Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಎಂ.ವಿ. ಸೂರಪ್ಪ ಸ್ಮರಣಾರ್ಥ ದತ್ತಿ ಉಪನ್ಯಾಸ | ಮೇ 16

    May 13, 2026

    ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಬಸವ ಜಯಂತಿ ಹಾಗೂ ಕಾರ್ಮಿಕ ದಿನಾಚರಣೆ

    May 13, 2026

    ನೃತ್ಯ ವಿಮರ್ಶೆ | ದೈವೀಕ ಸಾಕ್ಷಾತ್ಕಾರದ ಗೌರಿ ಕೃಷ್ಣಳ ಸಾತ್ವಿಕಾಭಿನಯ

    May 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಅಲಂಕಾರಿನ ಕಾಲೇಜಿನಲ್ಲಿ ಪಂಚ ಕೃತಿಗಳ ಲೋಕಾರ್ಪಣಾ ಸಮಾರಂಭ | ಏಪ್ರಿಲ್ 04
    Book Release

    ಅಲಂಕಾರಿನ ಕಾಲೇಜಿನಲ್ಲಿ ಪಂಚ ಕೃತಿಗಳ ಲೋಕಾರ್ಪಣಾ ಸಮಾರಂಭ | ಏಪ್ರಿಲ್ 04

    April 1, 2026No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಅಲಂಕಾರು : ಕಡಬ ತಾಲೂಕಿನ ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜು ಹಾಗೂ ಭಾವಾಂಕುರ ಕನ್ನಡ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸಾಹಿತ್ಯ ಪ್ರಪಂಚದ ಅಪೂರ್ವ ಹಾಗೂ ವಿಶಿಷ್ಟ ಕಾರ್ಯಕ್ರಮವಾದ ‘ಪಂಚ ಕೃತಿಗಳ ಲೋಕಾರ್ಪಣಾ ಸಮಾರಂಭ’ವನ್ನು ದಿನಾಂಕ 04 ಏಪ್ರಿಲ್ 2026ರಂದು ಅಲಂಕಾರಿನ ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

    ಈ ಕಾರ್ಯಕ್ರಮವು ಸಾಮಾನ್ಯ ಸಾಹಿತ್ಯ ಕಾರ್ಯಕ್ರಮವಲ್ಲ; ಒಂದು ಶಿಕ್ಷಣ ಸಂಸ್ಥೆಯಲ್ಲಿಯೇ ಏಕಕಾಲದಲ್ಲಿ 9 ಹಾಗೂ 10ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ಐದು ವಿದ್ಯಾರ್ಥಿಗಳು ತಮ್ಮದೇ ಸ್ವಂತ ಕವನ ಸಂಕಲನಗಳನ್ನು ರಚಿಸಿ ಪ್ರಕಟಣೆಗೆ ತರುತ್ತಿರುವುದು ಜಿಲ್ಲಾ ಮಟ್ಟದಲ್ಲಿ ಬಹುಶಃ ಪ್ರಪ್ರಥಮ ಎನ್ನಬಹುದು. ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ ಬೆಳೆಸಿ, ಅವರ ಸೃಜನಶೀಲತೆಯನ್ನು ಉತ್ತೇಜಿಸಿ, ಕನ್ನಡ ಸಾಹಿತ್ಯ ಲೋಕಕ್ಕೆ ಹೊಸ ಪ್ರತಿಭೆಗಳನ್ನು ಪರಿಚಯಿಸುವ ಮಹತ್ತರ ಉದ್ದೇಶವನ್ನು ಈ ಕಾರ್ಯಕ್ರಮ ಹೊಂದಿದೆ. ಈ ದೃಷ್ಟಿಯಿಂದ ಇದು ನಿಜಕ್ಕೂ ಮಾದರಿಯಾದ ಸಾಹಿತ್ಯ ಚಳುವಳಿಯಂತೆ ಗಮನ ಸೆಳೆಯುವ ಕಾರ್ಯಕ್ರಮವಾಗಲಿದೆ.

    ಈ ಕಾರ್ಯಕ್ರಮವು ಪೂರ್ವಾಹ್ನ 10-00 ಗಂಟೆಗೆ ಪ್ರಾರಂಭವಾಗಲಿದ್ದು, ಹಿರಿಯ ಸಾಹಿತಿಗಳು ಹಾಗೂ ನಿವೃತ್ತ ಉಪನ್ಯಾಸಕರಾದ ಪ್ರೊ. ವಿ.ಬಿ. ಅರ್ತಿಕಜೆ ಇವರು ಉದ್ಘಾಟಿಸಿ, ಕೃತಿ ವಿಮರ್ಶೆ ಮಾಡಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ದಯಾನಂದ ರೈ ಮನವಳಿಕೆ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಾದ ಕುಮಾರಿ ಲಕ್ಷ್ಮಿ ಲೇಖನ ಇವರ ‘ಶ್ರೀಲೇಖ’, ಕುಮಾರಿ ಪಲ್ಲವಿ ಕೆ. ಇವರ ‘ತಿರುವು’, ಕುಮಾರಿ ಲಿಖಿತಾ ಇವರ ‘ಕನಸುಗಳ ಹಾರಾಟ’, ಕುಮಾರಿ ದೀಪಿಕಾ ಇವರ ‘ಮನದಾಳದ ರಸಮಂಜರಿ’, ಕುಮಾರಿ ಇಂಚರ ಇವರ ‘ಹನಿ ಹೆಜ್ಜೆ’ ಪಂಚ ಕೃತಿಗಳ ಲೋಕಾರ್ಪಣೆ ನಡೆಯಲಿದೆ.

    ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಕಡಬ ತಾಲೂಕು ಅಧ್ಯಕ್ಷರಾದ ಶ್ರೀ ಸೇಸಪ್ಪ ರೈ, 2026ರ ‘ಸುವರ್ಣ ಕನ್ನಡಿಗ ಪ್ರಶಸ್ತಿ’ ಪುರಸ್ಕೃತ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶ್ರೀ ಪುತ್ತೂರು ಉಮೇಶ್ ನಾಯಕ್, ಗ್ರಾಮ ಸಾಹಿತ್ಯ ಸಂಭ್ರಮದ ಸಂಚಾಲಕರಾದ ಶ್ರೀ ನಾರಾಯಣ ಕುಂಬ್ರ ಹಾಗೂ ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಹಾಗೂ ಸಾಹಿತಿಯಾದ ಶ್ರೀಮತಿ ಜ್ಯೋತಿ ಶೈಲೇಶ್ ಭಾಗವಹಿಸಿ ಕೃತಿಗಳ ಕುರಿತು ಮಾತನಾಡಲಿದ್ದಾರೆ.

    ಕನ್ನಡ ನಾಡು, ನುಡಿ ಮತ್ತು ಸಾಹಿತ್ಯದ ಅಭ್ಯುದಯಕ್ಕಾಗಿ ರೂಪುಗೊಂಡಿರುವ ಈ ವಿಶಿಷ್ಟ ಕಾರ್ಯಕ್ರಮವು ರಾಜ್ಯ ಮಟ್ಟದಲ್ಲಿಯೂ ಗಮನ ಸೆಳೆಯುವ ಸಾಧ್ಯತೆಯಿದ್ದು, ಸಾಹಿತ್ಯಾಸಕ್ತರು, ಹಿರಿಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವಂತೆ ಕಾಲೇಜಿನ ಪ್ರಾಂಶುಪಾಲರು, ಪ್ರೌಢಶಾಲೆಯ ಮುಖ್ಯಗುರುಗಳು, ಆಡಳಿತಾಧಿಕಾರಿಗಳು ಹಾಗೂ ಭಾವಾಂಕುರ ಕನ್ನಡ ಸಂಘದ ಪದಾಧಿಕಾರಿಗಳು ವಿನಂತಿಸಿದ್ದಾರೆ.

    baikady Book release Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಪರಿವರ್ತನ ತಂಡದಿಂದ ಪ್ರದರ್ಶಿಸಲಾದ ‘ಸೂರ್ಯನ ಕುದುರೆ’ ನಾಟಕದ ಬಗ್ಗೆ ಟಿಪ್ಪಣಿ
    Next Article ವ್ಯಕ್ತಿತ್ವ ವಿಕಸನಕ್ಕೆ ರಂಗಭೂಮಿ ಪೂರಕ – ಡಾ. ಅನಂತ ಪ್ರಭು ಕೆ.
    roovari

    Add Comment Cancel Reply


    Related Posts

    ಬೆಂಗಳೂರಿನಲ್ಲಿ ಎಂ.ವಿ. ಸೂರಪ್ಪ ಸ್ಮರಣಾರ್ಥ ದತ್ತಿ ಉಪನ್ಯಾಸ | ಮೇ 16

    May 13, 2026

    ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಬಸವ ಜಯಂತಿ ಹಾಗೂ ಕಾರ್ಮಿಕ ದಿನಾಚರಣೆ

    May 13, 2026

    ನೃತ್ಯ ವಿಮರ್ಶೆ | ದೈವೀಕ ಸಾಕ್ಷಾತ್ಕಾರದ ಗೌರಿ ಕೃಷ್ಣಳ ಸಾತ್ವಿಕಾಭಿನಯ

    May 13, 2026

    ಬಾಲ್ಯದಿಂದಲೇ ಅಭಿರುಚಿ ಬೆಳೆಸಿಕೊಳ್ಳಬೇಕು – ಡಾ. ಯಶವಂತ ಎನ್. ನಾಯಕ್

    May 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.