ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಕೊಡಗು ಪತ್ರಕರ್ತರ ಸಂಘ (ರಿ.) ಸಹಯೋಗದಲ್ಲಿ ದಿನಾಂಕ 15 ಮೇ 2025ರ ಗುರುವಾರ ಸಂಜೆ 5-30 ಗಂಟೆಗೆ ಮಡಿಕೇರಿಯ ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಸಭಾಂಗಣದಲ್ಲಿ ಕೊಡಗಿನ ಪತ್ರಿಕಾರಂಗದ ಭೀಷ್ಮ, ಶಕ್ತಿ ಪತ್ರಿಕೆಯ ಸ್ಥಾಪಕ ಸಂಪಾದಕ ದಿ. ಬಿ.ಎಸ್. ಗೋಪಾಲಕೃಷ್ಣರವರ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.
ಈ ದತ್ತಿ ಪ್ರಶಸ್ತಿ ಕಾರ್ಯಕ್ರಮವನ್ನು ಹಿರಿಯರಾದ ಮಾಜಿ ಸಚಿವ ಎಂ.ಸಿ. ನಾಣಯ್ಯ ಇವರು ಉದ್ಗಾಟಿಸಲಿದ್ದು, ಶ್ರೀಮತಿ ರಾಜಲಕ್ಷ್ಮಿ ಗೋಪಾಲಕೖಷ್ಣ ಇವರು ತ್ರಿಭಾಷಾ ಸಾಹಿತಿ ನಾಗೇಶ್ ಕಾಲೂರು ಇವರಿಗೆ ದತ್ತಿ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ದತ್ತಿದಾನಿ ಮತ್ತು ಶಕ್ತಿ ಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ. ಅನಂತಶಯನ, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ., ಮಡಿಕೇರಿ ತಾಲೂಕು ಕ.ಸಾ.ಪ. ಅಧ್ಯಕ್ಷೆ ಶ್ರೀಮತಿ ಕಡ್ಲೇರ ತುಳಸಿ ಮೋಹನ್ ಉಪಸ್ಥಿತರಿರುತ್ತಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರು ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹ್ಮದ್ ರವರು ಕೋರಿದ್ದಾರೆ.