ಕುಂದಾಪುರ: ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರ ವತಿಯಿಂದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇವರ ಸಹಯೋಗದಲ್ಲಿ ಅರಿವಿನ ಬೆಳಕು ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣಾ ಕಾರ್ಯಕ್ರಮವು ದಿನಾಂಕ 29 ಮೇ 2025ರಂದು ಮಧ್ಯಾಹ್ನ 2.30ಕ್ಕೆ ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಾಲಿರುವ ಈ ಕಾರ್ಯಕ್ರಮವನ್ನು ಬೆಂಗಳೂರು ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಬಾಲಾಜಿ ಎಸ್ ಉದ್ಘಾಟಿಸಲಿದ್ದು, ಖ್ಯಾತ ಜಾನಪದ ವಿದ್ವಾಂಸ ಪ್ರೊ. ಕನರಾಡಿ ವಾದಿರಾಜ್ ಭಟ್ ಇವರು ‘ಜಲ ಜಾನಪದ’ ಪುಸ್ತಕ ಲೋಕಾರ್ಪಣೆ ಗೊಳಿಸಲಿದ್ದಾರೆ. ಡಾ. ಶಿವರಾಮ ಕಾರಂತ ಟ್ರಸ್ಟಿ ಇದರ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಭಾಗವಹಿಸಲಿದ್ದು, ಚಿಂತಕ ಮುಸ್ತಾಕ್ ಹೊನ್ನಾಬೈಲ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಡಾ. ಶಿವರಾಮ ಕಾರಂತರ ಬದುಕು, ಕೃತಿಗಳು ಮತ್ತು ಪರಿಸರ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.

