ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆ ಮಂಗಳ ಗಂಗೋತ್ರಿ ಇವರ ಆಶ್ರಯದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ 07 ಜನವರಿ 2026ರಂದು ಅಪರಾಹ್ನ 2-30 ಗಂಟೆಗೆ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ಪ್ರೊ. ಬಿ.ಎ. ವಿವೇಕ ರೈ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜಶ್ರೀ ಟಿ. ರೈ ಪೆರ್ಲ ಇವರ ‘ನೀ ಮಾಯೆಯೋ ನಿನ್ನೊಳು ಮಾಯೆಯೋ’ ಎಂಬ ಕಥಾ ಸಂಕಲನ ಲೋಕಾರ್ಪಣೆಗೊಳ್ಳಲಿದೆ.
ಮಂಗಳೂರು ವಿಶ್ವವಿದ್ಯಾನಿಲಯ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಪ್ರೊ. ನಾಗಪ್ಪ ಗೌಡ ಆರ್. ಇವರು ಕೃತಿ ಬಿಡುಗಡೆ ಮಾಡಲಿದ್ದು, ಮಂಗಳೂರು ವಿಶ್ವವಿದ್ಯಾನಿಲಯ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕರಾದ ಪ್ರೊ. ಸೋಮಣ್ಣ ಹೊಂಗಳ್ಳಿ ಇವರು ಕೃತಿ ಪರಿಚಯ ಮಾಡಲಿದ್ದಾರೆ.

