Subscribe to Updates

    Get the latest creative news from FooBar about art, design and business.

    What's Hot

    ಕದ್ರಿ ಯಕ್ಷ ಮಂಜುಳಾ ಮಹಿಳಾ ಬಳಗದವರಿಂದ ‘ಯಕ್ಷಗಾನ ತಾಳಮದ್ದಳೆ’ | ಫೆಬ್ರವರಿ 24

    February 21, 2026

    ಕೋಟ ‘ಅಹರ್ನಿಶ’ದಲ್ಲಿ ‘ಯಕ್ಷ ಗಾನ ವೈಭವ’

    February 21, 2026

    ‘ಮಲಬಾರ್ ವಿಶ್ವರಂಗ ಪುರಸ್ಕಾರ-2026’ಕ್ಕೆ ಐವರು ಹಿರಿಯ ರಂಗಕರ್ಮಿಗಳು

    February 21, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನರೇಂದ್ರ ಎಸ್. ಗಂಗೊಳ್ಳಿಯವರ ‘ಅವಳ ನಿಟ್ಟುಸಿರು’ ಕೃತಿ ಲೋಕಾರ್ಪಣೆ
    Book Release

    ನರೇಂದ್ರ ಎಸ್. ಗಂಗೊಳ್ಳಿಯವರ ‘ಅವಳ ನಿಟ್ಟುಸಿರು’ ಕೃತಿ ಲೋಕಾರ್ಪಣೆ

    January 31, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಗಂಗೊಳ್ಳಿ : ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರೋಟರಿ ಸಭಾಂಗಣದಲ್ಲಿ ಎಸ್‌. ವಿ ಕಾಮರ್ಸ್ ಕ್ಲಬ್ ಮತ್ತು ಗಂಗೊಳ್ಳಿಯ ಸಂಜೀವ ಪಾರ್ವತಿ ಪ್ರಕಾಶನದ ಜಂಟಿ ಆಶ್ರಯದಲ್ಲಿ ದಿನಾಂಕ 30 ಜನವರಿ 2026ರಂದು ಬೆಂಗಳೂರಿನ ಜಯರಾಮ ಪಬ್ಲಿಕೇಶನ್ ಪ್ರಕಟಿಸಿರುವ ಲೇಖಕ ನರೇಂದ್ರ ಎಸ್. ಗಂಗೊಳ್ಳಿ ಇವರ ಆರನೇ ಕೃತಿ ‘ಅವಳ ನಿಟ್ಟುಸಿರು’ ಅಂಕಣ ಬರಹಗಳ ಸಂಕಲನದ ಬಿಡುಗಡೆ ಸಮಾರಂಭ ನಡೆಯಿತು.

    ಈ ಸಮಾರಂಭದಲ್ಲಿ ಕೃತಿಯನ್ನು ಅನಾವರಣಗೊಳಿಸಿ ಮಾತನಾಡಿದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕರಾದ ನಾರಾಯಣ ಈ ನಾಯ್ಕ್ “ಓದು ವ್ಯಸನವಾಗಬೇಕು ಪಠ್ಯೇತರ ಪುಸ್ತಕಗಳ ಓದು ನಮ್ಮ ಜ್ಞಾನದ ಪರಿಧಿಯನ್ನು ಹೆಚ್ಚಿಸುವುದರ ಜೊತೆಗೆ ಆತ್ಮವಿಶ್ವಾಸವನ್ನು ಕೂಡ ನೀಡುತ್ತದೆ” ಎಂದು ಅಭಿಪ್ರಾಯಪಟ್ಟರು.

    ಸಮಾರಂಭದಲ್ಲಿ ಉಪಸ್ಥಿತರಿದ್ದ ಪ್ರಯೋಗಾಲಯ ಸಹಾಯಕರಾದ ವಿಜಯಕುಮಾರ್ ಎನ್. ಮಾತನಾಡಿ “ಸೃಜನಶೀಲ ಸಾಹಿತ್ಯ ಇಂದಿನ ಅಗತ್ಯ. ಉತ್ತಮ ವಿಚಾರಗಳ ಓದು ನಮ್ಮ ವ್ಯಕ್ತಿತ್ವವನ್ನು ಮೇಲ್ಮಟ್ಟಕ್ಕೆ ಕೊಂಡೊಯ್ಯುತ್ತದೆ. ಅವಳ ನಿಟ್ಟುಸಿರು ಕೃತಿ ಈ ನಿಟ್ಟಿನಲ್ಲಿ ಉತ್ತಮ ಕೊಡುಗೆ” ಎಂದು ಹೇಳಿದರು.

    ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಪ್ರತಿನಿಧಿ ಆದಿತ್ಯ ಎಸ್. ಪೂಜಾರಿ ಸ್ವಾಗತಿಸಿದರು. ಲೇಖಕ ನರೇಂದ್ರ ಎಸ್. ಗಂಗೊಳ್ಳಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಭಿಜ್ಞಾ ಖಾರ್ವಿ ನಿರೂಪಿಸಿ, ಆಯಿಷಾ ನಿಫಾ ವಂದಿಸಿದರು.

    ‘ಹೇಳದೆ ಹೋದ ಮಗಳಿಗೆ’, ‘ನಾಯಿ ನಾನು’, ‘ನಿಭ್ರತೆ’ ಮೊದಲಾದ ಕೃತಿಗಳ ಮೂಲಕ ಸಾಹಿತ್ಯ ವಲಯದಲ್ಲಿ ಹೆಸರು ಗಳಿಸಿರುವ ನರೇಂದ್ರ ಎಸ್. ಗಂಗೊಳ್ಳಿ ಇವರ 50 ವೈವಿಧ್ಯಮಯ ಬರಹಗಳ ಸಂಕಲನವು ‘ಅವಳ ನಿಟ್ಟುಸಿರು’ ಹೆಸರಿನಲ್ಲಿ ಪ್ರಕಟವಾಗುತ್ತಿದೆ. ಕೃತಿ ಬೇಕಾದಲ್ಲಿ ನರೇಂದ್ರ ಎಸ್. ಗಂಗೊಳ್ಳಿ ಇವರ ಮೊಬೈಲ್ ನಂಬ್ರ 9242127307 ಸಂಪರ್ಕಿಸಿರಿ.

    baikady Book release Literature roovari
    Share. Facebook Twitter Pinterest LinkedIn Tumblr WhatsApp Email
    Previous Article‘ವೀರರಾಣಿ ಅಬ್ಬಕ್ಕ ಪ್ರಶಸ್ತಿ’ಗೆ ಡಾ. ಸಾಯಿಗೀತಾ ಮತ್ತು ವಿದುಷಿ ರಾಜಶ್ರೀ ಉಳ್ಳಾಲ್‌ ಆಯ್ಕೆ
    Next Article ಮಂಗಳೂರಿನ ಇಂದಿರಾ ಪ್ರಿಯದರ್ಶಿನಿ ಉದ್ಯಾನವನದಲ್ಲಿ ‘ಕನ್ನಡದ ಕಂಪು ಸರಣಿ -7’ | ಫೆಬ್ರುವರಿ 08 
    roovari

    Add Comment Cancel Reply


    Related Posts

    ಕದ್ರಿ ಯಕ್ಷ ಮಂಜುಳಾ ಮಹಿಳಾ ಬಳಗದವರಿಂದ ‘ಯಕ್ಷಗಾನ ತಾಳಮದ್ದಳೆ’ | ಫೆಬ್ರವರಿ 24

    February 21, 2026

    ಕೋಟ ‘ಅಹರ್ನಿಶ’ದಲ್ಲಿ ‘ಯಕ್ಷ ಗಾನ ವೈಭವ’

    February 21, 2026

    ‘ಮಲಬಾರ್ ವಿಶ್ವರಂಗ ಪುರಸ್ಕಾರ-2026’ಕ್ಕೆ ಐವರು ಹಿರಿಯ ರಂಗಕರ್ಮಿಗಳು

    February 21, 2026

    ವಿವೇಕಾನಂದ ಕಾಲೇಜಿನಲ್ಲಿ ಶಿವಾಜಿ ಜೀವನ ಚರಿತ್ರೆ ವಿಚಾರ ಸಂಕಿರಣ

    February 21, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.