Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    ಶ್ರವಣರಂಗ ಸವಣೂರು ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

    May 29, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೊಡಗಿನ ಚಿತ್ರಶಿಲ್ಪ ಕಲಾವಿದ ಶ್ರೀ ಬಿ.ಕೆ. ಗಣೇಶ್ ರೈಯವರ ‘ಕಡಲಾಚೆಯ ರಮ್ಯ ನೋಟ ದುಬಾಯಿ’ ಕೃತಿ ಲೋಕಾರ್ಪಣೆ
    Book Release

    ಕೊಡಗಿನ ಚಿತ್ರಶಿಲ್ಪ ಕಲಾವಿದ ಶ್ರೀ ಬಿ.ಕೆ. ಗಣೇಶ್ ರೈಯವರ ‘ಕಡಲಾಚೆಯ ರಮ್ಯ ನೋಟ ದುಬಾಯಿ’ ಕೃತಿ ಲೋಕಾರ್ಪಣೆ

    March 5, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಡಾ. ಮಾಲತಿ ಶೆಟ್ಟಿ ಮಾಣೂರ್ ಸಾರಥ್ಯದ ಸಾಹಿತ್ಯಪರ ಅಮೃತ ಪ್ರಕಾಶ ಪತ್ರಿಕೆ ವತಿಯಿಂದ ನಡೆಯುವ 42ನೆಯ ಸರಣಿ ಕೃತಿ ಕೊಡಗಿನ ಚಿತ್ರಶಿಲ್ಪ ಕಲಾವಿದ ಮತ್ತು ಲೇಖಕ ದುಬಾಯಿಯ ಬಗ್ಗೆ ಪ್ರಕಟಿತ ಲೇಖನಗಳ ಸಂಕಲನ ‘ಕಡಲಾಚೆಯ ರಮ್ಯ ನೋಟ ದುಬಾಯಿ’ ಕೃತಿ ಮಂಗಳೂರು ಪತ್ರಿಕಾ ಭವನದಲ್ಲಿ ದಿನಾಂಕ 04 ಮಾರ್ಚ್ 2025ರಂದು ನಡೆದ ಸಮಾರಂಭದಲ್ಲಿ ಲೋಕಾರ್ಪಣೆಗೊಂಡಿತು. ಪ್ರಾರಂಭದಲ್ಲಿ ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಸರ್ವರನ್ನು ಸ್ವಾಗತಿಸಿ, ಪ್ರಸ್ತಾವಿಕ ಭಾಷಣದಲ್ಲಿ ಕೃತಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.

    ಕೃತಿ ಲೋಕಾರ್ಪಣೆ ಮಾಡಿದ ಯು.ಎ.ಇ. ಬಂಟ್ಸ್ ಅಧ್ಯಕ್ಷರಾದ ಶ್ರೀ ವಕ್ವಾಡಿ ಪ್ರವೀಣ್ ಶೆಟ್ಟಿಯವರು “ದುಬಾಯಿಯಲ್ಲಿ ಕನ್ನಡ ಪುಸ್ತಕವನ್ನು ತನ್ನದೇ ಆದ ಶೈಲಿಯಲ್ಲಿ ರಚಿಸಿ ದುಬಾಯಿಯಲ್ಲಿರುವ ವಾಸ್ತು ಶಿಲ್ಪಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಹಾಗೂ ಅತ್ಯಂತ ಸುಂದರವಾದ ವರ್ಣಚಿತ್ರದೊಂದಿಗೆ ಓದುಗರಿಗೆ ಮುಟ್ಟಿಸುವಲ್ಲಿ ಕೃತಿ ಯಶಸ್ವಿಯಾಗಿದೆ” ಎಂದು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

    ಚಿತ್ರಶಿಲ್ಪ ಕಲಾವಿದ, ಕ್ರಿಯಾತ್ಮಕ ಕಲಾನಿರ್ದೇಶಕರು ಹಾಗೂ ಲೇಖಕರಾಗಿರುವ ಬಿ.ಕೆ. ಗಣೇಶ್ ರೈಯವರು ತಮ್ಮ ಲೇಖನಗಳನ್ನು ಬರೆದು ಪ್ರಕಟಿಸಲು ಅವಕಾಶಗಳನ್ನು ಕಲ್ಪಿಸಿರುವ ಎಲ್ಲಾ ಮಾಧ್ಯಮಗಳಿಗೆ ತನ್ನ ಕೃತಜ್ಜತೆಗಳನ್ನು ಸಲ್ಲಿಸಿ, ತನ್ನ ಪ್ರತಿಭೆಗೆ ಸದಾ ಪ್ರೋತ್ಸಾಹ ಬೆಂಬಲ ನೀಡಿರುವ ಸ್ನೇಹಿತರು, ಸಂಘ ಸಂಸ್ಥೆಗಳಿಗೆ ಧನ್ಯವಾದಗಳನ್ನು ಸಲ್ಲಿಸಿ, ಕೃತಿಯ ಮೊದಲ ಪ್ರತಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಗೆ ಅರ್ಪಣೆ ಮಾಡಿ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಶುಭಾಶೀರ್ವಾದ ಪಡೆದು ಹಾಗೂ ಮೂಡಬಿದ್ರೆ ಆಳ್ವಾಸ್ ವಿದ್ಯಾಸಂಸ್ಥೆಯ ಮುಖ್ಯಸ್ಥರಾದ ಡಾ. ಮೋಹನ್ ಆಳ್ವರವರಿಂದ ಶುಭ ಸಂದೇಶವನ್ನು ಪಡೆದು ಗಣ್ಯಾತಿ ಗಣ್ಯರ ಸಮ್ಮುಖದಲ್ಲಿ ಲೋಕಾರ್ಪಣೆಯಾಗಿರುವುದಕ್ಕೆ ತಮ್ಮ ಕನಸು ನನಸಾಗಿದೆ ಎಂದು ಸರ್ವರಿಗೂ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

    ‘ಕಡಲಾಚೆಯ ರಮ್ಯ ನೋಟ ದುಬಾಯಿ’ ಕೃತಿಗೆ ಮುನ್ನುಡಿಯನ್ನು ಬರೆದಿರುವ ಡಾ. ಅರುಣಾ ನಾಗರಾಜ್ ರವರು “ಕೃತಿಯಲ್ಲಿರುವ ಒಂದೊಂದು ಲೇಖನಗಳು ಸಂಪೂರ್ಣ ಮಾಹಿತಿಯೊಂದಿಗೆ ಓದುಗರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಕೈಯಲ್ಲಿ ಈ ಒಂದು ಕೃತಿ ಇದ್ದರೆ ಸಮಗ್ರ ದುಬಾಯಿಯನ್ನು ಸಂಪೂರ್ಣವಾಗಿ ಪ್ರವಾಸ ಮಾಡಿಕೊಂಡು ಬಂದಿರುವ ಅನುಭವಾಗುತ್ತದೆ” ಎಂದು ತಮ್ಮ ಮೆಚ್ಚುಗೆಯನ್ನು ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಶ್ರೀ ಶ್ರೀನಿವಾಸ್ ನಾಯಕ್ ಇಂದಾಜೆ ವಿದೇಶದ ನೆಲದಲ್ಲಿ ಕನ್ನಡದ ಕಂಪನ್ನು ಪಸರಿಸುತ್ತಿರುವ ಗಣೇಶ್ ರೈಯವರ ಸಾಧನೆಗಳನ್ನು ಶ್ಲಾಘಿಸಿದರು.

    ಪುಸ್ತಕ ಬಿಡುಗಡೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ಸರ್ವೋತ್ತಮ ಶೆಟ್ಟಿಯವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ “ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಗಣೇಶ್ ರೈಯವರು ಶಾರ್ಜಾ ಕರ್ನಾಟಕ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಯು.ಎ.ಇ.ಯಲ್ಲಿರುವ ಕರ್ನಾಟಕ ಪರ ಸಂಘಟನೆಗಳಲ್ಲಿ, ಕರ್ನಾಟಕದ ಕಲೆ ಭಾಷೆ ಸಂಸ್ಕೃತಿಯನ್ನು ಕಳೆದ ಎರಡುವರೆ ದಶಕಗಳಿಂದ ನಿರಂತರವಾಗಿ ಮಾಡಿಕೋಡು ಬರುತ್ತಿದ್ದು, ಶಿಲ್ಪಿಯಾಗಿ, ಚಿತ್ರಕಾರರಾಗಿ, ಕಾರ್ಯಕ್ರಮ ನಿರೂಪಕರಾಗಿ, ಸಮಾಜ ಸೇವಕರಾಗಿ, ಬಹುಮುಖ ಪ್ರತಿಭೆಯ ವ್ಯಕ್ತಿತ್ವವನ್ನು ಹೊಂದಿರುವ ಗಣೇಶ್ ರೈಯವರು ಲೇಖಕ ಬರಹಗಾರರಾಗಿ ನೂರಾರು ಗಣ್ಯರ ಸಂದರ್ಶನ ಲೇಖನಗಳನ್ನು ಪ್ರಕಟಿಸುತ್ತಾ ಇದೀಗ ದುಬಾಯಿಯ ಸಂಪೂರ್ಣ ಚಿತ್ರಣವಿರುವ ‘ಕಡಲಾಚೆಯ ರಮ್ಯ ನೋಟ ದುಬಾಯಿ’ ಕೃತಿಯನ್ನು ಪ್ರಕಟಿಸಿರುವುದು ದುಬಾಯಿಯಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರಿಗೆ ಸಂದಿರುವ ಗೌರವ” ಎಂದು ಗಣೇಶ್ ರೈಯವರ ಸಾಧನೆಗೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಶ್ರೀಮತಿ ಸುರೇಖಾ ಯಳವಾರರವರು ಕಾರ್ಯಕ್ರಮವನ್ನು ಅತ್ಯಂತ ಸೊಗಸಾಗಿ ನಿರೂಪಣೆ ಮಾಡಿ ಕೊನೆಯಲ್ಲಿ ವಂದನಾರ್ಪಣೆಯನ್ನು ಸಲ್ಲಿಸಿದರು.

    Book release Literature
    Share. Facebook Twitter Pinterest LinkedIn Tumblr WhatsApp Email
    Previous Articleವಿಶೇಷ ಲೇಖನ – ಗಂಧರ್ವಾಂಶ ಸಂಭೂತ ಆರ್. ಎಸ್. ಕೇಶವಮೂರ್ತಿ
    Next Article ಯಕ್ಷದೇಗುಲದಲ್ಲಿ ಪ್ರಾರಂಭಗೊಂಡ ‘ಯಕ್ಷ ಪಯಣ’
    roovari

    Add Comment Cancel Reply


    Related Posts

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    ಹಾಸನದ ಸಾಹಿತ್ಯ ಸಂಘಟನೆಯಿಂದ 330ನೇ ಮನೆ ಮನೆ ಕವಿಗೋಷ್ಠಿ | ಜೂನ್ 01

    May 29, 2025

    ರಾಜೇಂದ್ರ ಬಿ. ಶೆಟ್ಟಿ ರಚಿಸಿರುವ ಪುಸ್ತಕಗಳ ಅನಾವರಣ ಸಮಾರಂಭ | ಜೂನ್ 01

    May 29, 2025

    ಕ.ಸಾ.ಪ.ದಿಂದ ಮಂಗಳೂರು ಆಕಾಶವಾಣಿಯ ಸಹಾಯಕ ನಿರ್ದೇಶಕ ಸೂರ್ಯನಾರಾಯಣ ಭಟ್ ಸನ್ಮಾನ

    May 29, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.