ಮಂಗಳೂರು : ಜಾಗೃತಿ ಟ್ರಸ್ಟ್ (ರಿ.) ಬೆಂಗಳೂರು ಇದರ ವತಿಯಿಂದ ಬಿ.ಎಸ್. ಮಂಜುನಾಥ್ ಇವರ ಪುಸ್ತಕ ಬಿಡುಗಡೆ, ಕವಿಗೋಷ್ಠಿ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 23 ನವೆಂಬರ್ 2025ರಂದು ಬೆಳಗ್ಗೆ 10-00 ಗಂಟೆಗೆ ಮಂಗಳೂರಿನ ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಸಭಾ ಕಾರ್ಯಕ್ರಮದ ಬಳಿಕ ಗಡಿನಾಡ ಸಾಂಸ್ಕೃತಿಕ ಕಲಾ ವೇದಿಕೆ (ರಿ.) ಕಾಸರಗೋಡು ಇದರ ಕಲಾವಿದರಿಂದ ‘ಸಾಂಸ್ಕೃತಿಕ ಕಲಾ ವೈಭವ’ ಪ್ರಸ್ತುತಗೊಳ್ಳಲಿದೆ.

