ಪುತ್ತೂರು : ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ವಿವೇಕಾನಂದ ಸಂಶೋಧನ ಕೇಂದ್ರ, ಡಾ. ಕೆ. ಶಿವರಾಮ ಕಾರಂತ ಅಧ್ಯಯನ ಕೇಂದ್ರ, ಸೌರಭ ಪ್ರಸಾರಾಂಗ ಮತ್ತು ಐಕ್ಯೂಎಸಿ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಾಲಯ ಬೆಟ್ಟಂಪಾಡಿ ಇದರ ಸಹಯೋಗದಲ್ಲಿ ಡಾ. ಡಿ. ಸದಾಶಿವ ಭಟ್ಟ ಪಳ್ಳುಮನೆ ನಿಡಳ್ಳಿ ಇವರ ಕೃತಿ ‘ಋಣಮುಕ್ತಿ ಮತ್ತು ಅಮೃತತ್ವದೆಡೆಗೆ ಗೀತ ರೂಪಕಗಳು’ ಬಿಡುಗಡೆ ಸಮಾರಂಭವು ದಿನಾಂಕ 22 ಆಗಸ್ಟ್ 2026ರ ಶನಿವಾರದಂದು ಬೆಟ್ಟಂಪಾಡಿಯ ಶ್ರೀ ಮಹಾಲಿಂಗೇಶ್ವರ ದೇವಾಲಯದ ಬಿಲ್ವಶ್ರೀ ಸಭಾಂಗಣದಲ್ಲಿ ಜರಗಲಿದೆ.
ವಿಶ್ರಾಂತ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ ಈ ಕೃತಿ ಬಿಡುಗಡೆ ಮಾಡಲಿದ್ದು, ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಸಂಚಾಲಕ, ನ್ಯಾಯವಾದಿ, ಕ್ಯಾಂಪ್ಕೋ ಲಿ. ನಿರ್ದೇಶಕ, ಮುರಳಿಕೃಷ್ಣ ಕೆ.ಎನ್. ಭಾಗವಹಿಸಲಿದ್ದಾರೆ. ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಅಧ್ಯಕ್ಷತೆ ವಹಿಸಲಿದ್ದಾರೆ. ದೇವಸ್ಥಾನದ ಅನುವಂಶಿಕ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್, ಮೊಕ್ತೇಸರ ವಿನೋದ್ ಕುಮಾರ್ ರೈ ಗೌರವ ಉಪಸ್ಥಿತಿ ವಹಿಸಲಿದ್ದಾರೆ.
