ಬೆಂಗಳೂರು : ಕಿರಂ ಪ್ರಕಾಶನ ಇದರ ವತಿಯಿಂದ ಹಾಗೂ ಡಾ. ಮೇಮುಗಲ್ ನಾರಾಯಣಸ್ವಾಮಿ ಸಾಂಸ್ಕೃತಿಕ ಪ್ರತಿಷ್ಠಾನ ಭಾಗವತರು ಸಾಂಸ್ಕೃತಿಕ ಸಂಘಟನೆ ಇದರ ಸಹಕಾರದೊಂದಿಗೆ ಡಾ. ನಾಗರಾಜು ಎಂ. ಇವರ ‘ನೆಲದ ನುಡಿಕಾರ’ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ 10 ಆಗಸ್ಟ್ 2026ರಂದು ಸಂಜೆ 6-00 ಗಂಟೆಗೆ ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಲಪತಿಗಳಾದ ಪ್ರೊ. ಬಿ. ರಮೇಶ್ ಇವರ ವಹಿಸಲಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಇವರು ಉದ್ಘಾಟನೆ ಮಾಡಲಿದ್ದಾರೆ. ಸಂಜೆ 5-00 ಗಂಟೆಗೆ ಜನಪದ, ಸುಗಮ ಸಂಗೀತ ಹಾಗೂ ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ.

