ಮಡಿಕೇರಿ : ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ಕನಕ ಸಾಹಿತ್ಯ/ ದಾಸ ಸಾಹಿತ್ಯ/ತತ್ವಪದ ಸಾಹಿತ್ಯ ಕುರಿತು ಸಂಶೋಧನೆ ಅಥವಾ ವಿಮರ್ಶಾ ಗ್ರಂಥವೊಂದಕ್ಕೆ ಬಹುಮಾನ ನೀಡುವ ಯೋಜನೆಯನ್ನು ರೂಪಿಸಿದೆ.
2024ರ ಸಾಲಿನಲ್ಲಿ ಪ್ರಕಟವಾದ ಪ್ರಥಮ ಮುದ್ರಣದ ಗ್ರಂಥವನ್ನು ಬಹುಮಾನಕ್ಕೆ ಪರಿಗಣಿಸಲಾಗುವುದು. ಗ್ರಂಥ
ಬಹುಮಾನವು ರೂಪಾಯಿ 25000 ಸಾವಿರದ ನಗದು ಬಹುಮಾನ ಒಳಗೊಂಡಿಗೆ. ಪ್ರಶಸ್ತಿಗೆ ಗ್ರಂಥ ಲೇಖಕರು, ಗ್ರಂಥ ಪ್ರಕಾಶಕರು 10 ಸೆಪ್ಟೆಂಬರ್ 2025ರ ಒಳಗಾಗಿ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಇಲ್ಲಿಗೆ ಅರ್ಜಿಯನ್ನು ಅಂಚೆ/ ಕೊರಿಯರ್ ಅಥವಾ ಖುದ್ದಾಗಿ ಸಲ್ಲಿಸಬಹುದು. ಅರ್ಜಿ ಸಮೂನೆಯನ್ನು ವೆಬ್‍ಸೈಟ್ https://kanakadasaresearchcnter.karnataka.gov.in ನಲ್ಲಿ ಅಪಲೋಡ್ ಮಾಡಲಾಗಿದ್ದು, ಅರ್ಜಿಯನ್ನು ವೆಬ್‍ಸೈಟ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ.6364529319 ನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Previous Articleಧಾರವಾಡದ ಮನೋಹರ ಗ್ರಂಥ ಮಾಲಾದಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ | ಜುಲೈ 26