ಮಂಗಳೂರು : ಜೀರುಂಡೆ ಪುಸ್ತಕ ಇದರ ವತಿಯಿಂದ ಮಂಗಳೂರು ಸಂತ ಅಲೋಶಿಯಸ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಸಹಯೋಗದೊಂದಿಗೆ ಪ್ರಸಿದ್ಧ ತೆಲುಗು ಸಾಹಿತಿ ಎಂಡ್ಲೂರಿ ಸುಧಾಕರ್ ಇವರ ‘ನುಡಿ ಚಮ್ಮಾಳಿಗೆ’ ಪುಸ್ತಕ ಬಿಡುಗಡೆ ಸಮಾರಂಭವನ್ನು ದಿನಾಂಕ 28 ಜೂನ್ 2026ರಂದು ಮಧ್ಯಾಹ್ನ 3-30 ಗಂಟೆಗೆ ಮಂಗಳೂರು ಸಂತ ಅಲೋಶಿಯಸ್ ವಿಶ್ವವಿದ್ಯಾನಿಲಯದ ಸಹೋದಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಅನುವಾದಕರಾದ ವಿಕಾಸ್ ಆರ್. ಮೌರ್ಯ ಇವರ ಉಪಸ್ಥಿತಿಯಲ್ಲಿ ನಡೆಯುವ ಈ ಸಮಾರಂಭದಲ್ಲಿ ಮುಲ್ಕಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಡಾ. ವಾಸುದೇವ ಬೆಳ್ಳೆ ಪುಸ್ತಕ ಬಿಡುಗಡೆ ಮಾಡಲಿದ್ದು, ಸಾಹಿತಿ ಆತ್ರಾಡಿ ಅಮೃತಾ ಶೆಟ್ಟಿ ಇವರು ಪುಸ್ತಕ ಪರಿಚಯ ಮಾಡಲಿದ್ದಾರೆ.

