ಗೋಣಿಕೊಪ್ಪ: ಕಾವೇರಿ ಕಾಲೇಜಿನಲ್ಲಿ ಮೂರು ಪುಸ್ತಕಗಳ ಲೋಕಾರ್ಪಣೆ ಹಾಗೂ ದತ್ತಿನಿಧಿ ಕಾರ್ಯಕ್ರಮ | ಮೇ 31ಣಿಕೊಪ್ಪ: ನಾಡಿನ ಪ್ರತಿಷ್ಠಿತ ಸಾಹಿತ್ಯಿಕ ಸಂಸ್ಥೆಯಾದ ಕೊಡವ ತಕ್ಕ್ ಎಳ್ತ್‌ಕಾರಡ ಕೂಟ ಹಾಗೂ ಗೋಣಿಕೊಪ್ಪ ಕಾವೇರಿ ಕಾಲೇಜಿನ ಜಂಟಿ ಆಶ್ರಯದಲ್ಲಿ ‘ಕೊಡವ ತಕ್ಕ್ ಎಳ್ತ್‌ಕಾರಡ ಕೂಟ’ದ ‘ಜನಪ್ರಿಯ ಕೊಡವ ಸಾಹಿತ್ಯ ಮಾಲೆ ಯೋಜನೆ’ಯಲ್ಲಿ ಮೂರು ಪುಸ್ತಕಗಳ ಲೋಕಾರ್ಪಣಾ ಸಮಾರಂಭವು ಗೋಣಿಕೊಪ್ಪ ಕಾವೇರಿ ಕಾಲೇಜಿನ ಸೆಮಿನಾರ್ ಹಾಲ್’ನಲ್ಲಿ ನಡೆಯಲಿದೆ.
ದಿನಾಂಕ 31 ಮೇ 2025ರ ಶನಿವಾರ ಪೂರ್ವಾಹ್ನ ಘಂಟೆ 10. 00ಕ್ಕೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಲೇಖಕಿ ಉಳುವಂಗಡ ಕಾವೇರಿ ಉದಯ ಬರೆದ 190ನೇ ಹೆಜ್ಜೆಯ ಪುಸ್ತಕ, 17 ಲೇಖಕರು ಬರೆದ 191ನೆ ಹೆಜ್ಜೆಯ ಪುಸ್ತಕ ಹಾಗೂ ಲೇಖಕಿ ಕೊಟ್ಟಂಗಡ ಕವಿತ ವಾಸುದೇವ ಬರೆದ 192ನೇ ಹೆಜ್ಜೆಯ ನೂತನ ಮೂರು ಪುಸ್ತಕಗಳನ್ನು ಲೋಕಾರ್ಪಣೆಗೊಳ್ಳಲಿದೆ.
‘ಕೊಡವ ತಕ್ಕ್ ಎಳ್ತ್‌ಕಾರಡ ಕೂಟ’ದ ಅಧ್ಯಕ್ಷರಾದ ಚೆಟ್ಟಂಗಡ ರವಿ ಸುಬ್ಬಯ್ಯ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾವೇರಿ ಎಜುಕೇಷನ್ ಸೊಸೈಟಿ ಇದರ ಅಧ್ಯಕ್ಷರಾದ ಮಂಡೇಪಂಡ ಸುಗುಣ ಮುತ್ತಣ್ಣ, ಗೋಣಿಕೊಪ್ಪ ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಾಳೇಟಿರ ಕಾವೇರಪ್ಪ, ಪುಸ್ತಕ ಪ್ರಕಟಣೆಯ ಪ್ರಾಯೋಜಕರಾದ ಕೈಬಿಲೀರ ಪಾರ್ವತಿ ಬೋಪಯ್ಯ, ಮೇಚಮಡ ಮಲ್ಲಿಗೆ ಪೂವಮ್ಮ, ಮುದ್ದಿಯಡ ಪದ್ಮ ಕುಶಾಲಪ್ಪ, ಚಿಂಡಮಾಡ ಸರಿತ ಅಶೋಕ್, ಲೇಖಕಿಯರಾದ ಉಳುವಂಗಡ ಕಾವೇರಿ ಉದಯ ಹಾಗೂ ಕೊಟ್ಟಂಗಡ ಕವಿತ ಬೋಜಮ್ಮ ಉಪಸ್ಥಿತರಿರುವರು.
ಇದೇ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕೊಡವ ಭಾಷೆಯ ಹಾಡುಗಾರಿಕೆ, ಓದುವುದು ಮತ್ತು ಹಾಸ್ಯ ಸ್ಪರ್ಧೆ ಹಾಗೂ ಸಾಹಿತಿ ಮುದ್ದಿಯಡ ಕುಶ ಪೊನ್ನಪ್ಪ ದತ್ತಿನಿಧಿ ಕಥಾ ಸ್ಪರ್ಧೆಯ ಬಹುಮಾನ ವಿತರಣೆ ನಸದೆಯಲಿದೆ.
ಜಾತಿ ಧರ್ಮದ ನಿರ್ಬಂಧವಿಲ್ಲದೆ ಕೊಡವ ಭಾಷೆ, ಸಾಹಿತ್ಯದ ಅಭಿಮಾನಿಗಳೆಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ 9880584732 / 9448326014 ಸಂಖ್ಯೆಗಳನ್ನು ಸಂಪರ್ಕಿಸಬಹುದು.