ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ ಮತ್ತು ಸಪ್ನ ಬುಕ್ ಹೌಸ್ ಬೆಂಗಳೂರು ಇವರ ಸಹಯೋಗದಲ್ಲಿ “ವಿಶ್ವಸಂಸ್ಕೃತಿಯ ಮಹಾಯಾನ” ಸಂಪುಟ 2 ಗದ್ಯ ಮಹಾಕಾವ್ಯ ಬಿಡುಗಡೆ ಸಮಾರಂಭವು ದಿನಾಂಕ 12 ಜನವರಿ 2025ರಂದು ಬೆಳಿಗ್ಗೆ 11-00 ಗಂಟೆಗೆ ಮೂಡುಬಿದಿರೆಯ ವಿದ್ಯಾಗಿರಿ ಆಳ್ವಾಸ್ ಶಿಕ್ಷಣ ಸಂಸ್ಥೆ ಆವರಣದಲ್ಲಿರುವ ಡಾ. ವಿ.ಎಸ್. ಆಚಾರ್ಯ ಸಭಾಭವನದಲ್ಲಿ ನಡೆಯಲಿದೆ.
ಮೂಡುಬಿದಿರೆ ಜೈನ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಇವರ ದಿವ್ಯ ಸಾನ್ನಿಧ್ಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು. ನಿವೃತ್ತ ಆಂಗ್ಲ ಪ್ರಾಧ್ಯಾಪಕರಾದ ಪ್ರೊ. ಸಿ. ನಾಗಣ್ಣ ಇವರು ಗ್ರಂಥ ಬಿಡುಗಡೆ ಮಾಡಲಿದ್ದು, ಗ್ರಂಥದ ಕುರಿತು ಖ್ಯಾತ ಸಾಹಿತಿ ಡಾ. ಕಬ್ಬಿನಾಲೆ ವಸಂತ ಭಾರಧ್ವಾಜ ಇವರು ಮಾತನಾಡಲಿದ್ದಾರೆ.