Subscribe to Updates

    Get the latest creative news from FooBar about art, design and business.

    What's Hot

    ಸಂಗೀತ ಪರಿಷತ್ ವತಿಯಿಂದ ‘ನಾದಾಲಯ’ ಗೃಹ ಸಂಗೀತ ಕಛೇರಿ | ಮೇ 10

    May 7, 2026

    ಅಕಾಡೆಮಿ ಸಭಾಂಗಣದಲ್ಲಿ ‘ಕಾವ್ಯಾಂ ವ್ಹಾಳೊ- 14’ ಕೊಂಕಣಿ ಕವಿಗೋಷ್ಟಿ | ಮೇ 09

    May 7, 2026

    ಯಶಸ್ವೀ ಕಲಾವೃಂದದ ವತಿಯಿಂದ ಹೆರಿಯ ಮಾಸ್ಟರ್ ರಿಗೆ ಗೌರವ

    May 7, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಸುರತ್ಕಲ್ಲಿನಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ಮತ್ತು ನೃತ್ಯ ಕಾರ್ಯಕ್ರಮ
    Bharathanatya

    ಸುರತ್ಕಲ್ಲಿನಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ಮತ್ತು ನೃತ್ಯ ಕಾರ್ಯಕ್ರಮ

    May 7, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುರತ್ಕಲ್ : ಮಣಿ ಕೃಷ್ಣಸ್ವಾಮಿ ಅಕಾಡೆಮಿ ಮತ್ತು ಸುರತ್ಕಲ್ ನ ನಾಗರಿಕ ಸಲಹಾ ಸಮಿತಿಯ ಸಹಯೋಗದಲ್ಲಿ ಅನುಪಲ್ಲವಿಯ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ದಿನಾಂಕ 03 ಮೇ 2026ರಂದು ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ಮತ್ತು ನೃತ್ಯ ಕಾರ್ಯಕ್ರಮ ನಡೆಯಿತು.

    ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಂಗಳೂರಿನ ಸನಾತನ ನಾಟ್ಯಾಲಯದ ನಿರ್ದೇಶಕ ಚಂದ್ರಶೇಖರ ಶೆಟ್ಟಿ ಇವರು ಮಾತನಾಡಿ “ಶಾಸ್ತ್ರೀಯ ಸಂಗೀತ ಮತ್ತು ನೃತ್ಯಗಳ ಅಭ್ಯಾಸದಿಂದ ಸಂಸ್ಕಾರ, ಸಂಸ್ಕೃತಿ ಮತ್ತು ಪೌರಾಣಿಕ ಪ್ರಜ್ಞೆ ಮೂಡಲು ಸಾಧ್ಯವಿದೆ. ಎಳೆಯ ಕಲಾವಿದರಿಗೆ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಗಳು ಲಭ್ಯವಾಗುತ್ತಿದೆ. ಪೋಷಕರು ತಮ್ಮ ಮಕ್ಕಳಿಗೆ ಶಾಸ್ತ್ರೀಯ ಸಂಗೀತ ಮತ್ತು ನೃತ್ಯದ ಅಭಿರುಚಿ ಬೆಳೆಸಲು ಪ್ರೇರಣೆಯಾಗಬೇಕು” ಎಂದು ನುಡಿದರು.

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯ ಗೌರವಾಧ್ಯಕ್ಷ ಕರ್ಮಯೋಗಿ ಧರ್ಮದರ್ಶಿ ಹರಿಕೃಷ್ಣ ಪುನರೂರು ಯುವ ಕಲಾವಿದರಿಗೆ ಹೆಚ್ಚಿನ ಪ್ರೋತ್ಸಾಹ ಅಗತ್ಯ ಎಂದು ನುಡಿದು ಶುಭ ಕೋರಿದರು. ಮಣಿ ಕೃಷ್ಣಸ್ವಾಮಿ ಅಕಾಡೆಮಿಯ ಕಾರ್ಯದರ್ಶಿ ಪಿ. ನಿತ್ಯಾನಂದ ರಾವ್ ಮಾತನಾಡಿ “ಅವಿಭಜಿತ ದಕ್ಷಿಣ ಕನ್ನಡದ ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೆ ಗೌರವಯುತ ಪ್ರದರ್ಶನ ಅವಕಾಶಗಳನ್ನು ಕಲ್ಪಿಸಿಕೊಡಬೇಕು. ಸಂಗೀತ ಸಭಾಗಳು ಮತ್ತು ನೃತ್ಯ ಸಂಘಗಳು ಸಂಘಟಿತವಾಗಿ ಪ್ರಯತ್ನಿಸಬೇಕು” ಎಂದು ಅಗ್ರಹಿಸಿದರು.

