ಹಾಸನ : ಪ್ರತಿಮಾ ಟ್ರಸ್ಟ್ (ರಿ.) ಚನ್ನರಾಯಪಟ್ಟಣ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಹಾಸನ ಇವರ ಸಹಯೋಗದಲ್ಲಿ ಉಮೇಶ್ ತೆಂಕನಹಳ್ಳಿಯವರ ಅನುಭವದ ಅಂತರಾಳದ ಕೃತಿ ‘ಕಪ್ಪು ಹಳ್ಳಿನ ಕತೆ’ ಕಾದಂಬರಿಯ ಎರಡನೇ ಆವೃತ್ತಿ ಬಿಡುಗಡೆ ಕಾರ್ಯಕ್ರಮವು ದಿನಾಂಕ 22 ನವೆಂಬರ್ 2025ರಂದು ಬೆಳಿಗ್ಗೆ 10-30 ಗಂಟೆಗೆ ಹಾಸನದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ನಡೆಯಲಿದೆ.
ಬೆಂಗಳೂರಿನ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಡಾ. ನಿಶ್ಚಲಾನಂದನಾಥ ಸ್ವಾಮೀಜಿ ಇವರ ದಿವ್ಯ ಸಾನಿಧ್ಯದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಆರ್.ಪಿ. ವೆಂಕಟೇಶ ಮೂರ್ತಿ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಹಾಸನ ಕನ್ನಡ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷರಾದ ಡಾ. ಎಚ್.ಎಲ್. ಮಲ್ಲೇಶ ಗೌಡ ಮತ್ತು ಸಾಹಿತಿ ಶ್ರೀಮತಿ ದಯಾ ಗಂಗನಘಟ್ಟ ಇವರು ಕೃತಿ ಕುರಿತು ಮಾತನಾಡಲಿದ್ದಾರೆ.

