ಬೆಂಗಳೂರು : ಅನ್ನಪೂರ್ಣ ಪಬ್ಲಿಷಿಂಗ್ ಹೌಸ್ ಬೆಂಗಳೂರು ಮತ್ತು ಪ್ರೊ. ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಕಲಬುರಗಿ ಇದರ ಸಹಯೋಗದೊಂದಿಗೆ ಮಕ್ಕಳ ಕೃತಿಗಳ ಲೋಕಾರ್ಪಣೆ ಮತ್ತು ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ದಿನಾಂಕ 05 ಜೂನ್ 2025ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಮಖಂಡಿ ಶಾಸಕರಾದ ನಾಡೋಜ ಜಗದೀಶ ಶಿವಯ್ಯ ಗುಡಗುಂಟಿ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕರ್ಣಾಟಕ ಗಾಂಧಿ ಸ್ಮಾರಕ ನಿಧಿ ಇವರ ಅಧ್ಯಕ್ಷರಾದ ನಾಡೋಜ ಡಾ. ವೂಡೇ ಪಿ. ಕೃಷ್ಣ ಇವರು ದೇವುಡು ಹೇಳಿದ ಮಕ್ಕಳ ಕಥೆಗಳು ಎಂಬ ಐದು ಕೃತಿಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಮದರಾಸ್ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಡಾ. ತಮಿಳ್ ಸೆಲ್ವಿ ಇವರಿಗೆ ನಾಡೋಜ ಕುಂ. ವೀರಭದ್ರಪ್ಪ ಇವರು ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಮಾಡಲಿರುವರು.