ಮಂಗಳೂರು : ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಡಾ. ಕೆ.ಆರ್. ಶೆಟ್ಟಿ ತುಳು ಅಧ್ಯಯನ ಕೇಂದ್ರ ಹಾಗೂ ಮಂಗಳೂರಿನ ಆಕೃತಿ ಆಶಯ ಪಬ್ಲಿಕೇಶನ್ಸ್ ಸಹಯೋಗದಲ್ಲಿ ‘ನಂದಾವರ ನೆಂಪು’ ಡಾ. ವಾಮನ ನಂದಾವರರ ಸಮಗ್ರ ತುಳು ಸಂಪುಟ 3 ಮತ್ತು 4 ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ದಿನಾಂಕ 29 ಆಗಸ್ಟ್ 2026ರಂದು ಬೆಳಿಗ್ಗೆ ಗಂಟೆ 10-00ಕ್ಕೆ ದೇರಳಕಟ್ಟೆಯ ನಿಟ್ಟೆ ವಿ.ವಿ. ಪನೀರ್ ಕ್ಯಾಂಪಸ್‌ನಲ್ಲಿ ನಡೆಯಲಿದೆ.
ವಿದ್ವಾಂಸ ಪ್ರೊ. ಬಿ.ಎ. ವಿವೇಕ ರೈ ಇವರು ಕೃತಿ ಬಿಡುಗಡೆ ಮಾಡಲಿದ್ದು, ವಿದ್ವಾಂಸ ಕೆ. ಚಿನ್ನಪ್ಪಗೌಡ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಕುಲಪತಿ ಪ್ರೊ. ಎಂ.ಎಸ್. ಮೂಡಿತ್ತಾಯ ಅಧ್ಯಕ್ಷತೆ ವಹಿಸುವರು. ಪ್ರೊ. ಸತೀಶ್ ಕುಮಾರ್ ಭಂಡಾರಿ, ಸಮಗ್ರ ಸಂಪುಟಗಳ ಸಂಪಾದಕಿ ಚಂದ್ರಕಲಾ ನಂದಾವರ ಉಪಸ್ಥಿತರಿರುವರು.

