Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಸೋಮೇಶ್ವರ ದೇವಸ್ಥಾನದಲ್ಲಿ ಹಿರಿಯ ಕವಿಗಳ ಕವಿಗೋಷ್ಠಿ

    February 20, 2026

    ಕನ್ನಡ ಭವನದಲ್ಲಿ ‘ಕಾಸರಗೋಡು-ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026’ | ಫೆಬ್ರವರಿ 22

    February 20, 2026

    ‘ಸೇವಾ ಭೂಷಣ ಪ್ರಶಸ್ತಿ’ಗೆ ಹಿರಿಯ ಲೇಖಕ ಯು. ಶ್ರೀಧರ್ ಆಯ್ಕೆ

    February 19, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಮನೆಗೊಂದು ಗ್ರಂಥಾಲಯ’ ಯೋಜನೆಯ ಕರಪತ್ರ ಬಿಡುಗಡೆ
    Literature

    ‘ಮನೆಗೊಂದು ಗ್ರಂಥಾಲಯ’ ಯೋಜನೆಯ ಕರಪತ್ರ ಬಿಡುಗಡೆ

    February 4, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದಲ್ಲಿ ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವದ ಯೋಜನೆಯಾದ ‘ಮನೆಗೊಂದು ಗ್ರಂಥಾಲಯ’ ಯೋಜನೆಯ ಕರಪತ್ರ ಬಿಡುಗಡೆ ಕಾರ್ಯಕ್ರಮವು ದಿನಾಂಕ 02 ಫೆಬ್ರವರಿ 2025ರಂದು ನಡೆಯಿತು.

    ಈ ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಮೈಸೂರು ಇವರು ಲಕ್ಷ ಗ್ರಂಥಾಲಯ ಯೋಜನೆ, ಮನೆಗೊಂದು ಗ್ರಂಥಾಲಯದ ರೂಪುರೇಷೆಯನ್ನು ವಿವರಿಸುತ್ತಾ “ಕನ್ನಡ ಸಾಹಿತ್ಯಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದೆ. ಎಂಟು ಜ್ಞಾನಪೀಠ ಪ್ರಶಸ್ತಿಯನ್ನು ಕನ್ನಡ ಸಾಹಿತ್ಯ ಪಡೆದಿದೆ. ಈ ಹೆಗ್ಗಳಿಕೆಯ ಜೊತೆಗೆ ಕನ್ನಡ ಪುಸ್ತಕಗಳನ್ನು ಖರೀದಿಸಿ, ಓದುವವರ ಕೊರತೆಯೂ ಇದೆ. ಈ ಹಿನ್ನೆಲೆಯಲ್ಲಿ ಸುಮಾರು ಒಂದು ಲಕ್ಷ ಮನೆಗಳಲ್ಲಿ ತಲಾ ಒಂದು ಲಕ್ಷ ಮೌಲ್ಯದ ಪುಸ್ತಕ ಇರುವ ಗ್ರಂಥಾಲಯ ಸೃಷ್ಟಿಸುವ ಉದ್ದೇಶದಿಂದ ಈ ಯೋಜನೆ ಅನುಷ್ಠಾನಗೊಳ್ಳುತ್ತಿದೆ. ಕನ್ನಡಿಗರಲ್ಲಿ ಪುಸ್ತಕಗಳನ್ನು ಖರೀದಿಸಿ ಓದುವ ಮನೋಭಾವ ಜಾಗೃತವಾಗಬೇಕು. ಕನ್ನಡ ಭಾಷೆಯಲ್ಲಿ ಅನೇಕ ಉತ್ತಮ ಬರಹಗಾರರಿದ್ದು, ಈ ನಾಡಿನಾದ್ಯಂತ ಈ ಯೋಜನೆಗೆ ಉತ್ತಮ ಸ್ಪಂದನೆ ದೊರೆತಿದೆ” ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಕನ್ನಡ ಭವನ ಗ್ರಂಥಾಲಯದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್, ಕ.ಸಾ.ಪ. ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ, ಪ್ರಕಾಶ್ಚಂದ್ರ ಕಾಸರಗೋಡು, ಸಂಧ್ಯಾರಾಣಿ ಟೀಚರ್, ಪ್ರೊ. ಪಿ.ಎನ್. ಮೂಡಿತ್ತಾಯ, ಪ್ರೊ. ಎ. ಶ್ರೀನಾಥ್, ತೆಕ್ಕೆಕೆರೆ ಶಂಕರನಾರಾಯಣ ಭಟ್, ಬಾಲ ಮಧುರಕಾನನ, ವಿ.ಬಿ. ಕುಳಮರ್ವ, ಶ್ರೀಹರಿ ಭಟ್ ಪೆಲ್ತಾಜೆ, ವಿರಾಜ್ ಅಡೂರು, ವಸಂತ ಕೆರೆಮನೆ, ಶಾರದಾ ಮೊಳೆಯಾರ್, ಶ್ವೇತಾ ರಮೇಶ್ ಬೆಳ್ಳಿಪ್ಪಾಡಿ, ಪ್ರಭಾವತಿ ಕೆದಿಲಾಯ ಪುಂಡೂರು, ವಿಶಾಲಾಕ್ಷ ಪುತ್ರಕಳ ಮೊದಲಾದವರು ಉಪಸ್ಥಿತರಿದ್ದರು.

    Literature
    Share. Facebook Twitter Pinterest LinkedIn Tumblr WhatsApp Email
    Previous Articleಮುರ್ಡೇಶ್ವರದಲ್ಲಿ ‘ಯಕ್ಷಸಪ್ತಾಹ ಮುರುಡೇಶ್ವರ – 2025’ | ಫೆಬ್ರವರಿ 08ರಿಂದ 14
    Next Article ಪ್ರತಿಮಾ ಟ್ರಸ್ಟ್ ಚನ್ನರಾಯಪಟ್ಟಣದ ‘ಪ್ರತಿಮೋತ್ಸವ – 2025’
    roovari

    Add Comment Cancel Reply


    Related Posts

    ಶ್ರೀ ಸೋಮೇಶ್ವರ ದೇವಸ್ಥಾನದಲ್ಲಿ ಹಿರಿಯ ಕವಿಗಳ ಕವಿಗೋಷ್ಠಿ

    February 20, 2026

    ಕನ್ನಡ ಭವನದಲ್ಲಿ ‘ಕಾಸರಗೋಡು-ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026’ | ಫೆಬ್ರವರಿ 22

    February 20, 2026

    ‘ಸೇವಾ ಭೂಷಣ ಪ್ರಶಸ್ತಿ’ಗೆ ಹಿರಿಯ ಲೇಖಕ ಯು. ಶ್ರೀಧರ್ ಆಯ್ಕೆ

    February 19, 2026

    ಪಿ.ವಿ. ಪ್ರದೀಪ್ ಕುಮಾರ್ ಸಾರಥ್ಯದಲ್ಲಿ ‘ಕನ್ನಡ ಕಂಪು ಸರಣಿ -9’

    February 19, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.