ಸುರತ್ಕಲ್ : ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ.) ಮತ್ತು ನಾಗರಿಕ ಸಲಹಾ ಸಮಿತಿ (ರಿ.) ಸುರತ್ಕಲ್ ಈ ಸಂಸ್ಥೆಗಳು ಜಂಟಿಯಾಗಿ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಪ್ರಸ್ತುತ ಪಡಿಸುವ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ಮತ್ತು ಭರತನಾಟ್ಯ ಕಾರ್ಯಕ್ರಮವನ್ನು ದಿನಾಂಕ 15 ಮಾರ್ಚ್ 2026ರಂದು ಸುರತ್ಕಲ್ಲಿನ ನಾಗಬನ ರೋಡ್ ಇಲ್ಲಿರುವ ಅನುಪಲ್ಲವಿಯ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಂಜೆ 5-00 ಗಂಟೆಗೆ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿಯಲ್ಲಿ ಉಡುಪಿಯ ಪ್ರಜ್ಞಾ ಅಡಿಗ ಇವರ ಹಾಡುಗಾರಿಕೆಗೆ ಪುತ್ತೂರಿನ ತನ್ಮಯೀ ಉಪ್ಪಂಗಳ ವಯೋಲಿನ್, ಬೆಂಗಳೂರಿನ ಪ್ರಹಲ್ಲದ್ ವರಹಸ್ವಾಮಿ ಮೃದಂಗಂನಲ್ಲಿ ಹಾಗೂ ಉಡುಪಿ ಕಾರ್ತಿಕ್ ಭಟ್ ಇನ್ನಂಜೆ ಇವರು ಖಂಜೀರದಲ್ಲಿ ಸಾಥ್ ನೀಡಲಿದ್ದಾರೆ. ಮಂಗಳೂರಿನ ರಶ್ಮಿ ಉಡುಪ ಇವರಿಂದ ಭರತನಾಟ್ಯ ಪ್ರದರ್ಶನ ನಡೆಯಲಿದೆ. ಉಡುಪಿ ಅಂಬಲಪಾಡಿಯ ಸರಿಗಮ ಸಂಗೀತ ವಿದ್ಯಾಲಯದ ವಿದುಷಿ ವಾರಿಜಾಕ್ಷಿ ಆರ್. ಭಟ್ ಇವರು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ಇದೇ ಸಂದರ್ಭದಲ್ಲಿ ವಿದ್ವಾನ್ ನಾಗೇಶ್ ಎ. ಬಪ್ಪನಾಡು ಇವರನ್ನು ಸನ್ಮಾನಿಸಲಾಗುವುದು. ಮಣಿ ಕೃಷ್ಣಸ್ವಾಮಿ ಆಕಾಡೆಮಿಯ ಕಾರ್ಯದರ್ಶಿಯಾದ ಪಿ. ನಿತ್ಯಾನಂದ ರಾವ್ ಹಾಗೂ ಸುರತ್ಕಲ್ ನಾಗರಿಕ ಸಲಹಾ ಸಮಿತಿ ಅಧ್ಯಕ್ಷರಾದ ಡಾ. ಕೆ. ರಾಜಮೋಹನ್ ರಾವ್ ತಮಗೆಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.

