟಿಯವರು ಸಂಪಾದಿಸಿ ಪ್ರಕಟಿಸಿದ “ವಚನ ಸಾಹಿತ್ಯ ಸಾರ”ವಂತೂ ಒಂದು ಅದ್ಭುತ ಕೃತಿ. ಈ ಬೃಹತ್ ಗ್ರಂಥ ಹಲವು ಸಂಪುಟಗಳಲ್ಲಿ 1923ರಿಂದ 1939ರ ಅವಧಿಯಲ್ಲಿ ಪ್ರಕಟಗೊಂಡು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದೆ. ಇವರ ಸ್ವತಂತ್ರ ಕೃತಿಗಳು ಸೇರಿದಂತೆ ಸಂಪಾದಿಸಿದ ವಚನ ಸಾಹಿತ್ಯ ಕೃತಿಗಳು 175ಕ್ಕೂಹೆಚ್ಚು. ಪತ್ರಿಕೋದ್ಯಮದಲ್ಲೂ ಬಹಳ ಆಸಕ್ತಿ ಹೊಂದಿದ್ದ ಹಳಕಟ್ಟಿಯವರು 1926ರಲ್ಲಿ ಸಂಶೋಧನೆಗಾಗಿ ಮೀಸಲಾದ ‘ಶಿವಾನುಭವ’ ಪತ್ರಿಕೆ ಪ್ರಾರಂಭಿಸಿದರು, ಹಾಗೆಯೇ 1927ರಲ್ಲಿ ‘ನವ ಕರ್ನಾಟಕ’ ಎಂಬ ವಾರಪತ್ರಿಕೆಯನ್ನೂ ಆರಂಭಿಸಿದ್ದರು.” ಎಂದು ವಿವರವಾಗಿ ಪ್ರಸ್ತುತಪಡಿಸಿದರು.

    ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾದ ಡಾ. ಪದ್ಮಿನಿ ನಾಗರಾಜು ಮಾತನಾಡಿ “ತಮ್ಮ ಸ್ವಂತ ಮನೆಯನ್ನೇ ಮಾರಿ ಮುದ್ರಣಾಲಯವನ್ನು ಸ್ಥಾಪಿಸಿದ್ದ ಹಳಕಟ್ಟಿಯವರ ಆರೋಗ್ಯ ಸತತ ಪರಿಶ್ರಮದಿಂದ ಹದಗೆಟ್ಟರೂ ಅವರು ತಮ್ಮ ಶೋಧನೆಯನ್ನು ಬಿಡಲಿಲ್ಲ. ಇವರು ಸಂಸ್ಥಾಪಿಸಿದ ಬಿ.ಎಲ್.ಡಿ.ಇ. ಸಂಸ್ಥೆ ಹಲವು ವರ್ಷಗಳ ಹಿಂದೆ ಮೂವತ್ತು ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಹಳಕಟ್ಟಿಯವರ ಸಮಗ್ರ ಸಾಹಿತ್ಯವನ್ನು ಹದಿನೈದು ಸಂಪುಟಗಳಲ್ಲಿ ಪ್ರಕಟಿಸಿದ್ದಾರೆ ಎಂದರೆ ಯಾರಿಗಾದರೂ ಅರ್ಥವಾಗುತ್ತದೆ, ಹಳಕಟ್ಟಿಯವರು ಸಂಸ್ಥಾಪಿಸಿದ್ದ ಸಂಸ್ಥೆಯೊಂದರ ಬೆಳವಣಿಗೆಯ ಪರಿ ಎಂತಹದು.” ಎಂದರು.

    ಕನ್ನಡ ಸಾಹಿತ್ಯ ಪರಿಷತ್ತಿನ ಇನ್ನೊಬ್ಬ ಕಾರ್ಯದರ್ಶಿ ನೇ. ಭ. ರಾಮಲಿಂಗಶೆಟ್ಟರು ಹಳಕಟ್ಟಿಯವರ ಸರಳತೆಯನ್ನು ಪ್ರಶಂಸಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷ ಬಿ.ಎಂ. ಪಟೇಲ್ ಪಾಂಡು ಸೇರಿದಂತೆ ಪರಿಷತ್ತಿನ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಮೈಸೂರಿನ ‘ನಟನ ರಂಗಶಾಲೆ’ಯಲ್ಲಿ ‘ಸುಬ್ಬಣ್ಣ ಸ್ಮರಣೆ 2024’ | ಜುಲೈ 6ರಿಂದ
    Next Article ಕಲಾಭಿ ಮಕ್ಕಳ ರಂಗಭೂಮಿ ಪ್ರಸ್ತುತ ಪಡಿಸುವ ‘ಮೊಗ್ಲಿ’ | ಜುಲೈ 6
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    ಆಳ್ವಾಸ್‌ನ ಶಿವರಾಮ ಕಾರಂತ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

    May 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.