    ವಿದುಷಿ ಶಾರದಾಮಣಿ ಶೇಖರ್, ವಿದ್ವಾನ್ ಚಂದ್ರಶೇಖರ ನಾವಡ, ಸಂಗೀತ ಪರಿಷತ್ತಿನ ಅಧ್ಯಕ್ಷ ಸುಬ್ರಮಣ್ಯ ರಾವ್ ಹೆಚ್. ಉಡುಪಿ ರಾಗ ಧನ ಸಂಸ್ಥೆಯ ಅರವಿಂದ ಹೆಬ್ಬಾರ್, ಗೋವಿಂದ ದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೃಷ್ಣ ಮೂರ್ತಿ, ವಿಭು ರಾವ್ ಉಪಸ್ಥಿತರಿದ್ದರು. ಉಡುಪಿಯ ಸುಮೇಧ ರಾವ್ ಇವರು ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಸಿಕೊಟ್ಟರು. ಶ್ರೀರಾಗ್ ಪಿ. ರಾವ್ ಉಡುಪಿ ವಯಲಿನ್ ನಲ್ಲಿ ಹಾಗೂ ಪ್ರಜ್ಞಾನ್ ನಾಯಕ್ ಉಡುಪಿ ಮೃದಂಗದಲ್ಲಿ ಸಹಕರಿಸಿದರು. ವಿದುಷಿ ಶಾರದಾಮಣಿ ಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ಇವರ ಶಿಷ್ಯೆ ಸಿಂಚನಾ ಎಸ್. ಕುಲಾಲ್ ಇವರಿಂದ ಏಕವ್ಯಕ್ತಿ ಭರತನಾಟ್ಯ ಪ್ರದರ್ಶನ ನಡೆಯಿತು.

    baikady bharatanatyam dance Music roovari
    Share. Facebook Twitter Pinterest LinkedIn Tumblr WhatsApp Email
    Previous Articleಉದಯೋನ್ಮುಖ ನೃತ್ಯಕಲಾವಿದೆ ಕುಮಾರಿ ಗೌರಿ ಕೃಷ್ಣ ರಂಗಪ್ರವೇಶ | ಮೇ 09
    Next Article ಬೇಕಲ್ ಗೋಕುಲಂ ಗೋಶಾಲೆಯಲ್ಲಿ ‘ವೈಶಾಖ ನಟನಂ’ ರಾಷ್ಟ್ರೀಯ ನೃತ್ಯೋತ್ಸವ ಉದ್ಘಾಟನೆ
    roovari

    Add Comment Cancel Reply


    Related Posts

    ಸಂಗೀತ ಪರಿಷತ್ ವತಿಯಿಂದ ‘ನಾದಾಲಯ’ ಗೃಹ ಸಂಗೀತ ಕಛೇರಿ | ಮೇ 10

    May 7, 2026

    ಅಕಾಡೆಮಿ ಸಭಾಂಗಣದಲ್ಲಿ ‘ಕಾವ್ಯಾಂ ವ್ಹಾಳೊ- 14’ ಕೊಂಕಣಿ ಕವಿಗೋಷ್ಟಿ | ಮೇ 09

    May 7, 2026

    ಯಶಸ್ವೀ ಕಲಾವೃಂದದ ವತಿಯಿಂದ ಹೆರಿಯ ಮಾಸ್ಟರ್ ರಿಗೆ ಗೌರವ

    May 7, 2026

    ಬೇಕಲ್ ಗೋಕುಲಂ ಗೋಶಾಲೆಯಲ್ಲಿ ‘ವೈಶಾಖ ನಟನಂ’ ರಾಷ್ಟ್ರೀಯ ನೃತ್ಯೋತ್ಸವ ಉದ್ಘಾಟನೆ

    May 7, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.