ತುಮಕೂರು : ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಇವರ ‘ಇರವಿನ ಅರಿವು’ ವಿಮರ್ಶಾ ಕೃತಿಗೆ ಸಾಹಿತ್ಯ ಅಕಾಡೆಮಿ ಪುಸ್ತಕ ಪ್ರಶಸ್ತಿ 2023 ದೊರಕಿದ್ದು, ದಿನಾಂಕ 05 ಡಿಸೆಂಬರ್ 2025ರಂದು ತುಮಕೂರಿನ ಗುಬ್ಬಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕನ್ನಡದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರರು ಪ್ರಶಸ್ತಿ ನೀಡಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ. ಗಾಯತ್ರಿ, ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ, ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್.ಎನ್. ಮುಕುಂದರಾಜ್ ಮತ್ತಿತರರು ಉಪಸ್ಥಿತರಿದ್ದರು.
